ವಿಜಯಪುರ |ಬಜೆಟ್‌ನಲ್ಲಿ ಬೇಡಿಕೆ ಈಡೇರಿಸದಿದ್ದರೆ ಅಂಗನವಾಡಿ, ಬಿಸಿಯೂಟ ಬಂದ್: ಎಸ್.ವರಲಕ್ಷ್ಮಿ ಎಚ್ಚರಿಕೆ

Date:

ಕೇಂದ್ರ ಸರ್ಕಾರವು ಫೆಬ್ರವರಿಯಲ್ಲಿ ಮಂಡಿಸಲಿರುವ ಬಜೆಟ್‌ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ನೌಕರರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಅಂಗನವಾಡಿ ಕೇಂದ್ರಗಳು ಮತ್ತು ಬಿಸಿಯೂಟ ಸೇವೆಯನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡಿ ಮುಷ್ಕರ ನಡೆಸಲಾಗುವುದು ಎಂದು ಅಂಗನವಾಡಿ ನೌಕರರ ಸಂಘದ ರಾಜ್ಯ ಅಧ್ಯಕ್ಷೆ ಎಸ್.ವರಲಕ್ಷ್ಮಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು.

- Advertisement -

ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಗನವಾಡಿ ಮತ್ತು ಬಿಸಿಯೂಟ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಡಿಸೆಂಬರ್ 1ರಂದು ದೆಹಲಿಯಲ್ಲಿ ಹೋರಾಟ ಆಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಹೋರಾಟದ ಪೂರ್ವಭಾವಿಯಾಗಿ ಒಂದು ವಾರದೊಳಗೆ ಎಲ್ಲ ಸಂಸದರಿಗೆ ಬೇಡಿಕೆಗಳ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.2018ರಿಂದ ಅಂಗನವಾಡಿ ನೌಕರರಿಗೆ ವೇತನ ಹೆಚ್ಚಳ ಮಾಡಿಲ್ಲ. 2011ರಿಂದ ಬಿಸಿಯೂಟ ನೌಕರರ ವೇತನ ಹೆಚ್ಚಳವಾಗಿಲ್ಲ. ಮತ್ತೊಂದೆಡೆ, ಈ ಯೋಜನೆಗಳಿಗೆ ನೀಡುವ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿಮೆ ಮಾಡಲಾಗುತ್ತಿದೆ. ಇದರಿಂದ ನೌಕರರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ ಎಂದು ಆರೋಪಿಸಿದರು.

ಹೆಚ್ಚುವರಿ ಕೆಲಸದ ಹೊರೆ ಕೈಬಿಡಲಿ

ಅಂಗನವಾಡಿ ನೌಕರರನ್ನು ಅವರ ನಿಗದಿತ ಕೆಲಸಗಳ ಹೊರತಾಗಿ ಹೆಚ್ಚುವರಿ ಕೆಲಸಗಳಿಗೆ ಬಳಸುವುದನ್ನು ತಕ್ಷಣವೇ ನಿಲ್ಲಿಸಬೇಕು. ಹೆಚ್ಚುವರಿ ಕೆಲಸದ ಹೊರೆ ಹೇರುವುದರಿಂದ ಅಂಗನವಾಡಿ ಕೇಂದ್ರಗಳ ಮೂಲ ಕಾರ್ಯಚಟುವಟಿಕೆಗಳಿಗೆ ಅಡ್ಡಿಯಾಗುತ್ತಿದೆ. ನೌಕರರನ್ನು ಅವರ ನಿಯೋಜಿತ ಕೆಲಸಗಳಿಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಒತ್ತಾಯಿಸಿದರು.

ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕೆಂಬ ಸಂಘಟನೆಯ ಹೋರಾಟದ ಫಲವಾಗಿ ಈಗಾಗಲೇ 10 ಸಾವಿರ ಅಂಗನವಾಡಿಗಳಲ್ಲಿ ಈ ವ್ಯವಸ್ಥೆ ಜಾರಿಗೊಂಡಿದೆ. ಉಳಿದ ಅಂಗನವಾಡಿಗಳಲ್ಲಿಯೂ ಶೀಘ್ರವೇ ವಿಸ್ತರಿಸಬೇಕು ಎಂದು ಆಗ್ರಹಿಸಿದರು.

ಐಸಿಡಿಎಸ್ ಯೋಜನೆಯನ್ನು ಕಾಯಂಗೊಳಿಸಬೇಕು, ಯೋಜನೆಯ ಗುಣಮಟ್ಟ ಹೆಚ್ಚಿಸಬೇಕು, ಅನುದಾನ ಹೆಚ್ಚಳ ಮಾಡಬೇಕು. ಅಂಗನವಾಡಿ ನೌಕರರನ್ನು ಸಿ ಮತ್ತು ಡಿ ಶ್ರೇಣಿಯ ಸರ್ಕಾರಿ ನೌಕರರೆಂದು ಪರಿಗಣಿಸಿ ವೇತನ ಹೆಚ್ಚಳ ಮಾಡಬೇಕು ಎಂದು ಹೇಳಿದರು.

ಸರ್ಕಾರದ ಭರವಸೆ ಈಡೇರಿಸಲು ಆಗ್ರಹ

ರಾಜ್ಯ ಕಾಂಗ್ರೆಸ್ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರಿಗೆ ₹15 ಸಾವಿರ, ಅಂಗನವಾಡಿ ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ₹10 ಸಾವಿರ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ₹7 ಸಾವಿರ ವೇತನ ನೀಡುವುದಾಗಿ ಭರವಸೆ ನೀಡಿತ್ತು. ಈ ಭರವಸೆಯನ್ನು ಸರ್ಕಾರ ತಕ್ಷಣವೇ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು. ಆಹಾರ ವಿತರಣೆಯ ಮಾದರಿಯಲ್ಲಿ ಬದಲಾವಣೆ ಮಾಡಿ ಸ್ಥಳೀಯ ಆಹಾರ ಪದ್ಧತಿಗೆ ಆದ್ಯತೆ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರನ್ನು ಹೆಚ್ಚುವರಿ ಕೆಲಸಗಳಿಗೆ ಬಳಸುವುದನ್ನು ರಾಜ್ಯ ಸರ್ಕಾರವೂ ನಿಲ್ಲಿಸಬೇಕು. ಈ ಬೇಡಿಕೆಗಳ ಈಡೇರಿಕೆಗಾಗಿ ದೀರ್ಘಾವಧಿ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಯುವಜನರು ದೇಶದ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಭಾಗವಹಿಸಿ; ಗಾಯಿತ್ರಿ ಶಾಂತೇಗೌಡ

ಚಿಕ್ಕಮಗಳೂರು ನಗರದಲ್ಲಿ ವಿಧಾನ ಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ 'ಅತಂರಾಷ್ಟ್ರೀಯ  ಪ್ರಜಾಪ್ರಭುತ್ವ...

ಚಿಕ್ಕಮಗಳೂರು | ನ. 5ರಂದು ‘ವೋಟ್ ಬಚಾವ್ ದೇಶ ಬಚಾವ್’ ಪ್ರತಿಭಟನೆ 

ಎಐಸಿಸಿ ಕರೆ ಹಾಗೂ ಕೆಪಿಸಿಸಿ ನಿರ್ದೇಶನದ ಮೇರೆಗೆ ದಿನಾಂಕ 05 -11-26...

ಚಿಕ್ಕಮಗಳೂರು | ಸಂಪರ್ಕ ರಸ್ತೆ ಸೇತುವೆ ಕಾಮಗಾರಿ ವಿಳಂಬ: ರಸ್ತೆ ತಡೆಹಿಡಿದ ಗ್ರಾಮಸ್ಥರು

ಜಿಲ್ಲೆಯ ಕೊಪ್ಪ ತಾಲೂಕಿನ ಅತ್ತಿಕೋಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಣಸಿನಹಾಡ್ಯ– ಹೊರಿಕೊಂಡ...

ಮೈಸೂರು | ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸದ ಸರ್ಕಾರದ ವಿರುದ್ಧ ಆಕ್ರೋಶ

ಕಬ್ಬು ಬೆಳೆಗಾರರ ನ್ಯಾಯಯುತ ಹಕ್ಕೊತ್ತಾಯಗಳನ್ನು ಈಡೇರಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು...