ಬೆಂಗಳೂರು-ವಿಜಯಪುರಕ್ಕೆ ವಿಶೇಷ ರೈಲು: ಕಾಯಮಾತಿಗೆ ಎಂ ಬಿ ಪಾಟೀಲರ ಆಗ್ರಹ

Date:

ಕ್ರಿಸ್‌ಮಸ್‌ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲು ಬಿಟ್ಟಿರುವುದು ಸ್ವಾಗತಾರ್ಹವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಕಾಯಂ ರೈಲು ಸೇವೆಯಾಗಿ ಪರಿವರ್ತಿಸಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಆಗ್ರಹಿಸಿದ್ದಾರೆ.

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಬೆಂಗಳೂರಿನಿಂದ ವಿಜಯಪುರಕ್ಕೆ ಈ ಎರಡೂ ಬೈಪಾಸ್ ಮೂಲಕವೇ ರೈಲು ಸಾಗುವಂತೆ ಮಾಡಬೇಕೆಂದು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಈ‌ ನಿಟ್ಟಿನಲ್ಲಿ ನೈರುತ್ಯ ರೈಲ್ವೆ ಅಧಿಕಾರಿಗಳ ಜತೆ ಹಲವು ಸಭೆಗಳನ್ನು ನಡೆಸಲಾಗಿದೆ. ನಮ್ಮ ಪ್ರಯತ್ನಕ್ಕೆ ವಿಶೇಷ ರೈಲಿನ ರೂಪದಲ್ಲಿ ಮೊದಲ ಯಶಸ್ಸು ಸಿಕ್ಕಿರುವುದು ಸಂತಸ ತಂದಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಬೈಪಾಸ್ ಮೂಲಕ ಚಲಿಸಿದ್ದ ಕಾರಣಕ್ಕೆ ಎರಡೂ ಕಡೆ ಎಂಜಿನ್ ಬದಲಿಸುವ ಪ್ರಮೇಯ ಬಂದಿಲ್ಲ. ಬಾಗಲಕೋಟೆ, ವಿಜಯಪುರ ಕಡೆಗೆ ಹೋಗುವ ಎಲ್ಲ ರೈಲುಗಳನ್ನು ಇದೇ ರೀತಿ ಬೈಪಾಸ್ ಮೂಲಕ ಸಂಚರಿಸುವಂತೆ‌ ಮಾಡಿದರೆ ಪ್ರಯಾಣದ ಅವಧಿ ಕಡಿಮೆ‌ ಮಾಡಬಹುದು ಎಂಬುದು ನನ್ನ ನಿಲುವು. ಈ ನಿಟ್ಟಿನಲ್ಲಿ ರೈಲ್ವೆ ಅಧಿಕಾರಿಗಳ ಜತೆ ಸಭೆಗಳು ಕೂಡಾ ನಡೆದಿವೆ” ಎಂದು ಹೇಳಿದರು.

“ಈ ವಿಶೇಷ ರೈಲು ಕೇವಲ ಒಂಬತ್ತು ನಿಲುಗಡೆ ಹೊಂದಿತ್ತು. ಬುಧವಾರ ರಾತ್ರಿ ಯಶವಂತಪುರದಿಂದ ಹೊರಟ ರೈಲು ಗುರುವಾರ ಬೆಳಿಗ್ಗೆ 9 ಗಂಟೆ ಬದಲಿಗೆ 11 ಗಂಟೆಗೆ ತಲುಪಿದೆ. ವಿಶೇಷ ರೈಲಾಗಿದ್ದರಿಂದ ನಿಗದಿತ ಸಮಯಕ್ಕೆ ತಲುಪಲು ಆಗಿಲ್ಲವಷ್ಟೆ. ಈ ವಿಶೇಷ ರೈಲು ಸೇವೆಗೆ ವಿಜಯಪುರ ಜಿಲ್ಲೆಯ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ” ಎಂದು ಪ್ರತಿಕ್ರಿಯಿಸಿದರು.

“ಬೆಂಗಳೂರು-ವಿಜಯಪುರ ನಡುವಿನ ರೈಲು ಪ್ರಯಾಣದ ಅವಧಿಯನ್ನು ಈಗಿನ 14 ಗಂಟೆಗಳಿಂದ 10 ಗಂಟೆಗಳಿಗೆ ಇಳಿಸಲು ಪ್ರಯತ್ನ ನಡೆದಿದೆ. ಹೀಗಾಗಿ, ಮೈಸೂರು- ಫಂಡರಾಪುರ ನಡುವಿನ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್‌ ರೈಲನ್ನು ಕಾಯಂ ಆಗಿ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕವೇ ಓಡಿಸಬೇಕು” ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹೊಳೆನರಸೀಪುರ | ರೈತರಿಗೆ ಸಬ್ಸಿಡಿ ಸವಲತ್ತು ಕೊಡಿಸುವುದಾಗಿ ನಂಬಿಸಿ 60 ಲಕ್ಷ ರೂ. ವಂಚನೆ

“ಈ ಸಂಬಂಧವಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಸೋಮಣ್ಣ ಅವರಿಗೆ ಪತ್ರ ಬರೆದು, ವ್ಯವಹರಿಸಲಾಗುವುದು. ಬೆಂಗಳೂರಿನಿಂದ ರಾತ್ರಿ ಹೊರಡುವ ರೈಲುಗಳು ವಿಜಯಪುರಕ್ಕೆ ಬೆಳಿಗ್ಗೆ 6-7 ಗಂಟೆಯ ಹೊತ್ತಿಗೆ ತಲುಪುವಂತೆ ವೇಳಾಪಟ್ಟಿ ಬದಲಿಸಿದರೆ ಹೆಚ್ಚು ಅನುಕೂಲವಾಗುತ್ತದೆ. ಅಲ್ಲದೆ, ವಿಜಯಪುರಕ್ಕೆ ಒಂದು ಪ್ರತ್ಯೇಕ ವಿಶೇಷ ರೈಲನ್ನು ಕಾಯಂ ಆಗಿ ಓಡಿಸಬೇಕು” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನೈಜ ಮತದಾರರ ಹಕ್ಕು ಕಸಿದುಕೊಳ್ಳದಂತೆ ಕ್ರಮಕ್ಕೆ ಅಬ್ದುಲ್ ಹಮೀದ್ ಮುಶ್ರೀಫ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ Claims &...

ವಿಜಯಪುರ | ನವೋದ್ಯಮ ಪರಿಸರ ಬಲಪಡಿಸಲು ಕೆಡಿಇಎಂ ಬೆಂಬಲ

ವಿಜಯಪುರ ಜಿಲ್ಲೆಯ ಸ್ಟಾರ್ಟ್‌ಅಪ್‌ಗಳು, ವಿದ್ಯಾರ್ಥಿ ನವೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ಉತ್ತೇಜನ ನೀಡುತ್ತಿರುವ...

ವಿಜಯಪುರ | ಆತ್ಮವಿಶ್ವಾಸ ಬೆಳೆಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ: ಪ್ರೊ. ಎಸ್ ಇಂದುಮತಿ

ಹೆಣ್ಣುಮಕ್ಕಳು ತಮ್ಮ ಭದ್ರತೆಯ ಕುರಿತು ಯಾವುದೇ ಆತಂಕಕ್ಕೆ ಒಳಗಾಗದೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು....

ವಿಜಯಪುರ | ಜಿಲ್ಲೆಯ 4 ತಾಲೂಕುಗಳು ತೀವ್ರ ಬರಪೀಡಿತ: ಸಚಿವ ಎಂ.ಬಿ ಪಾಟೀಲ

ಕೇಂದ್ರ ಸರಕಾರದ ಬರ ನಿರ್ವಹಣಾ ಮಾನದಂಡಗಳನ್ನು ಆಧರಿಸಿ ವಿಜಯಪುರ ಜಿಲ್ಲೆಯ ಆಲಮೇಲ,...