ವಿಜಯಪುರ | 24/7 ಸರ್ಕಾರಿ ಗ್ರಂಥಾಲಯ ಆರಂಭಿಸಲು ಎಐಡಿವೈಒ ಬೃಹತ್ ಪ್ರತಿಭಟನೆ

Date:

ವಿಜಯಪುರ ನಗರದಲ್ಲಿ 24 ಗಂಟೆಯೂ ಕಾರ್ಯನಿರ್ವಹಿಸುವ ಸರ್ಕಾರಿ ಗ್ರಂಥಾಲಯ ಆರಂಭಿಸಬೇಕು ಹಾಗೂ ನಗರ ಕೇಂದ್ರ ಗ್ರಂಥಾಲಯವನ್ನು ರಜಾ ದಿನಗಳಲ್ಲೂ ಪೂರ್ಣಾವಧಿ ತೆರೆಯಬೇಕು ಎಂದು ಆಗ್ರಹಿಸಿ ಎಐಡಿವೈಒ ನೇತೃತ್ವದಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ, “ಉತ್ತರ ಕರ್ನಾಟಕದ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ಕೇಂದ್ರವಾಗಿರುವ ವಿಜಯಪುರದಲ್ಲಿ ಸಾವಿರಾರು ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಇದ್ದಾರೆ. ಬಡ ವಿದ್ಯಾರ್ಥಿಗಳು ದುಬಾರಿ ಖಾಸಗಿ ಗ್ರಂಥಾಲಯಗಳ ಮೊರೆ ಹೋಗುವುದು ಕಷ್ಟವಾಗಿದ್ದು, ಸರ್ಕಾರ ಕೂಡಲೇ 24 ಗಂಟೆ ಕಾರ್ಯನಿರ್ವಹಿಸುವ ಸುಸಜ್ಜಿತ ಸರ್ಕಾರಿ ಗ್ರಂಥಾಲಯ ಆರಂಭಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸರ್ಕಾರ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸುದೀರ್ಘ ಹಾಗೂ ನಿರಂತರ ಅಧ್ಯಯನದ ಅಗತ್ಯವಿದೆ. ಹೀಗಾಗಿ ಸರ್ಕಾರಿ ಗ್ರಂಥಾಲಯಗಳನ್ನು ರಜಾ ದಿನಗಳಲ್ಲೂ ತೆರೆಯಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ಪುಸ್ತಕಗಳು ಹಾಗೂ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಸ್ಪರ್ಧಾರ್ಥಿಗಳಾದ ರಾಕೇಶ್‌, ಮಾಳಪ್ಪ ಉಳ್ಳಾಗಡ್ಡಿ, ಪ್ರಿಯಾಂಕ ಪಾಟೀಲ ಹಾಗೂ ತ್ರಿವೇಣಿ ಮಾತನಾಡಿ, “ಧಾರವಾಡ, ಬೆಂಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ 24 ಗಂಟೆ ಕಾರ್ಯನಿರ್ವಹಿಸುವ ಸರ್ಕಾರಿ ಗ್ರಂಥಾಲಯ ಆರಂಭಿಸಲು ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ಅದೇ ರೀತಿಯಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿಜಯಪುರದಲ್ಲೂ 24 ಗಂಟೆ ಗ್ರಂಥಾಲಯ ಆರಂಭಿಸಬೇಕು” ಎಂದು ಒತ್ತಾಯಿಸಿದರು.

“ನಗರ ಕೇಂದ್ರ ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಹೆಚ್ಚಿನ ಪುಸ್ತಕಗಳನ್ನು ಒದಗಿಸುವುದರ ಜೊತೆಗೆ ಓದುಗರಿಗೆ ಅಗತ್ಯವಿರುವಷ್ಟು ಸ್ಥಳಾವಕಾಶ ಕಲ್ಪಿಸಬೇಕು” ಎಂದು ಅವರು ಆಗ್ರಹಿಸಿದರು.

ನಿಯೋಗವು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರನ್ನು ಭೇಟಿಯಾಗಿ ಬೇಡಿಕೆಗಳ ಕುರಿತು ಚರ್ಚಿಸಿ, ಮನವಿ ಸಲ್ಲಿಸದರು. “ನಗರ ಕೇಂದ್ರ ಗ್ರಂಥಾಲಯವನ್ನು ರಜಾ ದಿನಗಳಲ್ಲೂ ಪೂರ್ಣಾವಧಿ ತೆರೆಯುವ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳನ್ನು ಒದಗಿಸುವ ವ್ಯವಸ್ಥೆ ಮಾಡಲಾಗುವುದು” ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಎಐಡಿವೈಒ ಜಿಲ್ಲಾಧ್ಯಕ್ಷ ಶ್ರೀಕಾಂತ ಕೊಂಡಗೂಳಿ, ಜಿಲ್ಲಾ ಕಾರ್ಯದರ್ಶಿ ಸಿದ್ರಾಮಯ್ಯ ಹಿರೇಮಠ, ನಿವೃತ್ತ ಉಪನ್ಯಾಸಕಿ ಲಲಿತಾ ಬಿಜ್ಜರಗಿ, ಉದ್ಯೋಗಾಕಾಂಕ್ಷಿಗಳಾದ ಎ.ಟಿ. ಪ್ರಶಾಂತ, ಸತೀಶ, ಅನೀಲ ಕ್ಷತ್ರಿ, ಪೂಜಾ ವಾಲಿಕಾರ, ರಕ್ಷಿತಾ ಚಿಂಚಣಿ, ಸುಜ್ಞಾನಿ ಅಂಗಡಿ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ: ಸಾಕ್ಷ್ಯ ಸಂಗ್ರಹಕ್ಕೆ ಸುಪ್ರೀಂ ಕೋರ್ಟ್ ಸಮಿತಿಯಿಂದ ವಿಶೇಷ ಪೋರ್ಟಲ್

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ ತಿಂಗಳಲ್ಲಿ ನಡೆದ ಪ್ರತಿಭಟನೆ ವೇಳೆ ಪೆಲೆಟ್...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...