ವಿಜಯಪುರ |ಯೋಗದಿಂದ ಮಾನವನ ಸರ್ವತೋಮುಖ ಅಭಿವೃದ್ಧಿ: ಡಾ. ನಿರ್ಮಲಾ ಕೆ ಜಿ

Date:

ಮಾನವನ ಸರ್ವತೋಮುಖ ಅಭಿವೃದ್ಧಿಯನ್ನು ಧ್ಯೇಯವಾಗಿಸಿರುವ ಯೋಗ ವಿಶ್ವಾದ್ಯಂತ ಹೆಚ್ಚು ಮನ್ನಣೆ ಪಡೆದಿದೆ. ಯೋಗದಿಂದ ಮಾನವನ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಬಿ ಎಲ್ ಡಿ ಇ‌ ಡೀಮ್ಡ್ ವಿಶ್ವವಿದ್ಯಾಲಯ ಸಂಶೋಧನ‌ ಕೇಂದ್ರದ ಸಂಯೋಜಕಿ ಡಾ. ನಿರ್ಮಲಾ ಕೆ ಜಿ ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -

ವಿಜಯಪುರ ನಗರದ ಬಿ ಎಲ್ ಡಿ ಇ‌ ಸಂಸ್ಥೆಯ ಎ ವಿ ಎಸ್ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ವೈದ್ಯಕೀಯ ಕೇಂದ್ರದಲ್ಲಿ
ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದಡಿ ಕಾರ್ಯ ನಿರ್ವಹಿಸುವ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ- 2026ರ ಅಂಗವಾಗಿ ʼಯೋಗ ಮಹೋತ್ಸವ-2026, 55 ದಿನಗಳ ಕೌಂಟ್‌ಡೌನ್ʼ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಪ್ರಜಾಪ್ರಭುತ್ವದ ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ಇಂದು ನಮಗೆ ಸಾಕಷ್ಟು ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳಿದ್ದರೂ ಯೋಗವು ನಾನಾ ರೋಗಗಳನ್ನು ತಡೆಗಟ್ಟುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ. ಈ ಕಾರ್ಯಕ್ರಮ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಪ್ರತಿಯೊಬ್ಬರು ನಿತ್ಯವೂ ಯೋಗ ಮಾಡುವ ಮೂಲಕ ಆರೋಗ್ಯ ವೃದ್ಧಿಸಿಕೊಂಡು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು‌” ಎಂದು ಹೇಳಿದರು.

Advertisements

ಈ ಸಂದರ್ಭದಲ್ಲಿ ಜ್ಞಾನಯೋಗಾಶ್ರಮದ ಶ್ರೀ ಬಸವರಾಜೀಯ ಮಹಾಸ್ವಾಮಿಗಳು, ಕಾಲೇಜಿನ‌ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ, ನ್ಯಾಯವಾದಿ ಡಾ. ರಂಜಿತಾ ಕೆ ಆರ್ ಡೀಮ್ಡ್ ವಿವಿಯ ಫಿಜಿಯಾಲಜಿ ವಿಭಾಗದ ಡಾ. ಜ್ಯೋತಿ ಖೋದ್ನಾಪುರ, ಕಾರ್ಯಕ್ರಮದ ನೋಡಲ್ ಅಧಿಕಾರಿ ಡಾ. ಸತೀಶ್ ಎಸ್ ಪಾಟೀಲ, ಪ್ರಾಧ್ಯಾಪಕರಾದ ಡಾ. ಡಿ ಎನ್ ಧರಿ, ಸಹ ಪ್ರಾಧ್ಯಾಪಕಿ ಡಾ. ಭುವನೇಶ್ವರಿ ಪಾಟೀಲ, ಯೋಗ ತರಬೇತುದಾರ ಚೇತನ ವಿಶ್ವಕಮ್ಮಾರ ಮುಂತಾದವರು ಉಪಸ್ಥಿತರಿದ್ದರು.

ಬೆಳಗಾವಿಯ ಯೋಗ ತರಬೇತುದಾರ ಅಮೋಲ ಜೈನ್ ಅಗ್ನಿಹೋತ್ರ ಹೋಮದೊಂದಿಗೆ ಯೋಗ ಪ್ರಾರಂಭಿಸಿದರು. ಕಾರ್ಯಕ್ರಮದ ಅಂಗವಾಗಿ ಯೋಗ ಕೇಂದ್ರದ ಸದಸ್ಯರು ಹಾಗೂ ಬಿ ಎಲ್‌ ಇ ಎ ವಿ ಎಸ್ ಆಯುರ್ವೇದ ಮಹಾವಿದ್ಯಾಲಯದ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಂದ ಎರಡು ನೃತ್ಯ ಯೋಗ ಪ್ರದರ್ಶನಗಳು ನಡೆದವು.

ಇದನ್ನೂ ಓದಿ>ವಿಜಯಪುರ | ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾವಂತ ಮಹಿಳೆಯರ ಪಾತ್ರ ದೊಡ್ಡದು: ಕುಲಪತಿ ಉಜ್ವಲ ಚಕ್ರದೇವ್

ʼಕಾಮನ್ ಯೋಗ ಪ್ರೋಟೋಕಾಲ್ʼ ಅಧಿವೇಶನವನ್ನು ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕಿ ಸುನಿತಾ ಬಿರಾದಾರ ಹಾಗೂ ಬಿ ಎಲ್ ಡಿ ಇ ಎ ವಿ ಎಸ್ ಆಯುರ್ವೇದ ಮಹಾವಿದ್ಯಾಲಯದ ಸ್ವಸ್ಥವೃತ್ತ ಮತ್ತು ಯೋಗ ವಿಭಾಗದ ಯೋಗ ತರಬೇತುದಾರ ಚೇತನ ವಿಶ್ವಕಮ್ಮಾರ ಅವರು ನಡೆಸಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ವಿವಿಧ ಯೋಗ ಕೇಂದ್ರಗಳ ಸಂಚಾಲಕರು ಹಾಗೂ ಸದಸ್ಯರು, ವಿಜಯಪುರ ಸೈಕ್ಲಿಂಗ್ ತಂಡ, ವೃಕ್ಷೋತ್ತ್ಥಾನ ಹೆರಿಟೇಜ್ ತಂಡ, ಆಶಾ ಕಾರ್ಯಕರ್ತೆಯರು, ಆಯುಷ್ ಸಿಬ್ಬಂದಿ, ಎಎಫ್‌ಐ ಸದಸ್ಯರು, ವಿಜಯಪುರ ನಗರದ ಸುತ್ತಮುತ್ತಲಿನ ಸಾರ್ವಜನಿಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ 800 ಕ್ಕೂ ಹೆಚ್ಚು ಯೋಗಾಸಕ್ತರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರೆಜಿಲ್ ಗಡಿ ದಾಟಿದ ಗೆಲುವು: ಜನತಂತ್ರಕ್ಕೆ ಆಶಾಕಿರಣವಾದ ಲುಲಾ, ಆದರೆ ಅಳಿಸಿಲ್ಲ ಬಲಪಂಥದ ಹೆಜ್ಜೆಗುರುತು

ಲ್ಯಾಟಿನ್ ಅಮೆರಿಕದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಬ್ರೆಜಿಲ್‌ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ ಕರೆಘಂಟೆಯೇ?

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ...

ಬೀದರ್‌ | ನ.1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

ಬೀದರ್‌ ತಾಲ್ಲೂಕಿನ ಅತಿವಾಳ ಸಮೀಪ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು...