ಮತದಾನದ ಹಕ್ಕು ಸಂವಿಧಾನ ನೀಡಿರುವ ಅಮೂಲ್ಯ ಹಕ್ಕಾಗಿದ್ದು, ಪ್ರತಿಯೊಬ್ಬ ನಾಗರಿಕರೂ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಮತದಾರರ ಹಕ್ಕು ಸಂರಕ್ಷಿಸಿಕೊಳ್ಳಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಶ್ರೀನಾಥ್ ಪೂಜಾರಿ ಕರೆ ನೀಡಿದರು.
ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಅಂಜುಮನ್ ಇಸ್ಲಾಂ ಕಮಿಟಿ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಸಂಯುಕ್ತಾಶ್ರಯದಲ್ಲಿ ಎಸ್‌ಐಆರ್(Special Intensive Revision) ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬೆಂಗಳೂರಿನಿಂದ ಆಗಮಿಸಿದ್ದ ಮೊಹಮ್ಮದ್ ಇಸ್ಮಾಯಿಲ್ ಎಸ್‌ಐಆರ್ ಅರ್ಜಿ ಭರ್ತಿ, ಅಗತ್ಯ ದಾಖಲೆಗಳು ಹಾಗೂ ಚುನಾವಣಾ ಆಯೋಗಕ್ಕೆ ಸಲ್ಲಿಸುವ ವಿಧಾನ ಕುರಿತು ಮಾಹಿತಿ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಎಸ್ ಎಂ ಪಾಟೀಲ ಗಣಿಹಾರ ಮತದಾರರಲ್ಲಿ ಜಾಗೃತಿ ಮೂಡಿಸುವ ಅಗತ್ಯವನ್ನು ಒತ್ತಿ ಹೇಳಿದರು.
ಇದನ್ನೂ ಓದಿದ್ದೀರಾ? ಉತ್ತರ ಕನ್ನಡ | ಶಾಲಾ-ಕಾಲೇಜುಗಳಲ್ಲಿ ಮಾದಕ ವ್ಯಸನ ತಡೆಗೆ ಪೊಲೀಸ್ ಇಲಾಖೆಯ ಜಾಗೃತಿ ಅಭಿಯಾನ
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ್, ರಾಮು ದೇಸಾಯಿ, ರಜಾಕ್ ಮುಲ್ಲಾ ಅನ್ವಾರ್ ಭಗವಾನ್, ಹಾಜಿಲಾಲ್ ಭಗವಾನ್, ಖತಿಬ್ ಎಳಾಪುರ, ಫಯಾಜ್ ಖತೀಬ್ ಮುಜಾವರ್, ವಾಸಿಂಮುಲ್ಲಾ ಸಾಬ್ ಮೈಬೂಬ್ ಸಾಬ್ ಕತಿಬ ಬಂದೇನವಾಜ್ ಕೈನೂರ್, ಸಿದ್ದಾರ್ಥ್ ಪರಣಾಕರ್, ರಮೇಶ್ ಧರಣಾಕರ್ ಇತರರು ಇದ್ದರು.




