ವಿಜಯಪುರ | ಎಸ್‌ಐಆರ್ ಪ್ರಕ್ರಿಯೆ ನಿಯಮ ಉಲ್ಲಂಘನೆ ಆರೋಪ: ಜಿಲ್ಲಾಡಳಿತ ಮಧ್ಯಪ್ರವೇಶಕ್ಕೆ ಆಗ್ರಹ

Date:

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆ ವೇಳೆ ಬಿಎಲ್‌ಒಗಳು ಸರ್ಕಾರದ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಪಾಲಿಸುತ್ತಿಲ್ಲ, ಬದಲಿಗೆ ವಿಜಯಪುರ ನಗರ ಸೇರಿದಂತೆ ಕೆಲವೆಡೆ ದೇವಸ್ಥಾನಗಳು, ಕಲ್ಯಾಣ ಮಂಟಪಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಕುಳಿತುಕೊಂಡೇ ಎಸ್‌ಐಆರ್ ಕಾರ್ಯ ನಡೆಸುತ್ತಿರುವುದು ನಿಯಮ ಉಲ್ಲಂಘನೆಯಾಗಿದೆ ಎಂದು ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಅಪ್ಪುರಾಜ ನಿಮಾದಾರ ಆರೋಪಿಸಿದ್ದಾರೆ.

- Advertisement -

ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, “ರಾಜ್ಯ ಸರ್ಕಾರದ ನಿರ್ದೇಶನದ ಪ್ರಕಾರ ಬಿಎಲ್‌ಒಗಳು ಮನೆ ಮನೆಗೆ ತೆರಳಿ ಮತದಾರರಿಗೆ ಅರ್ಜಿಗಳನ್ನು ವಿತರಿಸಿ, ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ ಪರಿಷ್ಕರಣೆ ಪ್ರಕ್ರಿಯೆ ನಡೆಸಬೇಕು. ಆದರೆ ಮನೆ ಮನೆಗೆ ತೆರಳದೆ ಎಲ್ಲೆಂದರಲ್ಲಿ ಮಾಹಿತಿ ಸಂಗ್ರಹಿಸುವ ಕ್ರಮದಿಂದ ವೃದ್ಧರು, ಮಹಿಳೆಯರು, ವಿಕಲಚೇತನರು ಹಾಗೂ ದಿನಗೂಲಿ ಕಾರ್ಮಿಕರು ಅನಗತ್ಯ ತೊಂದರೆ ಅನುಭವಿಸುವಂತಾಗಿದೆ. ಇದರಿಂದ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಅಪಾಯವೂ ಎದುರಾಗಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಸುದ್ದಿ ಓದಿದ್ದೀರಾ? ವಿಜಯಪುರ | ವಿಧಾನ ಪರಿಷತ್ತಿನಲ್ಲಿ ಮುಸ್ಲಿಮರಿಗೆ ಅವಕಾಶ ನೀಡಿ: ಎಸ್ ಎಂ ಪಾಟೀಲ ಗಣಿಹಾರ

“ಹಾಗಾಗಿ ಜಿಲ್ಲಾಡಳಿತ ಮತ್ತು ಚುನಾವಣಾ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ, ಸರ್ಕಾರದ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಬಿಎಲ್‌ಒಗಳಿಗೆ ಸೂಚನೆ ನೀಡಬೇಕು. ಮನೆ ಮನೆಗೆ ತೆರಳಿ ಅರ್ಜಿ ವಿತರಣೆ ಹಾಗೂ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಅನುಸರಿಸಬೇಕು. ನಿಯಮ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹಳ್ಳಕ್ಕೆ ಉರುಳಿದ ಖಾಸಗಿ ಶಾಲಾ ಬಸ್‌ : ಹಲವು ವಿದ್ಯಾರ್ಥಿಗಳಿಗೆ ಗಾಯ

ಹುಲಸೂರ ಪಟ್ಟಣದ ಇಕ್ಬಾಲ್ ಪಟೇಲ್ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ...

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಪತ್ರಕರ್ತೆಯ ಎದೆ ಹಿಂಡಿ ವಿಕೃತಿ ಮೆರೆದ ಪೊಲೀಸ್ ಅಧಿಕಾರಿಗೆ DCP ಹುದ್ದೆಗೆ ಬಡ್ತಿ ನೀಡಿದ ಮೋಶಾ ಸರ್ಕಾರ!

ಜಂತರ್ ಮಂತರ್‌ನಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ...