ಆಲಮೇಲದಲ್ಲಿ ಬೀದಿನಾಯಿ ಹಾವಳಿ; ಕ್ರಮಕ್ಕೆ ಸ್ಥಳೀಯರ ಆಗ್ರಹ

Date:

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ದಾಳಿ ಮೇಲೆ ದಾಳಿ ಮಾಡುತ್ತಿವೆ. ಇತ್ತ ಆತಂಕದಲ್ಲಿರುವ ಸ್ಥಳೀಯರು ಶೀಘ್ರ ಕ್ರಮಕ್ಕೆ ಆಗ್ರಹಿಸಿದ್ದಾರೆ.

- Advertisement -

15 ದಿನಗಳ ಹಿಂದೆ ಸುಮಾರು 30 ರಿಂದ 40 ಬೀದಿ ನಾಯಿಗಳು ಕಚ್ಚಿದ್ದರಿಂದ ಎರಡು ಹಸುಗಳು ಮೃತಪಟ್ಟಿವೆ. ಒಂದು ಮಗುವಿಗೂ ಕಚ್ಚಿ ಗಾಯಗೊಳಿಸಿವೆ. ಹೀಗಾಗಿ ನಾಯಿಗಳ ದಾಳಿಯಿಂದ ಕಡನಿ ಆಗಸಿ ಭಾಗದ ನಿವಾಸಿಗಳು ತೀವ್ರ ಆತಂಕಗೊಂಡಿದ್ದಾರೆ. ಜನವರಿ 30ರಂದು ಆಸ್ಪಕ್ ಸಾಲ್ವೋಟಗಿ ಅವರ ಜಮೀನಿನಲ್ಲಿ ಆಕಳು ಮೇಲೆ ದಾಳಿ ಮಾಡಿವೆ. ಈ ಬಗ್ಗೆ ಪಟ್ಟಣ ಪಂಚಾಯತಿಗೆ ಮಾಹಿತಿ ನೀಡಲಾಗಿದೆ. ಒಂದೇ ವಾರದಲ್ಲಿ ಮತ್ತೊಂದು ಆಕಳು ಮೇಲೆ ದಾಳಿ ಮಾಡಿ ಸಾಯಿಸಿವೆ. ಫೆ.19ರಂದು ಸಂಜೆ 6 ಗಂಟೆಗೆ ಮನೆ ಮುಂದೆ ಕುಳಿತಿದ್ದ ಖಾಸಿಂ ಸಾಲೋಟಗಿ ಅವರ ಮಗುವಿನ ಮೇಲೆ ಬಂದೆರಗಿ ಕಚ್ಚಿ ಗಾಯಗೊಳಿಸಿವೆ. ನಾಯಿ ಕಚ್ಚುತ್ತಿದ್ದಂತೆ ಭಯಗೊಂಡು ಮಗು ಕಿರುಚಾಡಿದ ತಕ್ಷಣ ಪಾಲಕರು ಮಗು ರಕ್ಷಿಸಿದ್ದಾರೆ. ಶುಕ್ರವಾರ ಮಗುವಿನೊಂದಿಗೆ ತಹಶೀಲ್ದಾರರ ಕಚೇರಿಗೆ ತೆರಳಿದ ಪಾಲಕರು ಘಟನೆ ಬಗ್ಗೆ ಮಾಹಿತಿ ನೀಡಿ ಕ್ರಮ ತೆಗೆದುಕೊಳ್ಳಲು ವಿನಂತಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಬೀದಿ ನಾಯಿಗಳ ನಿರ್ವಹಣೆ ಮಾಡಲು ಸಂಬಂಧಪಟ್ಟ ಇಲಾಖೆಗೆ ಕೋರ್ಟ್ ನಿರ್ದೇಶನ ನೀಡಿದ್ದರೂ ಆಲಮೇಲ ಪಟ್ಟಣ ಪಂಚಾಯಿತಿ ಯಾವುದೇ ಕ್ರಮ ಕೈಗೊಂಡಿಲ್ಲ. ಬೀದಿ ನಾಯಿಗಳು ದಾಳಿ ಮಾಡಿದ್ದ ಬಗ್ಗೆ ಅವರ ಗಮನಕ್ಕೆ ತಂದರೂ, ನೀವು ಸುರಕ್ಷತೆ ಮಾಡಿಕೊಂಡಿರಬೇಕು ಎನ್ನುತ್ತಾರೆ ಎಂದು ಮಗುವಿನ ಪಾಲಕರು ಪಟ್ಟಣ ಪಂಚಾಯಿತಿಯ ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಜಯಪುರ | ಮಹಿಳಾ ವಿವಿಯಲ್ಲಿ ರಾಜ್ಯಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

ಸಮುದಾಯದ ಆರೋಗ್ಯ ಕೇಂದ್ರ ವ್ಯಾಪ್ತಿಯ ಸುಮಾರು 43 ಗ್ರಾಮಗಳಲ್ಲಿ ನಾಯಿ ಕಡಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ ಒಂದೇ ತಿಂಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.

ಬೀದಿ ನಾಯಿಗಳನ್ನು ಹಿಡಿದು ಒಂದೆಡೆ ಕೂಡಿಹಾಕಿ ಅವುಗಳಿಗೆ ಆಹಾರ, ಚುಚ್ಚುಮದ್ದುಗೊಳಿಸುವುದು ಸೇರಿದಂತೆ ಅವುಗಳ ನಿರ್ವಹಣೆಗೆ ಟೆಂಡರ್ ಕರೆಯಲಾಗಿದೆ ಎಂದು ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಸುರೇಶ ನಾಯಕ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ವಿಜಯಪುರ | ವಿಶೇಷಚೇತನರ ಸಬಲೀಕರಣಕ್ಕೆ ವಿವಿಧ ಯೋಜನೆ: ಆನ್‌ಲೈನ್ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ವಿಜಯಪುರ | ರಾಮಾನಂದ ತೀರ್ಥರ ಜನ್ಮದಿನ ಸರ್ಕಾರಿ ಜಯಂತಿಯಾಗಲಿ: ವಿನೋದ ಖೇಡ

ಹೈದ್ರಾಬಾದ್ ವಿಮೋಚನಾ ಚಳವಳಿಗೆ ನೇತೃತ್ವ ವಹಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅಮೋಘ...