ವಿಜಯಪುರ | ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಇಂದಿನಿಂದ ಅಗ್ನಿವೀರ ನೇಮಕಾತಿ ರ್ಯಾಲಿ

Date:

ಮಂಗಳೂರು ಸೇನಾ ನೇಮಕಾತಿ ಕಚೇರಿ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದಲ್ಲಿ ನಗರದ ಡಾ. ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸೆ.10ರಿಂದ 22ರವರೆಗೆ ನಡೆಯಲಿರುವ ಬೃಹತ್ ಅಗ್ನಿವೀರ ನೇಮಕಾತಿ ರ್ಯಾಲಿ ಸಂಪೂರ್ಣ ಪಾರದರ್ಶಕವಾಗಿ ನಡೆಯಲಿದೆ ಎಂದು ಮಂಗಳೂರಿನ ಸೇನಾ ನೇಮಕಾತಿ ಅಧಿಕಾರಿ ಕರ್ನಲ್ ಸೋಮು ಮಹಾರಾಜನ್ ತಿಳಿಸಿದರು.

- Advertisement -

ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೆರಿಟ್ ಆಧಾರದಲ್ಲಿ ಸಂಪೂರ್ಣ ಕಂಪ್ಯೂಟರೀಕೃತ ವ್ಯವಸ್ಥೆಯ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳನ್ನು ನಂಬಿ ಮೋಸ ಹೋಗಬಾರದು. ಸುಳ್ಳು ಭರವಸೆ ನೀಡುವವರ ಮಾತಿಗೆ ಕಿವಿಗೊಡದೆ, ಭಾರತೀಯ ಸೇನೆಯ ಅಧಿಕೃತ ನೇಮಕಾತಿ ಜಾಲತಾಣದಲ್ಲಿ ಪ್ರಕಟವಾಗುವ ಮಾಹಿತಿಯನ್ನೇ ಆಧರಿಸಿ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...


“ಕರ್ನಾಟಕದ ವಿಜಯಪುರ, ಬಾಗಲಕೋಟೆ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಸೇರಿದಂತೆ 11 ಜಿಲ್ಲೆಗಳ ಅಭ್ಯರ್ಥಿಗಳು ನೇಮಕಾತಿ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಅರ್ಹರಾಗಿದ್ದಾರೆ. ಸುಮಾರು 8,500 ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಇವರಲ್ಲಿ ಶೇ.65ರಷ್ಟು ಅಭ್ಯರ್ಥಿಗಳು ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ” ಎಂದು ಕರ್ನಲ್ ಸೋಮು ತಿಳಿಸಿದರು.

ಜೂನ್ 1ರಿಂದ 12ರವರೆಗೆ ನಡೆದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಇ)ಯಲ್ಲಿ ಉತ್ತೀರ್ಣರಾಗಿ ಶಾರ್ಟ್‌ಲಿಸ್ಟ್ ಆಗಿರುವ ಅಭ್ಯರ್ಥಿಗಳು ಮಾತ್ರ ರ್ಯಾಲಿಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ ಎಂದರು.

ಅಗ್ನಿವೀರ ಜನರಲ್ ಡ್ಯೂಟಿ, ಟೆಕ್ನಿಕಲ್, ಕ್ಲರ್ಕ್/ಸ್ಟೋರ್ ಕೀಪರ್ ಟೆಕ್ನಿಕಲ್, ಟ್ರೇಡ್ಸ್‌ಮನ್ (10ನೇ ತರಗತಿ) ಹಾಗೂ ಟ್ರೇಡ್ಸ್‌ಮನ್ (8ನೇ ತರಗತಿ) ವಿಭಾಗಗಳಿಗೆ ಅಭ್ಯರ್ಥಿಗಳು ಸ್ಪರ್ಧಿಸಬಹುದಾಗಿದೆ.

“ಇದರೊಂದಿಗೆ ಆರ್‌ಟಿ, ಜೆಸಿಒ, ಎಸ್‌ಓಎಲ್, ಎನ್‌ಎಎ, ಸೆಪ್ ಫಾರ್ಮಾ, ಎಚ್‌ಎವಿ, ಇಡಿಎನ್ ಸೇರಿದಂತೆ ವಿವಿಧ ಕಾಯಂ ಹುದ್ದೆಗಳಿಗಾಗಿ ಕರ್ನಾಟಕ ಹಾಗೂ ಕೇರಳ ರಾಜ್ಯಗಳಿಂದ ಶಾರ್ಟ್‌ಲಿಸ್ಟ್ ಆಗಿರುವ ಅಭ್ಯರ್ಥಿಗಳೂ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ” ಎಂದು ಹೇಳಿದರು.

ಸಿಇಇ ಪರೀಕ್ಷೆಯ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ನೀಡಲಾಗಿದೆ. ಅಭ್ಯರ್ಥಿಗಳು joinindianarmy.nic.in ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಮ್ಮ ಲಾಗಿನ್ ಐಡಿ ಅಥವಾ ನೋಂದಾಯಿತ ಇ-ಮೇಲ್ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು.

ವಯೋಮಿತಿ, ಶೈಕ್ಷಣಿಕ ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ನೇಮಕಾತಿಗೆ ಸಂಬಂಧಿಸಿದ ಇತರೆ ನಿಯಮಗಳ ಸಂಪೂರ್ಣ ಮಾಹಿತಿ ಅಧಿಕೃತ ಜಾಲತಾಣದಲ್ಲೇ ಲಭ್ಯವಿದೆ. ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳ ಮೊರೆ ಹೋಗದೆ ಅಧಿಕೃತ ಮಾಹಿತಿಯನ್ನೇ ಅನುಸರಿಸಬೇಕು ಎಂದು ಅವರು ಹೇಳಿದರು.

ವಿಜಯಪುರ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ವಿನಯಕುಮಾರ್ ಪಾಟೀಲ ಮಾತನಾಡಿ, ಅಗ್ನಿವೀರ ನೇಮಕಾತಿ ರ್ಯಾಲಿಗೆ ಅಗತ್ಯ ಸಿದ್ಧತೆಗಳನ್ನು ಜಿಲ್ಲಾಡಳಿತದ ಸಹಯೋಗದಲ್ಲಿ ಪೂರ್ಣಗೊಳಿಸಲಾಗಿದೆ ಎಂದರು.

ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವಿವಿಧ ಇಲಾಖೆಗಳೊಂದಿಗೆ ನಾಲ್ಕೈದು ಸಭೆಗಳನ್ನು ನಡೆಸಿ, ಅಭ್ಯರ್ಥಿಗಳಿಗೆ ಅಗತ್ಯ ಸೌಲಭ್ಯ ಹಾಗೂ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...