3 ತಿಂಗಳಲ್ಲಿ ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆ: ಸಚಿವ ಎಂ.ಬಿ ಪಾಟೀಲ್

Date:

ವಿಜಯಪುರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಇದ್ದ ಪರಿಸರ ಸಂಬಂಧಿ ಅನುಮತಿಯ ಅಡೆತಡೆಯನ್ನು ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠವು ಬುಧವಾರ ನೀಡಿರುವ ಅಂತಿಮ ತೀರ್ಪಿನಲ್ಲಿ ನಿವಾರಿಸಿದೆ. ಹೀಗಾಗಿ ಮುಂದಿನ ಪ್ರಕ್ರಿಯೆಗಳು ನಿರೀಕ್ಷೆಯಂತೆ ನಡೆದರೆ ಮೂರು ತಿಂಗಳೊಳಗೆ ವಿಮಾನ ನಿಲ್ದಾಣದ ಲೋಕಾರ್ಪಣೆ ನೆರವೇರಿಸಬಹುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

- Advertisement -

ವಿಜಯಪುರದಲ್ಲಿ ಈ ಕುರಿತು ಮಾತನಾಡಿರುವ ಅವರು, “ಈ ವಿಷಯವಾಗಿ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾ. ಜಯಮಾಲ್ಯ ಬಾಗ್ಚಿ ಮತ್ತು ನ್ಯಾ. ವಿಪುಲ್ ಎಂ. ಪಾಂಚೋಲಿ ಅವರಿದ್ದ ಪೀಠವು ನೀಡಿರುವ ಅಂತಿಮ ತೀರ್ಪು ಸ್ವಾಗತಾರ್ಹ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಅಲ್ಲದೆ, ಈ ವಿಚಾರದಲ್ಲಿ ವಿಜಯಪುರ ವಿಮಾನ ನಿಲ್ದಾಣ ಯೋಜನೆಯಲ್ಲಿ ಇರುವ ಸಾರ್ವಜನಿಕ ಹಿತಾಸಕ್ತಿಯನ್ನು ತಿಳಿದುಕೊಂಡು, ರಾಜ್ಯದ ಪರವಾಗಿ ವಿಚಾರ ಮಂಡಿಸಿದ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹತಾ, ಹೆಸರಾಂತ ನ್ಯಾಯವಾದಿಗಳಾದ ಕಪಿಲ್ ಸಿಬಲ್, ದೇವದತ್ತ ಕಾಮತ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ರಾಜ್ಯದ ಪರ ವಕೀಲ ನಿಶಾಂತ್ ಪಾಟೀಲ್ ಅವರಿಗೆ ಸಚಿವರು ವಿಶೇಷ ಧನ್ಯವಾದಗಳನ್ನು ಹೇಳಿದ್ದಾರೆ.

ಖಾಸಗಿ ಸೇರಿದಂತೆ ಸಾರ್ವಜನಿಕ ಹಿತಾಸಕ್ತಿಯ ಯೋಜನೆಗಳನ್ನು ಕೈಗೆತ್ತಿಕೊಳ್ಳುವಾಗಲೇ ಪರಿಸರ ಸಂಬಂಧಿ ಅನುಮೋದನೆಗಳನ್ನು ತೆಗೆದುಕೊಳ್ಳಬೇಕಾದ್ದು ಕಡ್ಡಾಯವಾಗಿದೆ. ಇದನ್ನು ಪಾಲಿಸದ ದೇಶದ ಎಲ್ಲಾ ಯೋಜನೆಗಳನ್ನೂ ರದ್ದುಪಡಿಸುವಂತೆ ಸುಪ್ರೀಂ ಕೋರ್ಟ್ 2025ರ ಮೇ 16ರಂದು ಆದೇಶಿಸಿತ್ತು. ಇದರಿಂದಾಗಿ ವಿಜಯಪುರ ಏರ್‌ಪೋರ್ಟ್ ಯೋಜನೆಗೂ ಸಂಕಷ್ಟ ಎದುರಾಗಿತ್ತು. ಆಗ ನಾನು ಮೆಹತಾ, ಸಿಬಲ್ ಮತ್ತು ಪಾಟೀಲ್ ಅವರನ್ನು ಸಂಪರ್ಕಿಸಿ, ಈ ತೊಡಕನ್ನು ನಿವಾರಿಸಲು ಕೇಳಿಕೊಂಡಿದ್ದೆ. ಇಂದಿನ ಅಂತಿಮ ತೀರ್ಪಿನಿಂದ ನಿರಾಳವಾಗಿದ್ದೇನೆ ಎಂದು ಅವರು ನೆನಪಿಸಿಕೊಂಡಿದ್ದಾರೆ.

“ಪರಿಸರ ಸಂಬಂಧಿ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ಈಗ ಹೇಳಲಾಗಿದೆ. ಹೀಗಾಗಿ ವಿಜಯಪುರ ಏರ್‌ಪೋರ್ಟ್ ಸಂಬಂಧದ ಅಗತ್ಯ ಅನುಮತಿ ಸಿಗಲು ದಾರಿ ಸುಗಮವಾಗಿದೆ. ಇದಾದ ಬಳಿಕ ನಾಗರಿಕ ವಿಮಾನಯಾನ ಮಹಾನಿರ್ದೇಶಕರು ವಿಜಯಪುರಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಆಗಿರುವ ಕೆಲಸಗಳನ್ನು ಪರಿಶೀಲಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಸುಪ್ರೀಂ ಕೋರ್ಟ್ ಈ ವರ್ಷದ ಏಪ್ರಿಲ್ 1ರಂದು ವಿಚಾರಣೆ ನಡೆಸಿದಾಗ, ಪರಿಸರ ಸಂಬಂಧಿ ಅನುಮತಿಗೆ ಕಾಯುತ್ತಿರುವ ಯೋಜನೆಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಿ, ವಿಸ್ತೃತ ಅಧ್ಯಯನಕ್ಕೆ ಸೂಚಿಸಿ, ಅಂತಿಮ ತೀರ್ಪನ್ನು ಕಾದಿರಿಸಿತ್ತು. ಇವತ್ತು ನೀಡಿರುವ ತೀರ್ಪಿನಲ್ಲಿ ಶಾಶ್ವತ ವಿನಾಯಿತಿ ನೀಡಿದೆ. ಏತನ್ಮಧ್ಯೆ ನಾವು ವಿಜಯಪುರ ಏರ್‌ಪೋರ್ಟ್ ಸಂಬಂಧ ಪರಿಸರ ಸಂಬಂಧಿ ಅನುಮತಿ ಕೋರಿ ಅರ್ಜಿ ಹಾಕಿದ್ದೇವೆ ಎಂದು ಅವರು ವಿವರಿಸಿದ್ದಾರೆ.

ಪರಿಸರ ಸಂಬಂಧಿ ಒಪ್ಪಿಗೆ ಸಿಕ್ಕಿದ ಬಳಿಕ ನಾಗರಿಕ ವಿಮಾನಯಾನ ಮಹಾನಿರ್ದೇಶಕರು ವಿಜಯಪುರ ವಿಮಾನ ನಿಲ್ದಾಣದಲ್ಲಿ ಆಗಿರುವ ಕೆಲಸಗಳನ್ನು ಪರಿಶೀಲಿಸಲಿದ್ದಾರೆ. ಅದೊಂದು ಪ್ರಕ್ರಿಯೆ ಮುಗಿದರೆ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ದಾರಿ ಸುಗಮವಾಗಲಿದೆ ಎಂದು ಪಾಟೀಲ್ ಹೇಳಿದ್ದಾರೆ.

ಈ ವಿಮಾನ ನಿಲ್ದಾಣ ನಿರ್ಮಾಣಕ್ಕೆ 614 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ವಿನಿಯೋಗಿಸಲಾಗಿದೆ. ಇದು ಕಾರ್ಯಾರಂಭ ಮಾಡಿದರೆ ಕಿತ್ತೂರು ಕರ್ನಾಟಕ ಮತ್ತು ನೆರೆಹೊರೆ ಪ್ರದೇಶಗಳಿಗೂ ಅನುಕೂಲವಾಗಲಿದೆ ಎಂದು ಪಾಟೀಲ್ ಅಭಿಪ್ರಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಜಿಲ್ಲೆಯ ಇಬ್ಬರು ಕಲಾ ಸಾಧಕರಿಗೆ ರಾಜೋತ್ಸವ ಪ್ರಶಸ್ತಿ

ಬೀದರ್ ಜಿಲ್ಲೆಯ ಹಿರಿಯ ಚಿತ್ರಕಲಾವಿದ ಸಿ.ಬಿ.ಸೋಮಶೆಟ್ಟಿ ಹಾಗೂ ಬಿದ್ರಿ ಕರಕುಶಲ ಕಲಾವಿದೆ...

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...

ಚಿಕ್ಕಬಳ್ಳಾಪುರ ಜಿಲ್ಲಾ ಎಸಿ ಆಗಿ ಕೆ.ಆರ್.ಶೋಭಿತಾ ನೇಮಕ: ಡಿ.ಎಚ್.ಅಶ್ವಿನ್ ವರ್ಗಾವಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆ.ಆರ್. ಶೋಭಿತಾ ಅಧಿಕಾರ...

ಚಿಂತಾಮಣಿ | ನಳಂದ ವಿದ್ಯಾ ಮಂದಿರದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಯಶಸ್ವಿ

ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳಿಗೆ ಕಾನೂನು...