ವಿಜಯಪುರ | ಜಿಪಂ, ತಾಪಂ ಚುನಾವಣೆಯಲ್ಲಿ ಮುಸ್ಲಿಂ ಆಕಾಂಕ್ಷಿಗಳಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರಿಗೆ ಮನವಿ

Date:

ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿರುವ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯದ ಆಕಾಂಕ್ಷಿಗಳಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಕೊಡಿಸಲು ಸಂಬಂಧಿಸಿದ ಕ್ಷೇತ್ರಗಳ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಪ್ರಯತ್ನಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಭರವಸೆ ನೀಡಿದರು.

- Advertisement -

ವಿಜಯಪುರ ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಜಿಲ್ಲೆಯ ವಿವಿಧ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನ ನಡೆಸಬೇಕಿದೆ. ಈ ಕುರಿತು ಆಕಾಂಕ್ಷಿಗಳ ಪರವಾಗಿ ಸಂಬಂಧಿಸಿದ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ, ಪಕ್ಷದ ಟಿಕೆಟ್ ದೊರಕಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

Advertisements

ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಯಾವೆಲ್ಲ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಂದ ಮುಸ್ಲಿಂ ಅಭ್ಯರ್ಥಿಗಳು ಸ್ಪರ್ಧಿಸಬಹುದು ಎಂಬುದರ ಕುರಿತು ಸಂಭಾವ್ಯ ಅಭ್ಯರ್ಥಿಗಳು ಹಾಗೂ ಕ್ಷೇತ್ರಗಳ ಪಟ್ಟಿಯನ್ನು ಸಿದ್ಧಪಡಿಸಲಾಗುವುದು. ಬಳಿಕ ಜಿಲ್ಲೆಯ ಸಚಿವರು ಮತ್ತು ಶಾಸಕರಿಗೆ ಮನವಿ ಸಲ್ಲಿಸಿ, ಅಲ್ಪಸಂಖ್ಯಾತರಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವಂತೆ ಒತ್ತಾಯಿಸಲಾಗುವುದು ಎಂದರು.

ಮುಸ್ಲಿಂ ಸಮುದಾಯದವರಿಗೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಟಿಕೆಟ್ ನೀಡುವುದಷ್ಟೇ ಸಾಕಾಗುವುದಿಲ್ಲ. ಟಿಕೆಟ್ ಪಡೆದ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನೂ ಆಯಾ ಕ್ಷೇತ್ರಗಳ ಶಾಸಕರು ವಹಿಸಿಕೊಳ್ಳಬೇಕು ಎಂದು ಎಸ್.ಎಂ. ಪಾಟೀಲ ಗಣಿಹಾರ ಹೇಳಿದರು.

ಸಮಾಜದ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಲು ಅಗತ್ಯವಿರುವ ಆರ್ಥಿಕ ನೆರವು ಮತ್ತು ಇತರ ಸಹಕಾರವನ್ನು ಒದಗಿಸಲು ಪ್ರಯತ್ನಿಸಲಾಗುವುದು. ಅಲ್ಪಸಂಖ್ಯಾತ ಸಮುದಾಯ ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿದ್ದು, ಜಾತ್ಯತೀತ ತತ್ವಗಳ ಹಾಗೂ ಸಂವಿಧಾನದ ರಕ್ಷಣೆಯ ಆಶಯದೊಂದಿಗೆ ಮುಸ್ಲಿಮರು ನಿರಂತರವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತ ಬಂದಿದ್ದಾರೆ. ಇದೀಗ ಗ್ರಾಮೀಣ ಮಟ್ಟದಲ್ಲಿಯೂ ಮುಸ್ಲಿಂ ನಾಯಕತ್ವ ಬಲಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಮುಖಂಡರ ಬೇಡಿಕೆಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಮುಖಂಡ ಎಂ.ಸಿ. ಮುಲ್ಲಾ ಮಾತನಾಡಿ, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳು ಸ್ಥಳೀಯ ಆಡಳಿತದ ಪ್ರಮುಖ ಅಂಗಗಳಾಗಿವೆ. ಸರ್ಕಾರದ ಯೋಜನೆಗಳು ಜನರಿಗೆ ತಲುಪುವಲ್ಲಿ ಈ ಸಂಸ್ಥೆಗಳು ಮಹತ್ವದ ಪಾತ್ರ ವಹಿಸುತ್ತವೆ. ಹೀಗಾಗಿ ಈ ಸಂಸ್ಥೆಗಳಲ್ಲಿ ಮುಸ್ಲಿಂ ಸಮುದಾಯದವರಿಗೆ ಸೂಕ್ತ ಅವಕಾಶ ಕಲ್ಪಿಸಬೇಕು ಎಂದರು.

ಮುಸ್ಲಿಮರಿಗೆ ಹಿಂದುಳಿದ ವರ್ಗ ‘ಎ’ ಮೀಸಲು ಕ್ಷೇತ್ರಗಳಲ್ಲಿ ಮಾತ್ರವಲ್ಲದೆ, ಸಾಮಾನ್ಯ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲು ಅವಕಾಶವಿದೆ. ಮುಸ್ಲಿಂ ಮತದಾರರ ಬೆಂಬಲ ಇರುವ ಕ್ಷೇತ್ರಗಳನ್ನು ಗುರುತಿಸಿ, ಅಂತಹ ಕ್ಷೇತ್ರಗಳಲ್ಲಿ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವಂತೆ ಶಾಸಕರಿಗೆ ಮನವಿ ಸಲ್ಲಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ನೂರ್ ಅಹಮದ್ ಅತ್ತಾರ್, ಅಬ್ದುಲ್ ರಜಾಕ್ ಹೊರ್ತಿ, ಮುನ್ನ ಬಕ್ಷಿ, ಸಾಧಿಕ್ ಸೊಂಬಡ, ರಂಜಾನ್ ಮುಜಾವರ, ಜಹಾಂಗೀರ್ ಭಾಷಾ, ಎಂ.ಎ. ಬಗಲಿ, ಮಹಿಬೂಬ್ ನಾಯ್ಕೋಡಿ, ರಿಯಾಜ್ ಡೋಣೂರ, ಹುಸೇನ್ ಅಂಬೋಲೆ, ಮಹಬೂಬ್ ಮುಲ್ಲಾ (ಟಾಪ್ ಇನ್ ಟೌನ್), ತೌಫಿಕ್ ಸಿಪಾಯಿ, ಇಸಾಕ್ ಹುಸೇನ್ ಪಠಾಣ್, ಯಾಕೋ ಜತ್ತಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...