ವಿಜಯಪುರ | ಸಾವಯವ ಕೃಷಿ ಹಾಗೂ ಥಾಯ್ ಹಲಸು ಬೆಳೆಯಲು ರೈತರಿಗೆ ಸಲಹೆ

Date:

ರೈತರು ಮಣ್ಣಿನ ಫಲವತ್ತತೆಯನ್ನು ಕಾಪಾಡುವ ಜೊತೆಗೆ ಸುಸ್ಥಿರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ಸಾವಯವ ಕೃಷಿಗೆ ಆದ್ಯತೆ ನೀಡಬೇಕು ಎಂದು ಗ್ರೀನ್ ವಿನ್ ಅಗ್ರೋ ಸೊಲ್ಯೂಷನ್ಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಶಿವಮೂರ್ತಿ ನಾಯಕ್ ಹೇಳಿದರು.

- Advertisement -

ವಿಜಯಪುರ ನಗರದ ಸಮರ್ಥನಗರದ ಶಿವಾಲಯ ಸಭಾಭವನದಲ್ಲಿ ರೈತರಿಗೆ ಥಾಯ್ ಹಲಸಿನ ಗಿಡಗಳ ಪರಿಚಯದ ಕುರಿತು ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿ, “ಪರಿಸರಕ್ಕೆ ಪೂರಕವಾಗಿರುವ ಹಾಗೂ ವಿವಿಧ ಮಣ್ಣು ಮತ್ತು ಹವಾಗುಣಕ್ಕೆ ಹೊಂದಿಕೊಂಡು ಬೆಳೆಯಬಲ್ಲ ಹಲಸಿನ ತಳಿಗಳನ್ನು ರೈತರು ಬೆಳೆಸಬೇಕು. ಸಂಸ್ಥೆಯ ವತಿಯಿಂದ ಹಲಸಿನ ಸಸಿಗಳನ್ನು ಪೂರೈಸುವುದರೊಂದಿಗೆ, ರೈತರು ಬೆಳೆದ ಹಣ್ಣುಗಳನ್ನು ಖರೀದಿಸುವ ಒಪ್ಪಂದ ಮಾಡಿಕೊಳ್ಳಲಾಗುವುದು. ಅಲ್ಲದೆ, ಸಸಿ ನಾಟಿಯಿಂದ ಕಟಾವಿನವರೆಗೆ ಅಗತ್ಯ ತಾಂತ್ರಿಕ ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ನಿವೃತ್ತ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ, ಪರಿಕರ ಮಾರಾಟಗಾರ ಡಾ. ಬಾಳಾಸಾಹೇಬ್ ಉದಗಟ್ಟಿ, ಕೃಷಿ ಸಲಹೆಗಾರ ಸಿದ್ಧಾರ್ಥ ಕಾಂಬಳೆ ಮಾತನಾಡಿ, “ರೈತರು ಒಂದೇ ಬೆಳೆಯನ್ನು ಅವಲಂಬಿಸದೆ ಕೃಷಿಯೊಂದಿಗೆ ಹಣ್ಣಿನ ಬೆಳೆಗಳು ಹಾಗೂ ಅರಣ್ಯಕೃಷಿಗೂ ಆದ್ಯತೆ ನೀಡಬೇಕು. ಇದರಿಂದ ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಾಧ್ಯವಾಗುತ್ತದೆ. ಸಾವಯವ ಕೃಷಿ ಪರಿಕರಗಳನ್ನು ಬಳಸಿಕೊಂಡು ಬೆಳೆ ಬೆಳೆದರೆ ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭ ಪಡೆಯಬಹುದು” ಎಂದರು.

ಪರಶುರಾಮ ಬಂಡಿ ಹಾಗೂ ಮಲ್ಲಿಕಾರ್ಜುನ ಯಾದವ ಮಾತನಾಡಿ, “ಜಿಲ್ಲೆಯ ರೈತರಿಗೆ ಅಗತ್ಯವಿರುವ ಹಲಸಿನ ಸಸಿಗಳು ಹಾಗೂ ತಾಂತ್ರಿಕ ಮಾರ್ಗದರ್ಶನವನ್ನು ಸಂಸ್ಥೆಯ ವತಿಯಿಂದ ಒದಗಿಸಲಾಗುತ್ತಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸೈನಿಕ ಯಲ್ಲಪ್ಪ ನವಬಾಗ ಹಾಗೂ ರೈತ ತಿಪ್ಪಾರಾಯ ಹತ್ತರಕಿ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ನಾಟಿ ವೈದ್ಯ ಶಿವರಾಜ ಹಳಿಂಗಳಿ, ಹರ್ಷಾ ನಾಯಕ್, ರಾಜಪಾಲ ಚವ್ಹಾಣ, ಕಂಬಪ್ಪ ಚಲವಾದಿ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳ ಗ್ರೀನ್ ವಿನ್ ಸಂಸ್ಥೆಯ ಸಲಹೆಗಾರರು, ಪ್ರಗತಿಪರ ರೈತರು ಹಾಗೂ ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸತ್ತಳೆಂದು ಅಂತ್ಯಕ್ರಿಯೆ ಸಿದ್ದತೆ ವೇಳೆ, ಸಾವಿನಂಚಿನಿಂದ ಪಾರಾದ ಅಜ್ಜಿ

ಅಜ್ಜಿ ಸತ್ತಳೆಂದು ಕುಟುಂಬಸ್ಥರೆಲ್ಲಾ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ರು. ಕೊನೇ ಕ್ಷಣದಲ್ಲಿ ಜೀವಂತ ಇದ್ದ ಮಹಿಳೆ...

ಔರಾದ ತಾಲೂಕು ʼಬರʼ ಘೋಷಿಸಿ : ಸಿಎಂಗೆ ಶಾಸಕ ಪ್ರಭು ಚವ್ಹಾಣ ಮನವಿ

ಔರಾದ(ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ...

ಕೆವಡಿಯಾದ ರಸ್ತೆಗಳಲ್ಲಿ ಮಹಿಳೆಯರ ಕೈಗೆ ಸ್ಟೀರಿಂಗ್; ಪ್ರವಾಸೋದ್ಯಮದಿಂದ ಬದಲಾಯಿತು ಜೀವನದ ಲೆಕ್ಕಾಚಾರ

ಸ್ಟ್ಯಾಚ್ಯೂ ಆಫ್ ಯೂನಿಟಿ (ಏಕತೆಯ ಮೂರ್ತಿ) ಆವರಣದಲ್ಲಿ ಸಂಚರಿಸುವಾಗ ಗಮನ ಸೆಳೆಯುವ...

ಬಡವರು, ಉಳ್ಳವರು ಎಂದು ಹೇಗೆ ವಿಂಗಡಣೆ ಮಾಡುತ್ತೀರಿ: ಬಿಜೆಪಿ ನಾಯಕರಿಗೆ ಸಿಎಂ ಡಿ ಕೆ ಶಿವಕುಮಾರ್ ಪ್ರಶ್ನೆ

"ಗ್ಯಾರಂಟಿ ಯೋಜನೆಗಳನ್ನು ಉಳ್ಳವರಿಗೆ ಕೊಡಬೇಡಿ ಎಂದು ಹೇಳುತ್ತಿದ್ದೀರ. ಹಾಗಾದರೆ ನಿಮ್ಮ ಪ್ರಕಾರ,...