ತಾಳಿಕೋಟಿ | ಆ.10ರಂದು ಬರ ಪರಿಹಾರಕ್ಕಾಗಿ ಬೃಹತ್ ‘ರಸ್ತಾ ರೋಕೋ’ ಚಳವಳಿ

Date:

ಬರದ ತೀವ್ರತೆಗೆ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಆಗ್ರಹಿಸಿ ತಾಳಿಕೋಟೆಯಲ್ಲಿ ರೈತ ಹೋರಾಟದ ಕಹಳೆ ಮೊಳಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆ.10ರಂದು ಸೋಮವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ 4ರಿಂದ 5 ಸಾವಿರಕ್ಕೂ ಅಧಿಕ ರೈತರು ಬೃಹತ್ ‘ರಸ್ತಾ ರೋಕೋ’ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.

- Advertisement -

ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಅತಿಥಿ ಗೃಹದಲ್ಲಿ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಪ್ರತಿಭಟನೆಯ ರೂಪುರೇಷೆ ಸಿದ್ಧಪಡಿಸಲಾಗಿದ್ದು, ಸಭೆಯಲ್ಲಿ ಸರ್ಕಾರದ ನಿರ್ಲಕ್ಷ್ಯ ದೋರಣೆ ವಿರುದ್ಧ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ನಡಹಳ್ಳಿ, “ಬರದಿಂದ ರೈತರು ತತ್ತರಿಸುತ್ತಿದ್ದರೂ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸದೆ ರಾಜಕೀಯ ಬೆಳವಣಿಗೆಗಳಲ್ಲಿ ಕಾಲಹರಣ ಮಾಡುತ್ತಿದೆ” ಎಂದು ಆರೋಪಿಸಿದರು.

“ರೈತರ ನೋವು, ಸಂಕಷ್ಟ ಕಾಣದ ದಪ್ಪಚರ್ಮದ ಸರ್ಕಾರ ಇದಾಗಿದೆ. ಅನ್ನದಾತನ ಬದುಕು ಉಳಿಸಲು ಸರ್ಕಾರ ಕೂಡಲೇ ಬರ ಪರಿಹಾರ ಘೋಷಿಸಬೇಕು. ರೈತರ ಬೇಡಿಕೆಗಳಿಗೆ ಸ್ಪಂದಿಸುವವರೆಗೂ ಹೋರಾಟ ಮುಂದುವರಿಸಲಾಗುವುದು” ಎಂದು ಎಚ್ಚರಿಸಿದರು.

“ಮುದ್ದೇಬಿಹಾಳ, ದೇವರಹಿಪ್ಪರಗಿ ಸೇರಿದಂತೆ ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು” ಎಂದು ಕರೆ ನೀಡಿದರು.

ದೇವರಹಿಪ್ಪರಗಿ ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಮಾತನಾಡಿ, “ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಆಡಳಿತದ ಅವಧಿಯಲ್ಲಿ ಪ್ರವಾಹ ಹಾಗೂ ನೈಸರ್ಗಿಕ ವಿಕೋಪ ಸಂಭವಿಸಿದಾಗ ಸರ್ಕಾರ ತಕ್ಷಣ ರೈತರ ನೆರವಿಗೆ ಧಾವಿಸಿ ಪರಿಹಾರ ಒದಗಿಸುತ್ತಿತ್ತು. ಆದರೆ ಇಂದಿನ ಸರ್ಕಾರ ರೈತರ ಸಂಕಷ್ಟವನ್ನು ಕಡೆಗಣಿಸುತ್ತಿದೆ” ಎಂದು ದೂರಿದರು.

“ಸರ್ಕಾರದ ಕಣ್ಣು ತೆರೆಸಬೇಕಾದರೆ ರೈತರು ಒಗ್ಗಟ್ಟಾಗಿ ಬೀದಿಗಿಳಿಯಬೇಕು. ತಾಲೂಕಿನ ಪ್ರತಿಯೊಂದು ಹೋಬಳಿಯಿಂದಲೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.

ರೈತರ ಪ್ರಮುಖ ಬೇಡಿಕೆಗಳು

ವಿಜಯಪುರ ಜಿಲ್ಲೆ ಹಾಗೂ ತಾಳಿಕೋಟಿ ತಾಲೂಕನ್ನು ಕೂಡಲೇ ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡಬೇಕು.ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ತುರ್ತು ಹಾಗೂ ಶಾಶ್ವತ ಕ್ರಮ ಕೈಗೊಳ್ಳಬೇಕು.

ಉದ್ಯೋಗ ಖಾತ್ರಿ ಯೋಜನೆಯಡಿ ಸಮರ್ಪಕವಾಗಿ ಕೆಲಸ ನೀಡಿ ರೈತರ ಗುಳೆ ತಪ್ಪಿಸಬೇಕು. ಪ್ರತಿ ಎಕರೆಗೆ ₹50 ಸಾವಿರದಂತೆ ನೇರ ಬರ ಪರಿಹಾರ ಧನವನ್ನು ರೈತರ ಖಾತೆಗೆ ತಕ್ಷಣ ಜಮೆ ಮಾಡಬೇಕು.

ಸರ್ಕಾರಕ್ಕೆ ‘ಎಚ್ಚರಿಕೆಯ ಗಂಟೆ’?

ಸೋಮವಾರ ನಡೆಯಲಿರುವ ರಸ್ತೆ ರೋಕೋ ಪ್ರತಿಭಟನೆ ಕೇವಲ ಪ್ರತಿಭಟನೆಯಲ್ಲ, ಬರದಿಂದ ನಲುಗಿರುವ ಅನ್ನದಾತರ ಆಕ್ರೋಶದ ಪ್ರತಿರೂಪವಾಗಲಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ. ಸಾವಿರಾರು ರೈತರು ಒಂದೇ ವೇದಿಕೆಯಲ್ಲಿ ಸೇರಿ ಸರ್ಕಾರದ ಗಮನ ಸೆಳೆಯಲು ಮುಂದಾಗಿರುವ ಹಿನ್ನೆಲೆಯಲ್ಲಿ ತಾಳಿಕೋಟೆಯ ಹೋರಾಟ ಜಿಲ್ಲೆಯ ರಾಜಕೀಯ ವಲಯದಲ್ಲೂ ಕುತೂಹಲ ಮೂಡಿಸಿದೆ.

ಇದನ್ನೂ ಓದಿದ್ದೀರಾ? ರಾಯಚೂರು | ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಂಸದ ಜಿ.ಕುಮಾರ ನಾಯಕ ಸೂಚನೆ

ಪ್ರತಿಭಟನೆ ಶಾಂತಿಯುತವಾಗಿ ನಡೆಯಲಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ.

ಸಭೆಯಲ್ಲಿ ಬಸನಗೌಡ ಯಡಿಯಾಪುರ, ಸಾಹೇಬಗೌಡ ವಣಿಕ್ಯಳ, ವಾಸುದೇವ ಹೇಬಸುರ, ಮುರಿಗೆಪ್ಪ ಶರಶೆಟ್ಟಿ, ಕಾಶೀನಾಥ ಮುರಾಳ, ಸಿದ್ದು ಬುಳ್ಳಾ, ಡಿ ಕೆ ಪಾಟೀಲ, ಸಂಗನಗೌಡ ಹೆಗರೆಡ್ಡಿ, ಪ್ರಕಾಶ ಹಜೇರಿ ಸೇರಿದಂತೆ ಬಿಜೆಪಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು, ತಾಲೂಕು ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು–ಸದಸ್ಯರು ಹಾಗೂ ಬಿಜೆಪಿ ಯುವ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರ ನಡೆಸಿ: ಗ್ರಾಮ ಸ್ವರಾಜ್ಯ ಕರ್ನಾಟಕ ಆಗ್ರಹ

ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು...

ಹಾಸನ | ಮೂಢನಂಬಿಕೆ, ಜಾತಿ ತಾರತಮ್ಯ ಮತ್ತು ಅಸಮಾನತೆ ವಿರುದ್ಧ ವೈಚಾರಿಕತೆ ಅಗತ್ಯ; ಸಿಪಿಐಎಂ ಧರ್ಮೇಶ್ 

ಇಂದಿನ ಸಮಾಜದಲ್ಲಿ ಮೂಢನಂಬಿಕೆ, ಕಂದಾಚಾರ, ಜಾತಿ ತಾರತಮ್ಯ, ಅಸ್ಪೃಶ್ಯತೆ, ಕೋಮುವಾದ ಸೇರಿದಂತೆ...

ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು

ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಮಹತ್ವ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ...