ವ್ಯಕ್ತಿತ್ವಗಳನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸದೆ, ಅವರ ಬದುಕಿನ ಮೌಲ್ಯಗಳು ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ತಾಳಿಕೋಟೆಯಲ್ಲಿ ಟಿಪ್ಪು ಸುಲ್ತಾನ್ ಅವರ 276ನೇ ಜಯಂತಿ ಅಂಗವಾಗಿ ‘ಟಿಪ್ಪು ಭಾವೈಕ್ಯತಾ ಸಮಾವೇಶ’ ಆಯೋಜಿಸಲಾಗಿದೆ.
ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದ ಹಜರತ್ ಟಿಪ್ಪು ಸುಲ್ತಾನ್ ರಕ್ಷಣಾ ಸಮಿತಿಯ ವತಿಯಿಂದ ನವೆಂಬರ್ 23ರಂದು ಸಂಜೆ 6 ಗಂಟೆಗೆ ಸಾಂಬ ಪ್ರಭು ಶರಣ ಮುತ್ಯಾ ದೇವಸ್ಥಾನದ ಆವರಣದಲ್ಲಿ ಸಮಾವೇಶ ನಡೆಯಲಿದೆ.
ಕಾರ್ಯಕ್ರಮಕ್ಕೆ ವಿವಿಧ ಧರ್ಮಗಳ ಮಠಾಧೀಶರು ಹಾಗೂ ಧಾರ್ಮಿಕ ಮುಖಂಡರು ಸಾನ್ನಿಧ್ಯ ವಹಿಸಲಿರುವುದು ವಿಶೇಷ. ಸ್ಥಳೀಯ ಖಾಸ್ತತೇಶ್ವರ ಮಠದ ಸಿದ್ದಲಿಂಗ ದೇವರು, ಸಾಂಬ ಪ್ರಭು ಶರಣರ ಮಠದ ಶರಣಪ್ಪನವರು ಹಾಗೂ ಧಾರ್ಮಿಕ ಮುಖಂಡ ಸಯ್ಯದ್ ಶಕೀಲ ಅಹ್ಮದ್ ಖಾಜಾ ಸಾನ್ನಿಧ್ಯ ವಹಿಸಲಿದ್ದಾರೆ.
ಕೆಎಸ್‌ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್. ನಾಡಗೌಡ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಕ್ಫ್ ಸಚಿವ ಯು.ಟಿ. ಖಾದರ್ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ವಿಜಯಾನಂದ ಕಾಶಪ್ಪನವರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಸಿಂದಗಿ ಶಾಸಕ ಅಶೋಕ ಮನಗೂಳಿ, ಸೈಯದ್ ಫೈಸಲ್ ಸಕಾಫ್ ಖಾದ್ರಿ ಸಾದತ್ ಹಾಗೂ ಕಾದಾ ರಾಜ್ಯ ಪ್ರಧಾನ ಕಾರ್ಯದರ್ಶಿ ನಜ್ಮಾ ನಜೀರ್ ಚಿಕ್ಕನೆರಳೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಮಿತಿಯ ಅಧ್ಯಕ್ಷ ಸದ್ದಾಂ ಮನಗೂಳಿ ತಿಳಿಸಿದ್ದಾರೆ.
ವಿವಿಧ ಧರ್ಮಗಳ ಮುಖಂಡರು ಒಂದೇ ವೇದಿಕೆಯಲ್ಲಿ ಸೇರುವ ಮೂಲಕ ಪರಸ್ಪರ ಗೌರವ, ಸಹಬಾಳ್ವೆ ಮತ್ತು ಭಾವೈಕ್ಯತೆಯ ಆಶಯವನ್ನು ಬಲಪಡಿಸುವ ವೇದಿಕೆಯಾಗಿ ಈ ಸಮಾವೇಶ ಗಮನ ಸೆಳೆಯಲಿದೆ.



