ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹೋರಾಟಗಾರರ ಬಿಡುಗಡೆಗೆ ಎಸ್‌ಯುಸಿಐ ಆಗ್ರಹ

Date:

ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಎದುರು ಧರಣಿ ನಡೆಸಲು ಮುಂದಾದ ಹೋರಾಟಗಾರರನ್ನು ಬಂಧಿಸಿ, ಸುಳ್ಳು ಮೊಕದ್ದಮೆ ದಾಖಲಿಸಿರುವ ಕ್ರಮ ಖಂಡನೀಯ ಎಂದು ಎಸ್‌ಯುಸಿಐ(ಕಮ್ಯುನಿಸ್ಟ್ ಪಕ್ಷ) ಮುಖಂಡ ಡಾ. ಸುನೀತ್ ಕುಮಾರ್ ಟಿ ಎಸ್ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ನಗರದ ಸುದ್ದಿಗೋಷ್ಟಿಯಲ್ಲಿ ಪಕ್ಷದ ಪರವಾಗಿ ಮಾತನಾಡಿದ ಅವರು, “ಪಿಪಿಪಿ ಮಾದರಿಯ ಬದಲಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂದು ಹೋರಾಟ ಸಮಿತಿಯು ನಿರಂತರವಾಗಿ 100ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಸುತ್ತಿತ್ತು. ಅಷ್ಟಾದರೂ ಜಿಲ್ಲೆಯ ಜನಪ್ರತಿನಿಧಿಗಳ ಸ್ಪಷ್ಟ ಪ್ರತಿಕ್ರಿಯೆ ಸಿಗದ ಕಾರಣ 2026ರ ಜನವರಿ 1ರಂದು ಹೋರಾಟದ ಮುಂದಿನ ಭಾಗವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಎದುರು ಧರಣಿ ನಡೆಸಲು ಪ್ರತಿಭಟನಾಕಾರರು ಮುಂದಾದರು. ಇದನ್ನು ತಡೆದು ಪೊಲೀಸರು ಹೋರಾಟಗಾರರನ್ನು ಬಂಧಿಸಲು ಯತ್ನಿಸಿದಾಗ ನಡೆದ ತಳ್ಳಾಟದಲ್ಲಿ ಶ್ರೀ ಸಂಗನ ಬಸವೇಶ್ವರ ಸ್ವಾಮೀಜಿ ಮತ್ತು ಮಫ್ತಿಯಲ್ಲಿದ್ದ ಪೊಲೀಸರ ನಡುವೆ ಘರ್ಷಣೆ ನಡೆದ ಘಟನೆ ವರದಿಯಾಗಿದೆ. ಮುಂಚಿತವಾಗಿ ಘೋಷಿಸಿ ಮಾಡಿದ ಈ ಜನಪರ ಹೋರಾಟದ ಸಂದರ್ಭದಲ್ಲಿ ನಡೆದ ಈ ಅನುಚಿತ ಪ್ರಕರಣವನ್ನು ಮಾತುಕತೆ ಮೂಲಕ ಪರಿಹರಿಸುವ ಬದಲು ಕೊಲೆಯತ್ನ, ಕೊಲೆ ಬೆದರಿಕೆ, ಅಕ್ರಮಕೂಟ ಮುಂತಾದ ಕರಾಳ ಸೆಕ್ಷನ್‌ಗಳನ್ನು ಹಾಕಿ ಸ್ವಾಮೀಜಿ ಜತೆಗೆ, ಹೆಣ್ಣು ಮಕ್ಕಳನ್ನೂ ಸೇರಿಸಿ ಇತರ ಹೋರಾಟಗಾರರರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಇದು ಈ ಜನಪರ ಹೋರಾಟವನ್ನು ಹತ್ತಿಕ್ಕುವ ಪಿತೂರಿಯಲ್ಲದೆ ಬೇರೇನೂ ಅಲ್ಲ. ಆದ್ದರಿಂದ, ಈ ಕೇಸುಗಳನ್ನು ರದ್ದುಪಡಿಸಿ, ವಿನಾಕಾರಣ ಬಂಧಿತರಾದ ಅನಿಲ್ ಹೊಸಮನಿ, ಭಗವಾನ್ ರೆಡ್ಡಿ, ಅರವಿಂದ ಕುಲಕರ್ಣಿ, ಸಂಗನಬಸವ ಸ್ವಾಮೀಜಿ, ಭೋಗೇಶ ಸೋಲಾಪೂರ ಹಾಗೂ ಸಿದ್ರಾಮ ಹಳ್ಳೂರ ಈ 6 ಮಂದಿಯನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಹಾಗೂ ಎಲ್ಲ 27 ಹೋರಾಟಗಾರರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ಕೈಬಿಡಬೇಕು. ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂಬ ನ್ಯಾಯಯುತ ಆಗ್ರಹವನ್ನು ಈಡೇರಿಸಬೇಕು” ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

“ಈಗಾಗಲೇ ರಾಜ್ಯಾದ್ಯಾಂತ ನಮ್ಮ ಸಂಘಟನೆಗಳಿಂದ ಎಲ್ಲರನ್ನು ಬಿಡುಗಡೆ ಮಾದಲು ಆಗ್ರಹಿಸಿ ಹೋರಾಟ ಮಾಡಲಾಗಿದೆ. ಒಂದು ವೇಳೆ ಬಿಡುಗಡೆ ಮಾಡದಿದ್ದರೆ ಮತ್ತೆ ರಾಜ್ಯಾದ್ಯಂತ ತೀವ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಪಿಪಿಪಿ ವಿರುದ್ಧ ಹೋರಾಟಗಾರರ ಬಂಧನ: ಬಿಡುಗಡೆಗೆ ಜನ ವೇದಿಕೆ ಸಂಘಟನೆ ಆಗ್ರಹ

“ಒಂದು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ನ್ಯಾಯಕ್ಕಾಗಿ ಧ್ವನಿ ಎತ್ತುವುದು ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದೆ. ಆ ಹೋರಾಟದ ಧ್ವನಿಯನ್ನು ಹೀಗೆ ಹತ್ತಿಕ್ಕುವುದು ಜನವಿರೋಧಿ ನಡೆಯಾಗುತ್ತದೆ. ಆದ್ದರಿಂದ ಹೋರಾಟಗಾರರನ್ನು ಬಿಡುಗಡೆ ಮಾಡಿ ಹಾಗೂ ಈ ಕೂಡಲೇ ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಣೆ ಮಾಡಿ, ಮಂಜೂರು ಮಾಡಬೇಕು” ಎಂದು ಆಗ್ರಹಿಸಿದರು.

ಸುದ್ಧಿಗೋಷ್ಟಿಯಲ್ಲಿ ಸಿದ್ರಾಮ ಹಿರೇಮಠ, ಶಿವರಂಜನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...