ತಾಳಿಕೋಟೆ | ಬೀದಿದೀಪಗಳಿಲ್ಲದೆ ಕತ್ತಲಲ್ಲಿ ಮುಳುಗಿದ ಪಟ್ಟಣ; ಸಾರ್ವಜನಿಕರ ಪರದಾಟ

Date:

ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ರಸ್ತೆ, ಒಳಚರಂಡಿ, ಕುಡಿಯುವ ನೀರು, ಬೀದಿದೀಪ ಹಾಗೂ ಶುಚಿತ್ವ ಕಾಪಾಡುವುದು ಸ್ಥಳೀಯ ಸಂಸ್ಥೆಗಳ ಪ್ರಮುಖ ಜವಾಬ್ದಾರಿಯಾಗಿದೆ. ಆದರೆ ತಾಳಿಕೋಟೆ ಪುರಸಭೆಯಲ್ಲಿ ಬೀದಿದೀಪಗಳ ಸಮರ್ಪಕ ನಿರ್ವಹಣೆ ಇಲ್ಲದ ಪರಿಣಾಮ ಸಾರ್ವಜನಿಕರು ಸಮಸ್ಯೆಗೀಡಾಗಿದ್ದಾರೆ.

- Advertisement -

ತಾಳಿಕೋಟೆ ಸ್ವತಂತ್ರ ತಾಲೂಕಾಗಿ ರೂಪುಗೊಂಡು 12 ವರ್ಷಗಳು ಕಳೆದಿದ್ದರೂ ಪಟ್ಟಣದಲ್ಲಿ ಸಮರ್ಪಕ ಬೀದಿದೀಪಗಳ ವ್ಯವಸ್ಥೆ ಮಾಡದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ರಾತ್ರಿ ವೇಳೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಕಗ್ಗತ್ತಲಲ್ಲಿ, ವಾಹನ ಸವಾರರು ಹಾಗೂ ಪಾದಚಾರಿಗಳು ಜೀವ ಭಯದಲ್ಲಿ ಸಂಚರಿಸುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ವಿಜಯಪುರ ಜಿಲ್ಲೆಯನ್ನು ಆಂಧ್ರಪ್ರದೇಶಕ್ಕೆ ಸಂಪರ್ಕಿಸುವ ಬಿಜ್ಜಳ ರಾಜ್ಯ ಹೆದ್ದಾರಿಯಲ್ಲಿ ಬೀದಿದೀಪಗಳ ನಿರ್ವಹಣೆ ಸಮರ್ಪಕವಾಗಿಲ್ಲ. ಪ್ರತಿನಿತ್ಯ ಸಾವಿರಾರು ಲಾರಿಗಳು, ಬಸ್‌ಗಳು ಹಾಗೂ ಇತರ ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದು, ಕತ್ತಲೆಯಿಂದ ಅಪಘಾತಗಳ ಸಂಭವ ಹೆಚ್ಚಾಗಿದೆ. ಎದುರುಗಡೆಯಿಂದ ಬರುವ ವಾಹನಗಳ ಪ್ರಖರ ಬೆಳಕಿನಿಂದ ಚಾಲಕರು ಗೊಂದಲಕ್ಕೀಡಾಗಿ ಡಿವೈಡರ್‌ಗೆ ಡಿಕ್ಕಿ ಹೊಡೆಯುವುದು ಇಲ್ಲವೇ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗುವ ಅಪಾಯವಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಬೈಕ್ ಸವಾರರ ಪರಿಸ್ಥಿತಿ ಇನ್ನಷ್ಟು ಸಂಕಷ್ಟಕರವಾಗಿದ್ದು, ಪ್ರಖರ ಬೆಳಕಿನಿಂದ ಕಣ್ಣು ಮಂಜಾಗಿ ರಸ್ತೆಯಿಂದ ಕೆಳಗೆ ಇಳಿದು ಬಿದ್ದು ಗಾಯಗೊಂಡಿರುವ ಘಟನೆಗಳೂ ನಡೆದಿವೆ ಎನ್ನಲಾಗಿದೆ.

ಪುರಸಭೆ ವ್ಯಾಪ್ತಿಯ ಜಾನಕಿ ಹಳ್ಳದ ರಸ್ತೆಯಿಂದ ಅಂಜುಮಾನ್ ಶಾಲೆಯವರೆಗಿನ ರಸ್ತೆಯಲ್ಲಿ ಬೀದಿದೀಪಗಳಿದ್ದರೂ ಅವು ಕಾರ್ಯನಿರ್ವಹಿಸದ ಕಾರಣ ಕತ್ತಲಿನಲ್ಲೇ ಸಂಚರಿಸಬೇಕಾಗಿದೆ. ಈ ಮಾರ್ಗದಲ್ಲೇ ಎಪಿಎಂಸಿ ಕಚೇರಿ, ಬಸವೇಶ್ವರ ವೃತ್ತ, ಅಂಬೇಡ್ಕರ್ ಸರ್ಕಲ್, ಟಿಪ್ಪು ವೃತ್ತ ಸೇರಿದಂತೆ ಶಾಲಾ-ಕಾಲೇಜುಗಳಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಬಸವೇಶ್ವರ ವೃತ್ತದಿಂದ ದೇವರಹಿಪ್ಪರಗಿ ಹಾಗೂ ಸಿಂದಗಿ ಸಂಪರ್ಕಿಸುವ ಡಿವಿಯೇಷನ್ ರಸ್ತೆಯಲ್ಲಿಯೂ ಇದೇ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದ ಹೃದಯಭಾಗದಲ್ಲಿರುವ ಶಿವಾಜಿ ವೃತ್ತದಲ್ಲಿನ ಬೀದಿದೀಪಗಳು ಮಂಕಾಗಿದ್ದು, ರಸ್ತೆ ವಿಭಜಕದಲ್ಲಿರುವ ದೀಪಗಳು ಸಮರ್ಪಕ ಬೆಳಕು ನೀಡುತ್ತಿಲ್ಲ. ಅಲ್ಲದೆ, ಕೆಲವು ವಿದ್ಯುತ್ ಕಂಬಗಳು ಅಪಾಯಕಾರಿಯಾಗಿ ವಾಲಿದ್ದು, ಗಾಳಿ-ಮಳೆಗೆ ನೆಲಕ್ಕುರುಳುವ ಭೀತಿ ಎದುರಾಗಿದೆ.

ಪಟ್ಟಣದ ಮುಖ್ಯರಸ್ತೆಯಲ್ಲಿರುವ ಹಲವು ಬೀದಿದೀಪಗಳು ಕಳೆದ ಕೆಲವು ದಿನಗಳಿಂದ ಸಂಪೂರ್ಣ ಕೆಟ್ಟು ನಿಂತಿದ್ದು, ರಾತ್ರಿ ವೇಳೆ ರಸ್ತೆ ಸಂಪೂರ್ಣ ಕತ್ತಲಲ್ಲಿ ಮುಳುಗುತ್ತಿದೆ. ಇದರಿಂದ ವಾಹನ ಸವಾರರು, ವೃದ್ಧರು, ಮಹಿಳೆಯರು ಹಾಗೂ ಮಕ್ಕಳು ಸಂಚರಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕತ್ತಲೆಯ ಲಾಭ ಪಡೆದು ಕಳ್ಳತನ ಸೇರಿದಂತೆ ಅಪರಾಧ ಕೃತ್ಯಗಳು ನಡೆಯುವ ಸಾಧ್ಯತೆಯೂ ಹೆಚ್ಚಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಹಾಳಾಗಿರುವ ಬೀದಿದೀಪಗಳನ್ನು ತಕ್ಷಣ ದುರಸ್ತಿಪಡಿಸುವಂತೆ ಪುರಸಭೆಗೆ ಮನವಿ ಮಾಡಿರುವ ಅಂಬೇಡ್ಕರ್ ಸೇನಾ ಜಿಲ್ಲಾ ಉಪಾಧ್ಯಕ್ಷ ಬಸ್ಸು ಮಾದರ (ಕಟ್ಟಿಮನಿ), ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಈದಿನ.ಕಾಮ್‌ ಜೊತೆ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ವಸಂತ್‌ ಪವಾರ್‌, ಪಟ್ಟಣದಲ್ಲಿನ ಬೀದಿದೀಪಗಳ ಸಮಸ್ಯೆಯನ್ನು ಪರಿಶೀಲಿಸಿ, 2 ರಿಂದ 3 ದಿನಗಳೊಳಗೆ ಅಗತ್ಯ ದುರಸ್ತಿ ಕಾರ್ಯ ಪೂರ್ಣಗೊಳಿಸಿ ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...