ವಿಜಯಪುರ |ಸ್ಥಳೀಯ ಸಂಸ್ಥೆಗಳ ಚುನಾವಣೆ ಗೊಂದಲ ನಿವಾರಣೆಗೆ ರಾಜ್ಯ ಚುನಾವಣೆ ಆಯೋಗಕ್ಕೆ ಮನವಿ

Date:

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳ ಕುರಿತು ಸಾರ್ವಜನಿಕರಲ್ಲಿ ಮೂಡಿರುವ ಗೊಂದಲಗಳಿಗೆ ತೆರೆ ಎಳೆಯುವಂತೆ ಆಗ್ರಹಿಸಿ ಗ್ರಾಮ ಸ್ವರಾಜ್ಯ ಕರ್ನಾಟಕ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಪ್ರದೀಪ ಚ. ಪಾಟೀಲ (ನಾಗರದಿನ್ನಿ) ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ.

- Advertisement -

ನವೆಂಬರ್ 26ರಂದು ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ಸಲ್ಲಿಸಿರುವ ಮನವಿಯಲ್ಲಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಸಿದ್ಧತೆ, ಮತದಾರರ ಪಟ್ಟಿ, ಚುನಾವಣಾ ಪ್ರಕ್ರಿಯೆ ಹಾಗೂ ಚುನಾವಣೆ ನಡೆಸುವ ಹೊಣೆಗಾರಿಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಆಯೋಗ ಸ್ಪಷ್ಟ ಮಾಹಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನಕ್ಕೆ 77 ವರ್ಷ | ಸಂವಿಧಾನ ಸೋತಿದೆಯೇ?, ಅನುಷ್ಠಾನದಲ್ಲಿ...

26 ನವೆಂಬರ್ 1949. ಭಾರತದ ಇತಿಹಾಸದಲ್ಲಿ ಇದೊಂದು ಮಹತ್ವದ ಐತಿಹಾಸಿಕ ದಿನ. ಶತಮಾನಗಳ ಸಾಮಾಜಿಕ ಅಸಮಾನತೆ, ಶೋಷಣೆ, ದಮನ ಮತ್ತು ಅನ್ಯಾಯದ ವಿರುದ್ಧ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಸಹೋದರತ್ವದ ಆಧಾರದಲ್ಲಿ ಹೊಸ...

ಪಂಜಾಬ್ ಚುನಾವಣೆ  | ‘ಎಎಪಿ’ಗೆ ಅಳಿವು-ಉಳಿವಿನ ಕದನ; ಹಳೆಯ...

ಮುಂದಿನ ವರ್ಷದ ಆರಂಭದಲ್ಲಿ, ಅಂದರೆ 2027ರ ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ ) ಪಾಲಿಗೆ ಅಕ್ಷರಶಃ 'ಸಾವು-ಬದುಕಿನ' ಪ್ರಶ್ನೆಯಾಗಿ ಪರಿಣಮಿಸಿದೆ. ರಾಷ್ಟ್ರ ರಾಜಕಾರಣದಲ್ಲಿ ತನ್ನ...

‘ಬಿಸ್ಲೆರಿ’ ವಿರುದ್ಧದ ಕ್ರಮಕ್ಕೂ ನೀರು ಮಾರುಕಟ್ಟಗೆ ‘ಅಂಬಾನಿ’ ಪ್ರವೇಶಕ್ಕೂ...

ಭಾರತದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯಲ್ಲಿ ಸುಮಾರು 35ರಿಂದ 36%ರಷ್ಟು ಮಾರುಕಟ್ಟೆ ಪಾಲನ್ನು ಬಿಸ್ಲೆರಿ ಹೊಂದಿದೆ. ಬಿಸ್ಲೆರಿ ನೀರಿನ ಸಂಸ್ಥೆ ‘ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್’ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು...

ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸುವ ಜವಾಬ್ದಾರಿ ರಾಜ್ಯ ಸರ್ಕಾರದ್ದೇ ಅಥವಾ ರಾಜ್ಯ ಚುನಾವಣಾ ಆಯೋಗದ್ದೇ ಎಂಬುದನ್ನು ಅಧಿಕೃತವಾಗಿ ಸ್ಪಷ್ಟಪಡಿಸಬೇಕು ಎಂದು ಮನವಿಯಲ್ಲಿ ಪ್ರಮುಖವಾಗಿ ಉಲ್ಲೇಖಿಸಿದ್ದಾರೆ.ಇದಲ್ಲದೆ, ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ಮೊರೆ ಹೋಗಿರುವ ಹಿನ್ನೆಲೆಯಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಯಾವ ಮತದಾರರ ಪಟ್ಟಿಯನ್ನು ಆಧಾರವಾಗಿ ಬಳಸಲಾಗುತ್ತದೆ ಎಂಬುದರ ಬಗ್ಗೆಯೂ ಸ್ಪಷ್ಟನೆ ನೀಡುವಂತೆ ಕೇಳಿದ್ದಾರೆ.

ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರವಾರು ಮತದಾರರ ಪಟ್ಟಿಗಳನ್ನು ಸಿದ್ಧಪಡಿಸಲು ಕನಿಷ್ಠ ಎರಡು ತಿಂಗಳ ಕಾಲಾವಕಾಶ ಅಗತ್ಯವಿದೆ ಎಂಬ ಅಭಿಪ್ರಾಯಗಳ ಹಿನ್ನೆಲೆಯಲ್ಲಿ, ಚುನಾವಣಾ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಹೇಗೆ ರೂಪಿಸಲಾಗುತ್ತದೆ ಎಂಬುದನ್ನು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಫೆಬ್ರವರಿಯಲ್ಲಿ ಶಾಲಾ ಪರೀಕ್ಷೆಗಳು ನಡೆಯುವ ಸಂದರ್ಭ ಶಿಕ್ಷಣ ಇಲಾಖೆಯ ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲು ಸಾಧ್ಯವೇ? ಬೇಸಿಗೆಯಲ್ಲಿ ಬರ ಪರಿಸ್ಥಿತಿ ತೀವ್ರಗೊಂಡರೆ ಅಂತಹ ಸಂದರ್ಭದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳೇನು? ಎಂಬ ಪ್ರಶ್ನೆಗಳಿಗೂ ಆಯೋಗ ಉತ್ತರ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಸಾರ್ವಜನಿಕರಲ್ಲಿ ಅನಿಶ್ಚಿತತೆ ಮತ್ತು ಗೊಂದಲ ಮುಂದುವರಿಯದಂತೆ, ಚುನಾವಣೆಗೆ ಸಂಬಂಧಿಸಿದ ಪ್ರಮುಖ ವಿಚಾರಗಳ ಬಗ್ಗೆ ರಾಜ್ಯ ಚುನಾವಣಾ ಆಯೋಗ ಶೀಘ್ರ ಅಧಿಕೃತ ಮಾಹಿತಿ ಪ್ರಕಟಿಸಬೇಕು ಎಂದು ಪ್ರದೀಪ ಚ. ಪಾಟೀಲ ಮನವಿ ಮೂಲಕ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸಂವಿಧಾನ ಪಾಲನೆ ಸರ್ವರ ಜವಾಬ್ದಾರಿ: ಎಸ್.ಎಂ.ಜನವಾಡಕರ್

ಭಾರತದ ಸಂವಿಧಾನಕ್ಕೆ ಜಗತ್ತಿನಲ್ಲಿಯೇ ವಿಶಿಷ್ಟ ಸ್ಥಾನ ಮತ್ತು ಮಹತ್ವವಿದೆ. ಬೃಹತ್ ಪ್ರಜಾಪ್ರಭುತ್ವ...

ಬಸವಕಲ್ಯಾಣ | ಜನರಲ್ಲಿ ಸಂವೇದನಾಶೀಲತೆ ಬೆಳೆಸುವ ಶಕ್ತಿ ಸಂವಿಧಾನಕ್ಕಿದೆ : ಭೀಮಾಶಂಕರ ಬಿರಾದರ್

ದೇಶದ ಪ್ರತಿಯೊಬ್ಬ ಪ್ರಜೆಯಲ್ಲೂ ನ್ಯಾಯಪರತೆ, ಸೂಕ್ಷ್ಮತೆ ಹಾಗೂ ಸಂವೇದನಾಶೀಲತೆಯನ್ನು ಬೆಳೆಸುವ ಶಕ್ತಿ...

ಕಲಬುರಗಿ | ನಾಡು, ನುಡಿ ಮೇಲೆ ಅಭಿಮಾನವಿರಲಿ’: ನಾಲವಾರಕರ್

ಕನ್ನಡ ನಾಡು, ನುಡಿ ಮೇಲೆ ಸದಾ ಅಭಿಮಾನ ಇರಬೇಕು ಎಂದು ಕರವೇ...