ವಿಜಯಪುರ | ವಿವಿಧ ನಿಗಮಗಳ ಯೋಜನೆಗಳಡಿ ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ

Date:

ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮಗಳಡಿ ಅನುಷ್ಠಾನಗೊಳಿಸಲಾಗುತ್ತಿರುವ ಸ್ವಯಂ ಉದ್ಯೋಗ, ಉದ್ಯಮಶೀಲತೆ, ಹೈನುಗಾರಿಕೆ ಸೇರಿದಂತೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಹಾಗೂ ಸಹಾಯಧನ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮಗಳ ಮೂಲಕ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಈ ಯೋಜನೆಗಳಡಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ, ಫಾಸ್ಟ್ ಫುಡ್ ಟ್ರಕ್ ಟ್ರೇಲರ್ (ಮೊಬೈಲ್ ಕಿಚನ್ ಉದ್ದೇಶಕ್ಕಾಗಿ ಮಾತ್ರ), ಹೈನುಗಾರಿಕೆ, ಗಂಗಾ ಕಲ್ಯಾಣ ಹಾಗೂ ಭೂ ಒಡೆತನ ಯೋಜನೆಗಳಿಗೆ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ವಿಜಯಪುರ | ರೈತರಿಗೆ ಪ್ರೋತ್ಸಾಹಧನ ನೀಡಿ, ಗ್ರಾಹಕರ ಮೇಲೆ ಹೊರೆ ಹಾಕಬೇಡಿ: ನಾಗರಾಜ ಲಂಬು

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದ್ದು, ಆಸಕ್ತರು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.ಈಗಾಗಲೇ 2023-24 ಹಾಗೂ 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಅರ್ಹ ಫಲಾನುಭವಿಗಳು ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಯೋಜನೆಗಳ ಕುರಿತು ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಸುವ ಪ್ರಕ್ರಿಯೆಗಾಗಿ ವಿಜಯಪುರದ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರ್ಖಾನೆಗಳ ವಿಸ್ತರಣೆಗೆ ವಿರೋಧ: ಕೊಪ್ಪಳ-ಭಾಗ್ಯನಗರ ಬಂದ್‌ಗೆ ಉತ್ತಮ ಸ್ಪಂದನೆ

ತಾಲ್ಲೂಕು ವ್ಯಾಪ್ತಿಯಲ್ಲಿ ಪರಿಸರಕ್ಕೆ ಕಾರ್ಖಾನೆಗಳು ಮಾಲಿನ್ಯ ಉಂಟು ಮಾಡುತ್ತಿರುವ ನಡುವೆಯೇ ಮತ್ತಷ್ಟು...

ವಿಜಯಪುರ | ರೈತರಿಗೆ ಪ್ರೋತ್ಸಾಹಧನ ನೀಡಿ, ಗ್ರಾಹಕರ ಮೇಲೆ ಹೊರೆ ಹಾಕಬೇಡಿ: ನಾಗರಾಜ ಲಂಬು

ನವೆಂಬರ್ 1ರಿಂದ ಹಾಲಿನ ಬೆಲೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದನ್ನು ಭಾರತೀಯ...

ಬಾಗಲಕೋಟೆ |ಇಳಕಲ್‌ನಲ್ಲಿ ನ.1ರಂದು ‘ಯುವ ಸಾಂಸ್ಕೃತಿಕ ಉತ್ಸವ

2026’ಯುವಜನರಲ್ಲಿ ನೈತಿಕ ಮೌಲ್ಯಗಳು, ಸಾಮಾಜಿಕ ಜಾಗೃತಿ, ಸೌಹಾರ್ದತೆ ಹಾಗೂ ಸಕಾರಾತ್ಮಕ ಚಿಂತನೆಗಳನ್ನು...

ರಾಯಚೂರು | ಲಾರಿ-ಟಿಟಿ ವಾಹನ ಡಿಕ್ಕಿ: 13 ಜನರಿಗೆ ಗಾಯ

ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಢಿಕ್ಕಿ ಹೊಡೆದಿದ್ದು, ಓರ್ವನ...