ತಾಳಿಕೋಟಿ | ₹2,500 ಬರ ಪರಿಹಾರಕ್ಕೆ ವಿರೋಧ: ಸರ್ಕಾರಕ್ಕೇ ದೇಣಿಗೆ ನೀಡಲು ರೈತ ಸಂಘ ಸಿದ್ಧತೆ

Date:

ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ₹2,500 ಬರ ಪರಿಹಾರ ಮೊತ್ತವನ್ನು ವಿರೋಧಿಸಿ ಅಖಂಡ ಕರ್ನಾಟಕ ರೈತ ಸಂಘಟನೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿತು. ಸರ್ಕಾರವೇ ಆರ್ಥಿಕ ಸಂಕಷ್ಟದಲ್ಲಿದೆ ಎಂದು ಹೇಳುತ್ತಿರುವ ಹಿನ್ನೆಲೆಯಲ್ಲಿ, ರೈತ ಸಂಘದ ಮುಖಂಡರು ಪಟ್ಟಣದಲ್ಲಿ ಸಾರ್ವಜನಿಕರಿಂದ ಹಾಗೂ ವ್ಯಾಪಾರಸ್ಥರಿಂದ ದೇಣಿಗೆ ಸಂಗ್ರಹಿಸಿ ಸರ್ಕಾರಕ್ಕೆ ಹಸ್ತಾಂತರಿಸುವ ಅಭಿಯಾನ ಕೈಗೊಂಡರು.

- Advertisement -

ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದಲ್ಲಿ ಪಟ್ಟಣದ ಖಾಸತೇಶ್ವರ ಮಠದಿಂದ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ರೈತ ಮುಖಂಡರು ವಿವಿಧೆಡೆ ಸಂಚರಿಸಿ ಜನರು ಹಾಗೂ ವ್ಯಾಪಾರಸ್ಥರಿಂದ ಹಣ ಸಂಗ್ರಹಿಸಿದರು. ಅಭಿಯಾನದ ಮೂಲಕ ಒಟ್ಟು ₹3,485 ದೇಣಿಗೆ ಸಂಗ್ರಹಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ವೇಳೆ ಮಾತನಾಡಿದ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ರಾಜ್ಯ ಸಂಘಟನಾ ಕಾರ್ಯದರ್ಶಿ ವಿಠಲ ಬಿರಾದಾರ, “ರಾಜ್ಯದ ರೈತರು ತೀವ್ರ ಬರದಿಂದ ಸಂಕಷ್ಟ ಅನುಭವಿಸುತ್ತಿರುವ ಸಂದರ್ಭದಲ್ಲಿ ಸರ್ಕಾರ ₹2,500 ಪರಿಹಾರ ನೀಡಲು ಮುಂದಾಗಿರುವುದು ರೈತರ ಬದುಕಿನ ಸಂಕಷ್ಟವನ್ನು ಅರ್ಥಮಾಡಿಕೊಳ್ಳದ ಕ್ರಮವಾಗಿದೆ. ರೈತರಿಗೆ ಸೂಕ್ತ ಪರಿಹಾರ ನೀಡುವ ಬದಲು ಅಲ್ಪ ಮೊತ್ತ ನೀಡಿ ಕೈತೊಳೆದುಕೊಳ್ಳುವುದು ಸರಿಯಲ್ಲ” ಎಂದು ಆಕ್ಷೇಪಿಸಿದರು.

“ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬ ಕಾರಣ ನೀಡುತ್ತಿದ್ದರೆ, ರೈತರ ಪರವಾಗಿ ನಾವು ಜನರಿಂದಲೇ ದೇಣಿಗೆ ಸಂಗ್ರಹಿಸಿ ಸರ್ಕಾರಕ್ಕೆ ನೀಡುತ್ತೇವೆ. ಸಂಗ್ರಹಿಸಿದ ಹಣವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಡಿಡಿ ರೂಪದಲ್ಲಿ ಕಳುಹಿಸಲಾಗುವುದು” ಎಂದು ಅವರು ತಿಳಿಸಿದರು.

“ಸಂಗ್ರಹಿಸಿದ ಹಣವನ್ನು ತಹಶೀಲ್ದಾರ್ ಕಚೇರಿಗೆ ಹಸ್ತಾಂತರಿಸಲು ರೈತ ಮುಖಂಡರು ಮುಂದಾದಾಗ ಹಣ ಸ್ವೀಕರಿಸಲು ಅಧಿಕಾರಿಗಳು ನಿರಾಕರಿಸಿದರು. ಹೀಗಾಗಿ ಗುರುವಾರ ಜಿಲ್ಲಾಧಿಕಾರಿಗಳ ಮೂಲಕ ಡಿಡಿ ಸಲ್ಲಿಸಲು ನಿರ್ಧರಿಸಲಾಗಿದೆ” ಎಂದು ಸಂಘಟನೆಯ ಮುಖಂಡರು ಹೇಳಿದರು.

ತಾಲೂಕು ಅಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ ಹಾಗೂ ಉಪಾಧ್ಯಕ್ಷ ರಾಮನಗೌಡ ಹಾದಿಮನಿ ಮಾತನಾಡಿ, “ರೈತರಿಗೆ ಸರ್ಕಾರದ ಸಹಾನುಭೂತಿ ಬೇಡ. ಸಂಕಷ್ಟದ ಸಂದರ್ಭದಲ್ಲಿ ಗೌರವಯುತವಾದ ಹಾಗೂ ಸಮರ್ಪಕವಾದ ಆರ್ಥಿಕ ನೆರವು ಬೇಕು. ರೈತರು ಮತ್ತು ಜನಸಾಮಾನ್ಯರಿಂದ ಕೋಟ್ಯಂತರ ರೂಪಾಯಿ ತೆರಿಗೆ ಸಂಗ್ರಹಿಸುವ ಸರ್ಕಾರ, ಬರಗಾಲದಲ್ಲಿ ರೈತರ ನೆರವಿಗೆ ಹೆಚ್ಚಿನ ಅನುದಾನ ನೀಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ‘SIR’ ತರಾತುರಿ, ದಾಖಲೆಗಳ ಗೊಂದಲದ ನಡುವೆ ಮತದಾನದ ಹಕ್ಕಿನ ಆತಂಕ: ಪ್ರಕಾಶ್ ರಾಜ್

“ಅಗತ್ಯವಿಲ್ಲದ ಯೋಜನೆಗಳಿಗೆ ಹಣ ಖರ್ಚು ಮಾಡುವ ಬದಲು ಬರಪೀಡಿತ ರೈತರ ಬದುಕು ಉಳಿಸುವತ್ತ ಸರ್ಕಾರಗಳು ಗಮನ ಹರಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು” ಎಂದು ಒತ್ತಾಯಿಸಿದರು.

ಅಭಿಯಾನದಲ್ಲಿ ರೈತ ಸಂಘದ ಪದಾಧಿಕಾರಿಗಳು ಹಾಗೂ ರೈತ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿ ಮೃತಪಟ್ಟ ಘಟನೆ...