ವಿಜಯಪುರ | ಅಕ್ಕ ವಿವಿ ಸಂತ್ರಸ್ತೆಯರ ಪರ ನಿಲ್ಲಲಿದೆ: ಕುಲಸಚಿವ ಶಂಕರಗೌಡ ಸೋಮನಾಳ

Date:

ಹೆಣ್ಣು ಮಕ್ಕಳು ಹಾಗೂ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ಮತ್ತು ಅಮಾನವೀಯ ಕೃತ್ಯಗಳು ನಾಗರಿಕ ಸಮಾಜಕ್ಕೆ ಕಳಂಕವಾಗಿದ್ದು, ಇಂತಹ ಘಟನೆಗಳನ್ನು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ತೀವ್ರವಾಗಿ ಖಂಡಿಸುತ್ತದೆ ಎಂದು ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ ಹಾಗೂ ವಿದ್ಯಾರ್ಥಿನಿ ಕ್ಷೇಮಪಾಲನಾ ನಿರ್ದೇಶನಾಲಯದ ಸಂಯುಕ್ತ ಆಶ್ರಯದಲ್ಲಿ ಗುರುವಾರ ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಅಪಹರಣ, ಮಾನವ ಕಳ್ಳಸಾಗಣೆ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪ್ರತಿಭಟನೆಯಲ್ಲಿ ಮಾತನಾಡಿದ ಕುಲಸಚಿವ ಶಂಕರಗೌಡ ಸೋಮನಾಳ, “ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ಸಮಾಜ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕಿದ್ದು, ಸಂತ್ರಸ್ತೆಯರೊಂದಿಗೆ ವಿಶ್ವವಿದ್ಯಾನಿಲಯ ಸದಾ ನೈತಿಕವಾಗಿ ನಿಲ್ಲಲಿದೆ” ಎಂದು ತಿಳಿಸಿದರು.

ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ. ಲಕ್ಷ್ಮಿದೇವಿ ವಾಯ್ ಮಾತನಾಡಿ, “ಮಹಿಳೆಯರ ಮೇಲಿನ ಹಿಂಸಾಚಾರ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಲಿಂಗ ಸಮಾನತೆ ಹಾಗೂ ಲಿಂಗತ್ವ ಸೂಕ್ಷ್ಮತೆಯ ಅರಿವು ಪ್ರತಿಯೊಬ್ಬರಲ್ಲೂ ಮೂಡಬೇಕು. ಮಹಿಳೆಯನ್ನು ಗೌರವಿಸುವ ಮನೋಭಾವ ಬೆಳೆಸಿದಾಗ ಮಾತ್ರ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಸಾಧ್ಯ” ಎಂದು ಅಭಿಪ್ರಾಯಿಸಿದರು.

ವಿದ್ಯಾರ್ಥಿನಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕಿ ಪ್ರೊ. ಜ್ಯೋತಿ ಉಪಾಧ್ಯೆ ಮಾತನಾಡಿ, “ಮಕ್ಕಳಿಗೆ ಬಾಲ್ಯದಿಂದಲೇ ಲಿಂಗ ಸಂವೇದನಾಶೀಲತೆ ಹಾಗೂ ಮಾನವೀಯ ಮೌಲ್ಯಗಳನ್ನು ಕುಟುಂಬದಲ್ಲಿಯೇ ಕಲಿಸಬೇಕು. ಮಹಿಳೆಯರ ವಿರುದ್ಧ ನಡೆಯುವ ಇಂತಹ ಹೀನ ಕೃತ್ಯಗಳನ್ನು ಪ್ರತಿಯೊಬ್ಬರೂ ಖಂಡಿಸುವುದು ಸಾಮಾಜಿಕ ಹೊಣೆಗಾರಿಕೆಯಾಗಿದೆ” ಎಂದು ಹೇಳಿದರು.

ಪ್ರತಿಭಟನೆಯ ವೇಳೆ ಘಟನೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಸಹಿ ಸಂಗ್ರಹ ಅಭಿಯಾನವನ್ನೂ ನಡೆಸಿ ಮಹಿಳೆಯರ ಸುರಕ್ಷತೆಗೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ಅಧ್ಯಾಪಕರು, ಬೋಧಕೇತರ ಸಿಬ್ಬಂದಿ, ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಮಹಿಳಾ ಅಧ್ಯಯನ ಕೇಂದ್ರದ ಡಾ. ಭಾಗ್ಯಶ್ರೀ ದೊಡಮನಿ, ಡಾ. ಸರೋಜಾ ಸಂತಿ, ಡಾ. ಶಶಿಕಲಾ ರಾಠೋಡ, ಡಾ. ರಜಿಯಾ ನದಾಫ, ಅಂಬಿಕಾ ಮಾಲಗಾರ ಹಾಗೂ ಕಾವೇರಿ ಇಂಡಿಕರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...