ತಾಳಿಕೋಟೆ | ಕೋರ್ಟ್ ತೀರ್ಪಿನವರೆಗೆ ಪ್ರಜಾಸೌಧ ಕಾಮಗಾರಿ ಸ್ಥಗಿತಕ್ಕೆ ಆಗ್ರಹ

Date:

ತಾಳಿಕೋಟೆ ಪ್ರಜಾಸೌಧ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಯಲ್ಲಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಂತಿಮ ತೀರ್ಪು ಪ್ರಕಟವಾಗುವವರೆಗೆ ಯಾವುದೇ ಆಡಳಿತಾತ್ಮಕ ಕ್ರಮ, ಟೆಂಡರ್ ಪ್ರಕ್ರಿಯೆ ಅಥವಾ ಕಾಮಗಾರಿ ಕೈಗೊಳ್ಳದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ತಾಳಿಕೋಟೆ ತಾಲೂಕು ಹೋರಾಟ ಸಮಿತಿಯು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

- Advertisement -

ಪ್ರಜಾಸೌಧ ನಿರ್ಮಾಣಕ್ಕಾಗಿ ಈ ಹಿಂದೆ ಗುರುತಿಸಲಾಗಿದ್ದ ಸ್ಥಳವು ಸಾರ್ವಜನಿಕರಿಗೆ ಅನುಕೂಲಕರವಾಗಿಲ್ಲ ಎಂದು ಆರೋಪಿಸಿ ಪಟ್ಟಣದ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು 76 ದಿನಗಳ ಕಾಲ ನಿರಂತರ ಹೋರಾಟ ನಡೆಸಿದ್ದರು. ಹೋರಾಟದ ಬಳಿಕ ಸಾರ್ವಜನಿಕರ ಅಭಿಪ್ರಾಯಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ತಾಳಿಕೋಟೆ ಪಟ್ಟಣದ ಲೋಕೋಪಯೋಗಿ ಇಲಾಖೆಯ ಖಾಲಿ ಜಾಗವನ್ನು ಪರ್ಯಾಯ ಸ್ಥಳವಾಗಿ ಗುರುತಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಆದರೆ, ಈ ಹಿಂದೆ ಆಯ್ಕೆ ಮಾಡಿದ್ದ ಸ್ಥಳವನ್ನು ರದ್ದುಗೊಳಿಸಿ ಪರ್ಯಾಯ ಸ್ಥಳದಲ್ಲೇ ಪ್ರಜಾಸೌಧ ನಿರ್ಮಾಣಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಂಖ್ಯೆ 22436/2026 ದಾಖಲಿಸಲಾಗಿದ್ದು, ಪ್ರಕರಣ ಇನ್ನೂ ವಿಚಾರಣೆಯ ಹಂತದಲ್ಲಿದೆ.

ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಅಂತಿಮ ಆದೇಶ ಹೊರಬರುವವರೆಗೆ ಯಾವುದೇ ಹೊಸ ಆದೇಶ ಹೊರಡಿಸಬಾರದು, ಸ್ಥಳಾಂತರ ಪ್ರಕ್ರಿಯೆ, ಟೆಂಡರ್ ಅಥವಾ ಕಾಮಗಾರಿ ಆರಂಭಿಸಬಾರದು ಎಂದು ಹೋರಾಟ ಸಮಿತಿ ಮನವಿಯಲ್ಲಿ ಒತ್ತಾಯಿಸಿದೆ. ನ್ಯಾಯಾಂಗದ ತೀರ್ಪಿಗೆ ಗೌರವ ನೀಡುವ ನಿಟ್ಟಿನಲ್ಲಿ ಯಥಾಸ್ಥಿತಿಯನ್ನು ಕಾಪಾಡಬೇಕು ಎಂದು ಸಮಿತಿ ಆಗ್ರಹಿಸಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಪರ್ಯಾಯ ಸ್ಥಳವನ್ನು ಶಿಫಾರಸು ಮಾಡಿರುವ ಕ್ರಮವನ್ನು ಹೋರಾಟ ಸಮಿತಿ ಸ್ವಾಗತಿಸಿದ್ದು, ಉಚ್ಚ ನ್ಯಾಯಾಲಯದ ತೀರ್ಪಿನ ಬಳಿಕ ಸರ್ಕಾರ ಕಾನೂನುಬದ್ಧವಾಗಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದೆ.

ಈ ಬೆಳವಣಿಗೆಯಿಂದ ತಾಳಿಕೋಟೆ ಪ್ರಜಾಸೌಧ ನಿರ್ಮಾಣ ವಿವಾದ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಎಲ್ಲರ ಗಮನ ಕರ್ನಾಟಕ ಉಚ್ಚ ನ್ಯಾಯಾಲಯದ ಮುಂದಿನ ವಿಚಾರಣೆ ಹಾಗೂ ಅಂತಿಮ ತೀರ್ಪಿನತ್ತ ನೆಟ್ಟಿದೆ. ಈ ಸಂದರ್ಭದಲ್ಲಿ ರವೀಂದ್ರ ಕಟ್ಟಿಮನಿ, ಚೆನ್ನು ಕಟ್ಟಿಮನಿ, ಸುರೇಶ ಬಿಜಾಪುರ್ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಜಿಲ್ಲೆಯ ಇಬ್ಬರು ಕಲಾ ಸಾಧಕರಿಗೆ ರಾಜೋತ್ಸವ ಪ್ರಶಸ್ತಿ

ಬೀದರ್ ಜಿಲ್ಲೆಯ ಹಿರಿಯ ಚಿತ್ರಕಲಾವಿದ ಸಿ.ಬಿ.ಸೋಮಶೆಟ್ಟಿ ಹಾಗೂ ಬಿದ್ರಿ ಕರಕುಶಲ ಕಲಾವಿದೆ...

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...