ವಿಜಯಪುರ | ದೇಶ ಸ್ವಾವಲಂಬಿಯಾದರೆ ಮಾತ್ರ ಅಭಿವೃದ್ಧಿ ಸಾಧ್ಯ: ವಿಲಾಸ ಕದ್ರೋಳ್ಳರ್

Date:

ಒಂದು ದೇಶ ಯಾರ ಮೇಲೂ ಅವಲಂಬನೆಯಾಗದೆ, ಸ್ವಾವಲಂಬಿಯಾಗಿ ನಿಲ್ಲಬೇಕು. ಆಗ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕ ವಿಲಾಸ ಕದ್ರೋಳ್ಳರ್ ಹೇಳಿದರು.

- Advertisement -

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ, ʼಭಾರತದ ಸುಸ್ಥಿರ ಅಭಿವೃದ್ಧಿಗಾಗಿ ಆತ್ಮ ನಿರ್ಭರ ಭಾರತʼ ವಿಷಯದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಎನ್‌ಇಪಿ ಸ್ನಾತಕ ವಿಭಾಗದ ವಿಶೇಷಾಧಿಕಾರಿ ಪ್ರೊ. ರಾಜಕುಮಾರ ಮಾಲಿಪಾಟೀಲ್ ಮಾತನಾಡಿ, ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರ ಜ್ಞಾನವನ್ನು ಹೆಚ್ಚಿಸಲು ವಿಶೇಷ ಉಪನ್ಯಾಸಗಳು ಅತ್ಯಂತ ಅವಶ್ಯಕವಿದ್ದು ಇಂತಹ ಕಾರ್ಯಕ್ರಮಗಳು ಪದೇ ಪದೇ ಜರುಗಲಿ ಎಂದರು.

ದಾವಣಗೆರೆ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಸಹ ಪ್ರಾಧ್ಯಪಕ ಡಾ. ಹುಚ್ಚೇಗೌಡಾ, ವಿವಿಧ ವಿಭಾಗದ ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಸ್ನಾತಕ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸ್ನಾತಕ ವಿದ್ಯಾರ್ಥಿನಿ ಶಾಂತಾ ಹಾಗೂ ಸಂಗಡಿಗರು ಸ್ವಾಗತ ಗೀತೆಯನ್ನು ಹಾಡಿದರು. ವಿವಿಯ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಆರ್.ಗಂಗಾಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸ್ನಾತಕ ವಿದ್ಯಾರ್ಥಿನಿಯಾದ ಸೋನಿಯಾ ಅಲೆಗಾವಿ ವಂದಿಸಿದರು. ಸಂಶೋಧನಾ ವಿದ್ಯಾರ್ಥಿನಿ ಶ್ವೇತಾ. ಲ. ಬಡಿಗೇರ ಕಾರ್ಯಕ್ರಮ ನಿರೂಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಹತ್ತಿ ಮಿಲ್ ಗೆ ಆಕಸ್ಮಿಕ ಬೆಂಕಿ: 60 ಲಕ್ಷದ ಹತ್ತಿ ಭಸ್ಮ

ಹತ್ತಿ ಮಿಲ್‌ಗೆ ಅಕಸ್ಮಿಕ ಬೆಂಕಿ ತಗುಲಿ ಸುಮಾರು 60ಲಕ್ಷ ಮೌಲ್ಯದ ಬೆಂಕಿ...

ರಾಯಚೂರು | ವಿದ್ಯುತ್ ಅವಘಡದಲ್ಲಿ ರೈತ ಸಾವು: ಕುಟುಂಬಕ್ಕೆ ಬೋಸರಾಜು, ಹಂಪಯ್ಯ ನಾಯಕ್ ಸಾಂತ್ವನ

ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ಮೋಟಾರ್ ಸ್ಟಾರ್ಟ್ ಮಾಡಲು...

ರಾಯಚೂರು | 12 ತಾಸು ವಿದ್ಯುತ್ ಪೂರೈಕೆಗೆ ಆಗ್ರಹ: ಜೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ರೈತರಿಗೆ 12 ತಾಸು ವಿದ್ಯುತ್ ಪೂರೈಸಬೇಕು, ಬೆಳೆಗಳು ಒಣಗುತ್ತಿವೆ ಎಂದು ಆಕ್ರೋಶ...

ಕಲಬುರಗಿ | ಅವಹೇಳನಕಾರಿ ಪೋಸ್ಟ್, ಜೀವ ಬೆದರಿಕೆ ಆರೋಪ; ಶಿವಸೇನಾ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಕಟಿಸಿ, ಪತ್ರಿಕಾಗೋಷ್ಠಿಯಲ್ಲಿ ನಿಂದನಾತ್ಮಕ...