ವಿಜಯಪುರ | ಮಹಿಳಾ ವಿಶ್ವವಿದ್ಯಾಲಯಕ್ಕೆ ಮೇ 4ರಿಂದ ಎಎಎ ಕಮಿಟಿ ಭೇಟಿ, ಪರಿಶೀಲನೆ

Date:

ಶೈಕ್ಷಣಿಕ ಮತ್ತು ಆಡಳಿತಾತ್ಮಕ ಪರಿಶೀಲನೆಗೆ (ಎಎಎ ಕಮಿಟಿ) ಉನ್ನತ ಮಟ್ಟದ ತಜ್ಞರ ತಂಡ ಇದೇ ತಿಂಗಳ 4 ಮತ್ತು 5ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ವಿಜಯಪುರ ನಗರದ ಮಹಿಳಾ ವಿವಿಯ ವಿಶ್ರಾಂತ ಕುಲಪತಿ ಡಾ.ಮೀನಾ ಚಂದಾವರಕರ ಅವರ ನೇತೃತ್ವದ ನಾಲ್ಕು ಜನ ತಜ್ಞರ ತಂಡ ವಿಜಯಪುರದಲ್ಲಿರುವ ವಿವಿಯ ಮುಖ್ಯ ಆವರಣಕ್ಕೆ ಭೇಟಿ ನೀಡಲಿದೆ.

- Advertisement -

ತಜ್ಞರ ತಂಡದ ಸದಸ್ಯರಾಗಿ ಕಲಬುರಗಿ ವಿಶ್ವವಿದ್ಯಾನಿಲಯದ ಗಣಿತ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ. ನಡವಿನಮನಿ, ಧಾರವಾಡ ಕರ್ನಾಟಕ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಬಿ ಎಚ್ ನಾಗೂರ, ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಪ್ರೊ.ಬಸವರಾಜ ಡೋಣೂರು ಆಗಮಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಇದನ್ನು ಓದಿದ್ದೀರಾ? ವಿಜಯಪುರ | ಓದುವುದರ ಜತೆಗೆ ಸಂಪಾದನೆ: ಮಹಿಳಾ ವಿವಿಯ ವಿನೂತನ ಯೋಜನೆ

ಮೇ 5ರಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ವಿವಿಯ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಸಾಧನೆಗಳನ್ನು ಪ್ರಸ್ತುತಪಡಿಸಲಿದ್ದಾರೆ. ಈ ಸಂದರ್ಭದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ ಎಲ್ ಲಕ್ಕಣ್ಣವರ ಮತ್ತು ಆರ್ಥಿಕ ಅಧಿಕಾರಿ ರಾಮಣ್ಣ ಅಥಣಿ ಉಪಸ್ಥಿತರಿರಲಿದ್ದಾರೆ ಎಂದು ತಂಡದ ಸಂಚಾಲಕಿ ಪ್ರೊ.ಶಾಂತಾದೇವಿ ಟಿ ಮತ್ತು ಸಹ ಸಂಚಾಲಕಿ ಡಾ. ಶ್ವೇತಾ ಬೆಂಗಾರೆ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ನಾಲ್ಕು ಜನ ತಜ್ಞರ ತಂಡ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳು, ನಿರ್ದೇಶನಾಲಯಗಳು, ಅಧ್ಯಯನ ಕೇಂದ್ರಗಳು, ಮಹಿಳಾ ತಂತ್ರಜ್ಞಾನ ಪಾರ್ಕ್, ರಾಷ್ಟಿಯ ಸೇವಾ ಯೋಜನಾ ಕೋಶ, ಪ್ರಸಾರಾಂಗ, ಶಿಶುಪಾಲನಾ ಕೇಂದ್ರ, ವಸತಿ ನಿಲಯಗಳು, ಆಡಳಿತ ವಿಭಾಗ, ಶೈಕ್ಷಣಿಕ ವಿಭಾಗ, ಪರೀಕ್ಷಾ ವಿಭಾಗ, ಆರ್ಥಿಕ ವಿಭಾಗ, ಎಂಜನಿಯರಿಂಗ್ ವಿಭಾಗ, ಗ್ರಂಥಾಲಯ, ಕ್ರೀಡಾ ನಿರ್ದೇಶನಾಲಯ, ಕಂಪ್ಯೂಟರ್ ಕೇಂದ್ರ, ಕುಂದುಕೊರತೆ ನಿವಾರಣಾ ಘಟಕ, ರ‍್ಯಾಗಿಂಗ್ ತಡೆ ವಿಭಾಗ, ಸಿಡಿಸಿ, ಪಿಎಂಇ ಬೋರ್ಡ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕ, ಸಮಾನ ಅವಕಾಶ ಘಟಕ, ವೃತ್ತಿ ಮಾರ್ಗದರ್ಶನ ಘಟಕ, ಸ್ವಾಮಿ ವಿವೇಕಾನಂದ ಕೇಂದ್ರ, ಕನಕದಾಸ ಅಧ್ಯಯನ ಕೇಂದ್ರ, ಮೌಲಾನಾ ಆಜಾದ್ ಅಧ್ಯಯನ ಕೇಂದ್ರ, ಡಾ. ಅಂಬೇಡ್ಕರ್ ಅಧ್ಯಯನ ಕೇಂದ್ರ, ಗಾಂಧೀ ಅಧ್ಯಯನ ಕೇಂದ್ರ, ಮಹಿಳಾ ಅಧ್ಯಯನ ಕೇಂದ್ರ, ಭಾಸ್ಕರಾಚಾರ್ಯ ಅಧ್ಯಯನ ಕೇಂದ್ರಗಳಿಗೆ ಭೇಟಿ ನೀಡಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...