ತಾಳಿಕೋಟೆ | ಕುಡಿಯುವ ನೀರಿಗೆ ಗ್ರಾಮಸ್ಥರ ಪರದಾಟ: ಶಾಶ್ವತ ಪರಿಹಾರಕ್ಕೆ ಆಗ್ರಹ

Date:

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಹರನಾಳ ಗ್ರಾಮದಲ್ಲಿ ಕುಡಿವ ನೀರಿಗೆ ತೀವ್ರ ಸಮಸ್ಯೆ ಉಂಟಾಗಿದ್ದು, ಕೂಡಲೇ ನೀರು ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

- Advertisement -

ಪಟ್ಟಣದಲ್ಲಿ ತಹಶೀಲ್ದಾರ್ ಡಾ. ವಿನಯಾ ಹೂಗಾರ ಹಾಗೂ ತಾಲ್ಲೂಕು ಪಂಚಾಯತ್‌ ಇಒ ಅನುಸೂಯಾ ಚಲವಾದಿ ಅವರಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರು, “ಹಲವು ದಿನಗಳಿಂದ ಶುದ್ದ ಕುಡಿವ ನೀರು ಸಮರ್ಪಕವಾಗಿ ಪೂರೈಕೆ ಆಗದೆ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ನೀರಿಗಾಗಿ ನಿತ್ಯವೂ ಪರದಾಡುವ ದುಸ್ಥಿತಿ ಎದುರಾಗಿದೆ. ತಕ್ಷಣವೇ ಸಮಸ್ಯೆಯನ್ನು ಪರಿಹರಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

“ಗ್ರಾಮದ ಅನೇಕ ಬಡಾವಣೆಗಳಲ್ಲಿ ಹಲವು ದಿನಗಳಿಂದ ನೀರು ಸರಬರಾಜು ಸಂಪೂರ್ಣ ಸ್ಥಗಿತಗೊಂಡಿದೆ. ಜನರು ದೂರದ ಪ್ರದೇಶಗಳಿಂದ ಹಣ ಕೊಟ್ಟು ನೀರು ತೆರಬೇಕಾದ ಅನಿವಾರ್ಯತೆ ಇದೆ. ಬಾವಿಗಳ ಅಶುದ್ದ ನೀರನ್ನು ಅವಲಂಬಿಸುವಂತಾಗಿದೆ. ಇದರಿಂದ ಆರೋಗ್ಯ ಸಮಸ್ಯೆ ಉಂಟಾಗುವ ಭೀತಿ ಹೆಚ್ಚಾಗಿದೆ. ಆದ್ದರಿಂದ ಕುಡಿವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು. ಕನಿಷ್ಠ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು” ಎಂದು ಆಗ್ರಹಿಸಿದರು.

ಬಸವರಾಜ ದುಂದಗಿ, ನಿಂಗನಗೌಡ ಬಿರಾದಾರ, ಪರಶುರಾಮ ನಾಗೂರ, ಡಿ.ಸಿ ಚಳ್ಳಗಿ, ಗೋಪಾಲ ಕಟ್ಟಿಮನಿ, ಹಣಮಂತ್ರಾಯ ಬೊಮ್ಮನಹಳ್ಳಿ, ನಿಂಗಪ್ಪ ನಾಗೂರ, ದೇವಪ್ಪ ಮೆಲ್ಲಾಪೂರ, ಮಾಳಪ್ಪ ಅಂಬಳನೂರ, ದೇವರಾಜ ಬೊಮ್ಮನಹಳ್ಳಿ, ಅಯ್ಯಪ್ಪ ಗಡ್ಡಿ, ಸಣ್ಣಪ್ಪಗೌಡ ಪಾಟೀಲ, ನಿಂಗಪ್ಪ ಬೆನಕನಹಳ್ಳಿ, ದೇವಪ್ಪನಾಗೂರ, ನಿಂಗಪ್ಪ ಚಳ್ಳಗಿ, ಪರಶುರಾಮ ಬಿರಾದಾರ, ಬಸವರಾಜ ಬೊಮ್ಮನಹಳ್ಳಿ, ರೇವಣಸಿದ್ದ ಗಡ್ಡಿ, ರೇವಣಸಿದ್ದಪ್ಪ ಬಿರಾದಾರ, ಸಿದ್ದು ತುಂಬಗಿ, ದೇವಪ್ಪ ಅಂಬಳನೂರ, ಕೆ.ಡಿ ಅಂಗಡಿ, ಮಲ್ಲಪ್ಪ ಚಳ್ಳಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...