ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಬಂಧನಕ್ಕೆ ವಿಜಯಪುರದಲ್ಲಿ ಪ್ರಗತಿಪರರ ಖಂಡನೆ

Date:

ವಿದ್ಯಾರ್ಥಿಗಳ ಭವಿಷ್ಯ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅನ್ಯಾಯದ ವಿರುದ್ಧ ಕಳೆದ 21 ದಿನಗಳಿಂದ ಗಾಂಧಿವಾದಿ ಮಾರ್ಗದಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಶಿಕ್ಷಣ ತಜ್ಞ, ವಿಜ್ಞಾನಿ ಹಾಗೂ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ಭದ್ರತೆ ಮತ್ತು ಅನಾರೋಗ್ಯದ ನೆಪವೊಡ್ಡಿ, ದೆಹಲಿ ಪೊಲೀಸರ ಮೂಲಕ ಬಂಧಿಸಿರುವುದು ಖಂಡನೀಯ ಎಂದು ಪ್ರಗತಿಪರ ಹೋರಾಟಗಾರ ಬಾಬುರಾವ್ ಬೀರಕಬ್ಬಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ದೆಹಲಿಯ ಜಂತರ್ ಮಂತರ್‌ನಲ್ಲಿ ಹೋರಾಟನಿರತ ಶಿಕ್ಷಣ ತಜ್ಞ ಹಾಗೂ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿ, ವಾಂಗ್ಚುಕ್ ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಆಗ್ರಹಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

“ಸೋನಮ್ ಅವರನ್ನು ಕೂಡಲೇ ಬಿಡುಗಡೆಗೊಳಿಸಿ, ಶಾಂತಿಯುತ ಹೋರಾಟಕ್ಕೆ ಅವಕಾಶ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

ದಲಿತ ಸಂಘರ್ಷ ಸಮಿತಿಯ ಮುಖಂಡ ಚನ್ನು ಕಟ್ಟಿಮನಿ ಮಾತನಾಡಿ, “ದೇಶದಲ್ಲಿ ಇಷ್ಟೆಲ್ಲ ಬೆಳವಣಿಗೆಗಳು ನಡೆಯುತ್ತಿದ್ದರೂ ಪ್ರಧಾನಮಂತ್ರಿಗಳು ಮೌನ ವಹಿಸಿರುವುದು ಆತಂಕಕಾರಿ. ಈ ಹಿಂದೆ ಮನಮೋಹನ್ ಸಿಂಗ್ ಅವರನ್ನು ‘ಮೌನಿಬಾಬಾ’ ಎಂದು ಟೀಕಿಸಿದ್ದವರು ಈಗ ತಾವೇ ಮೌನವಾಗಿದ್ದಾರೆ. ವಿದ್ಯಾರ್ಥಿಗಳ ಆತ್ಮಹತ್ಯೆಗಳಂತಹ ಗಂಭೀರ ಘಟನೆಗಳ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸಬೇಕು” ಎಂದು ಆಗ್ರಹಿಸಿದರು.

ಸಿಐಟಿಯು ಮುಖಂಡ ಲಕ್ಷ್ಮಣ ಹಂದ್ರಾಳ ಮಾತನಾಡಿ, “ಹೋರಾಟವನ್ನು ಹತ್ತಿಕ್ಕುವ ಉದ್ದೇಶದಿಂದ ದೆಹಲಿಯಲ್ಲಿ ಆಡಳಿತಾತ್ಮಕ ಕ್ರಮಗಳನ್ನು ಕೈಗೊಂಡು ಬೆಳಗಿನ ಜಾವ ವಾಂಗ್ಚುಕ್ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ್ದು, ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡುವಂತೆ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕು” ಎಂದು ಒತ್ತಾಯಿಸಿದರು.

ನಿವೃತ್ತ ಜಂಟಿ ನಿರ್ದೇಶಕ ಸಿ ಬಿ ಪಾಟೀಲ ಮಾತನಾಡಿ, “ಪ್ರತಿಭಟನೆ ಮತ್ತು ಹೋರಾಟವು ಪ್ರಜಾಪ್ರಭುತ್ವದಲ್ಲಿ ನಾಗರಿಕರಿಗೆ ಸಂವಿಧಾನಬದ್ಧ ಹಕ್ಕಾಗಿದೆ. ಆ ಹಕ್ಕಿನ ಮೇಲೆಯೇ ನಿರ್ಬಂಧ ಹೇರಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ನೀಟ್ ಪರೀಕ್ಷೆಗೆ ಸಂಬಂಧಿಸಿದ ಅಕ್ರಮಗಳ ಕುರಿತು ಹೊಣೆಗಾರರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಹೋರಾಟಗಾರರ ಬಂಧನಕ್ಕೆ ಮುಂದಾಗಿರುವುದು ಸರಿಯಲ್ಲ” ಎಂದು ಅಭಿಪ್ರಾಯಪಟ್ಟರು.

ಪ್ರಭುಗೌಡ ಪಾಟೀಲ ಮಾತನಾಡಿ, “ರಾಷ್ಟ್ರದ ಪ್ರಥಮ ಪ್ರಜೆಯಾಗಿರುವ ರಾಷ್ಟ್ರಪತಿಗಳು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಸೋನಮ್ ವಾಂಗ್ಚುಕ್ ಅವರೊಂದಿಗೆ ಮಾತುಕತೆಗೆ ಕೇಂದ್ರ ಸರ್ಕಾರವನ್ನು ಪ್ರೇರೇಪಿಸಬೇಕು. ಶಾಂತಿಯುತ ಹೋರಾಟಕ್ಕೆ ಅವಕಾಶ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಭೂ ವಿವಾದಕ್ಕೆ ಕಾರಣವಾದ ಕಂದಾಯ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಿಸಿ

ಈ ಸಂದರ್ಭದಲ್ಲಿ ಹೆಚ್ ಟಿ. ಭರತಕುಮಾರ, ಅಕ್ರಮ್ ಮಾಶಾಳಕರ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.

ಪ್ರತಿಭಟನೆಯಲ್ಲಿ ಸುರೇಶ ಜೇಬಿ, ಬಾಬುರಾವ್ ಅಕ್ರಮ, ಸುರೇಶ ಬಿಜಾಪುರ, ಜಗದೇವ ಸೂರ್ಯವಂಶಿ, ಸಿದ್ರಾಮ ಹಿರೇಮಠ, ಗೀತಾ ಹೆಚ್., ಭೋಗೇಶ ಸೊಲ್ಲಾಪುರ, ಸಿದ್ದಲಿಂಗ ಬಾಗೇವಾಡಿ, ಶ್ರೀಕಾಂತ ಕೊಂಡಗೂಳಿ ಸೇರಿದಂತೆ ಅನೇಕರು‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಉಸ್ತುವಾರಿ ಸಚಿವರ ಕಾರ್ಯವೈಖರಿ ಬಗ್ಗೆ ಬೇಸರ; ಶಾಸಕ ಸ್ವರೂಪ್ ಪ್ರಕಾಶ್

ಜಿಲ್ಲೆಗೆ ಸಚಿವ ಶಿವಲಿಂಗೇಗೌಡರು ದೊಡ್ಡಮಂಡಿಗನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಂಬಂಧಪಟ್ಟ...

ಕೋಲಾರ | ರಾಸುಗಳ ವಿಮಾ ಮೊತ್ತ ₹80 ಸಾವಿರಕ್ಕೆ ಏರಿಕೆ: ಹಸು ಕಳೆದುಕೊಂಡ ರೈತರಿಗೆ ನೆರವು

ರಾಸುಗಳ ವಿಮಾ ಸೌಲಭ್ಯದ ಮೊತ್ತವನ್ನು ₹60 ಸಾವಿರದಿಂದ ₹80 ಸಾವಿರಕ್ಕೆ ಹೆಚ್ಚಿಸಲಾಗಿದ್ದು,...

ಹಾಸನ | ರಾಜ್ಯದ ಹಲವು ಕಡೆ ಮಳೆ ಮುನ್ಸೂಚನೆ 

ನಾಳೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ. ಹಿಂಗಾರು ಚುರುಕಾಗಿರುವ...