ತಿಕೋಟಾ | ಸಿವಿಲ್ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆ ಗೊಂದಲ: ಅಭ್ಯರ್ಥಿಗಳ ಪ್ರತಿಭಟನೆ, ಲಾಠಿ ಪ್ರಹಾರ

Date:

ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದ ಶ್ರೀ ಶಾರದಾಂಬಾ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಭಾನುವಾರ ನಡೆದ ಸಿವಿಲ್ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ಹಾಗೂ ಒಎಂಆರ್ ಶೀಟ್‌ಗಳ ಕ್ರಮ ಸಂಖ್ಯೆಯಲ್ಲಿ ವ್ಯತ್ಯಾಸವಿರುವುದಾಗಿ ಆರೋಪಿಸಿ ಹಲವಾರು ಅಭ್ಯರ್ಥಿಗಳು ಪರೀಕ್ಷೆಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

- Advertisement -

ಪ್ರಶ್ನೆಪತ್ರಿಕೆ ಮತ್ತು ಒಎಂಆರ್ ಶೀಟ್‌ಗಳ ಸಂಖ್ಯೆಯಲ್ಲಿ ಹೊಂದಾಣಿಕೆ ಇಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿದ 312 ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಬಂದು, ಬಳಿಕ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಒತ್ತಾಯಿಸಿದರು. ಆದರೆ ಪರೀಕ್ಷಾ ನಿಯಮಾವಳಿಯಂತೆ ಒಮ್ಮೆ ಕೇಂದ್ರದಿಂದ ಹೊರಬಂದ ಅಭ್ಯರ್ಥಿಗಳಿಗೆ ಮರುಪ್ರವೇಶಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸಿಬ್ಬಂದಿ ಹಾಗೂ ಪೊಲೀಸರು ನಿರಾಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಇದರಿಂದ ಆಕ್ರೋಶಗೊಂಡ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಗೇಟ್ ಮುರಿದು ಒಳ ಪ್ರವೇಶಿಸಲು ಯತ್ನಿಸಿದ ವೇಳೆ ನೂಕುನುಗ್ಗಲು ಉಂಟಾಯಿತು. ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಭ್ಯರ್ಥಿಗಳು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಪ್ರತಿಭಟನೆ ನಡೆಸಿದರು. ಅಭ್ಯರ್ಥಿಗಳೊಂದಿಗೆ ಬಂದಿದ್ದ ಪೋಷಕರು ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು.

ಘಟನೆ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ. ಆನಂದ್ ಕೆ, “ಪ್ರಶ್ನೆಪತ್ರಿಕೆ ಹಾಗೂ ಒಎಂಆರ್ ಶೀಟ್‌ಗಳನ್ನು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ತಂದು, ಪರೀಕ್ಷಾರ್ಥಿಗಳ ಸಮ್ಮುಖದಲ್ಲಿಯೇ ನಿಯಮಾನುಸಾರ ತೆರೆಯಲಾಗಿದೆ. ಪ್ರಶ್ನೆಪತ್ರಿಕೆ ಮತ್ತು ಒಎಂಆರ್ ಶೀಟ್ ಕ್ರಮ ಸಂಖ್ಯೆಗಳು ಬೇರೆಬೇರೆ ಇದ್ದವು ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿ ಪರೀಕ್ಷೆ ಬರೆಯದೆ ಕೇಂದ್ರದಿಂದ ಹೊರನಡೆದಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ? ವಿಜಯನಗರ | ಪೊಲೀಸರು ವ್ಯಕ್ತಿಗೆ ಮನಸೋ ಇಚ್ಛೆ ಹೊಡೆದು ಕೊಂದ ಆರೋಪ: ಲಾಕಪ್‌ ಡೆತ್‌ ಪ್ರಕರಣ ದಾಖಲು

“ಪರೀಕ್ಷೆ ಪೂರ್ಣಗೊಳ್ಳುವವರೆಗೆ ಅಭ್ಯರ್ಥಿಗಳು ಕೇಂದ್ರದಿಂದ ಹೊರಗೆ ಹೋಗಬಾರದು ಎಂಬುದು ನಿಯಮವಾಗಿದೆ. ಒಮ್ಮೆ ಹೊರಗೆ ಹೋದ ಬಳಿಕ ಮರುಪ್ರವೇಶ ನೀಡಿ ಪರೀಕ್ಷೆ ಬರೆಯಲು ಅವಕಾಶ ನೀಡುವುದು ಪರೀಕ್ಷಾ ನಿಯಮಾವಳಿಗೆ ವಿರುದ್ಧವಾಗಿರುವುದರಿಂದ ಅವಕಾಶ ನೀಡಲಾಗಿಲ್ಲ” ಎಂದು ಸ್ಪಷ್ಟಪಡಿಸಿದರು.

ಇದೇ ಗೊಂದಲದ ನಡುವೆಯೂ ತಿಕೋಟಾ ಪರೀಕ್ಷಾ ಕೇಂದ್ರದಲ್ಲಿ 120 ಅಭ್ಯರ್ಥಿಗಳು ಯಾವುದೇ ಅಡಚಣೆಯಿಲ್ಲದೆ ಪರೀಕ್ಷೆ ಬರೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರಿನಲ್ಲಿ ಸಚಿವ ಸಂಪುಟ; ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿಕೆಶಿ

ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ ಇಲ್ಲಿನ...

ಯುಪಿಐ ಪಾವತಿಗೆ ಶುಲ್ಕ; ಕೇಂದ್ರ ಸಚಿವರು ಪಿಕ್ ಪಾಕೆಟ್‌ನಲ್ಲಿ ಪಿಎಚ್‌ಡಿ: ಸಿಎಂ ಡಿ ಕೆ ಶಿವಕುಮಾರ್

"ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...