ತಾಳಿಕೋಟೆ | 36 ಕೆರೆಗಳ ಭರ್ತಿ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

Date:

ಚಿಮ್ಮಲಗಿ ನೀರಾವರಿ ಯೋಜನೆಯ ಪೂರ್ವ ಕಾಲುವೆಯಡಿ ಬರುವ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲ್ಲೂಕುಗಳ 36 ಕೆರೆಗಳನ್ನು ಪೂರ್ಣಪ್ರಮಾಣದಲ್ಲಿ ಭರ್ತಿ ಮಾಡುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಮುಖ್ಯ ಎಂಜಿನಿಯರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

- Advertisement -

ರೈತರು “ಏಪ್ರಿಲ್‌ನಲ್ಲಿ ಕೆರೆಗಳ ಭರ್ತಿಗಾಗಿ ನೀರು ಹರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಈ 36 ಕೆರೆಗಳ ಭರ್ತಿಗೆ ಒಂದು ಹನಿ ನೀರೂ ಕಾಲುವೆಗೆ ಹರಿದಿಲ್ಲ. ಬ್ಯಾಲ್ಯಾಳ ಗ್ರಾಮದ ಬಳಿ ವಿದ್ಯುತ್ ಪ್ರಸರಣ ಟವರ್ ಬಿದ್ದು ವಿದ್ಯುತ್ ಸಮಸ್ಯೆ ಉಂಟಾಗಿದೆ ಎಂಬ ನೆಪವನ್ನು ಕೆಬಿಜೆಎನ್‌ಎಲ್ ಅಧಿಕಾರಿಗಳು ಹೇಳುತ್ತಿದ್ದಾರೆ. ಟವರ್ ಬಿದ್ದು ಒಂದು ತಿಂಗಳು ಕಳೆದರೂ ದುರಸ್ತಿ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಕಾಲುವೆಯಲ್ಲಿ ಏಪ್ರಿಲ್ 7ರವರೆಗೆ ನೀರು ಹರಿಯಬೇಕಿತ್ತು. ಆದರೆ ಕೊನೆಯ ನಾಲ್ಕು ದಿನಗಳಿಂದ ನಮ್ಮ ಭಾಗದ ಕಾಲುವೆಗಳಿಗೆ ನೀರು ಹರಿದಿಲ್ಲ. ಕೆರೆಗಳ ಭರ್ತಿಯಂತೂ ದೂರದ ಮಾತು” ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲ್ಲೂಕುಗಳ ಹುಲಗಬಾಳ, ಜಕ್ಕದಾಳ, ಹಗರಗೊಂಡ, ತಾರನಾಳ, ತಮದಡ್ಡಿ, ಹಡಲಗೇರಿ, ಗುಂಡಕರ್ಜಗಿ, ಪಡೇಕನೂರು, ಆಲಕೊಪ್ಪರ ಸೇರಿದಂತೆ ಒಟ್ಟು 36 ಕೆರೆಗಳನ್ನು ಭರ್ತಿ ಮಾಡಬೇಕು ಎಂದು ಅವರು ಆಗ್ರಹಿಸಿದರು.‌

ಇದನ್ನೂ ಓದಿ>ವಿಜಯಪುರ | ಮಲ್ಲಮ್ಮನ ಆದರ್ಶಗಳು ಸಮಾಜಕ್ಕೆ ದಾರಿದೀಪ: ರಾಜಶೇಖರ ಡಂಬಳ

“ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ಭಾಗದ ರೈತ ಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಬೇಕು. ಬಿಸಿಲಿನ ಪ್ರಖರತೆ ಹೆಚ್ಚಿದ್ದು ಅಂತರ್ಜಲ ಮಟ್ಟ ಕುಸಿದಿದೆ. ಕೆರೆಗಳು ಭರ್ತಿಯಾಗಿವೆ ಎಂದು ಅಧಿಕಾರಿಗಳು ಸುಳ್ಳು ಹೇಳುತ್ತಿದ್ದಾರೆ. ರೈತರ ಸಂಕಷ್ಟ ಕೇಳುವವರು ಯಾರೂ ಇಲ್ಲ” ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.

“ಸದ್ಯ ಜಲಾಶಯದ ನೀರು ನಿರ್ವಹಣೆಯ ಉಸ್ತುವಾರಿ ಬೆಳಗಾವಿ ಪ್ರಾದೇಶಿಕ ಆಯುಕ್ತರ ಅಧೀನದಲ್ಲಿದೆ, ಹಿರಿಯ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅಮರೇಗೌಡ ಮನವಿ ಮಾಡಿದ್ದಾರೆ ಆದರೆ, ಸ್ಪಷ್ಟ ಭರವಸೆ ನೀಡದ ಹೊರತು ಪ್ರತಿಭಟನೆ ಹಿಂಪಡೆಯುವುದಿಲ್ಲ” ಎಂದು ರೈತ ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಶಾಂತಗೌಡ ಪಾಟೀಲ (ನಡಹಳ್ಳಿ) ಹಾಗೂ ಜಿಲ್ಲಾ ಅಧ್ಯಕ್ಷ ಸಂಗಮೇಶ ಸಗರ ಸೇರಿದಂತೆ ರೈತರು ಪಟ್ಟು ಹಿಡಿದರು.

ಪ್ರತಿಭಟನೆಯಲ್ಲಿ ಮಹಾಂತಗೌಡ ಬಿರಾದಾರ, ಸೀತಪ್ಪ ಗಣಿ, ರವಿ ಕೋತಿನ, ರಾಜು ವಾಲಿಕಾರ, ಅಪ್ಪುಗೌಡ ಪಾಟೀಲ, ಬಸವರಾಜ ಪಾಟೀಲ, ಶ್ರೀಕಾಂತ ಬಿರಾದಾರ, ಸಂಗಪ್ಪ ಟಕ್ಕೆರಿ, ಮಹಾದೇವ ಬನಸೊಡೆ, ಸತ್ಯಪ್ಪ ಕಾಳೆ, ಅಮೋಘಸಿದ್ದ ಡೋಣೂರು ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...