ವಿಜಯಪುರ | ಗಂಗಾ ಕಲ್ಯಾಣ ಯೋಜನೆ ಕೈಬಿಡುವ ಪ್ರಯತ್ನ; ಸಂಸದ ರಮೇಶ ಜಿಗಜಿಣಗಿ ಅಸಮಾಧಾನ

Date:

10 ರಿಂದ 12 ಸಾವಿರ ಹಿಂದುಳಿದ ರೈತರಿಗೆ ಆಧಾರವಾಗಿದ್ದ ʼಗಂಗಾ ಕಲ್ಯಾಣ ಯೋಜನೆʼಗೆ ಸಿದ್ದರಾಮಯ್ಯ ಸರ್ಕಾರ ಎಳ್ಳು ನೀರು ಬಿಡುವ ಪ್ರಯತ್ನ ಮಾಡುತ್ತಿದೆ. ಹಿಂದುಳಿದವರ ಹಾಗೂ ಬಡವರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ ಎಂದು ಸಂಸದ ರಮೇಶ ಜಿಗಜಿಣಗಿ ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗಂಗಾ ಕಲ್ಯಾಣ ಯೋಜನೆ ಸಣ್ಣ ರೈತರಿಗೆ ಒಂದು ವರದಾನವಾಗಿತ್ತು. ಬೋರ್ವೆಲ್ ಕೊರೆಯಿಸಲು ಸಾಧ್ಯವಾಗದ ಬಡ ರೈತರು ಈ ಯೋಜನೆ ಮೂಲಕ ಬೋರ್ವೆಲ್ ಕೊರೆಸಿಕೊಳ್ಳುತ್ತಿದ್ದರು. ಪರಿಣಾಮ ಪ್ರತಿ ವರ್ಷ 15 ಸಾವಿರಕ್ಕೂ ಹೆಚ್ಚು ಜನರು ಈ ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಾಗುತ್ತಿದ್ದರು. ಆದರೆ ರಾಜ್ಯ ಸರ್ಕಾರ ಈ ಯೋಜನೆಗೆ ಆದ್ಯತೆ ನೀಡದೆ ಬೇಜವಾಬ್ದಾರಿತನದಿಂದ ವರ್ತಿಸುತ್ತಿದೆ. ದಲಿತ ಪರ ಸರ್ಕಾರ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತರ ಬೆನ್ನಿಗೆ ಚೂರಿ ಹಾಕುವ ಕಾರ್ಯ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಹಿಂದೆ ನಾನು ಸಮಾಜ ಕಲ್ಯಾಣ ಇಲಾಖೆ ಸಚಿವನಾಗಿದ್ದಾಗ ಮೊರಾರ್ಜಿ ದೇಸಾಯಿ ಶಾಲೆ ಹಾಗೂ ಗಂಗಾ ಕಲ್ಯಾಣ ಯೋಜನೆ ಅನುಷ್ಠಾನಕ್ಕೆ ತಂದಿದ್ದೆ. ರಾಜ್ಯ ಸರ್ಕಾರ ತಮ್ಮ ಪಂಚಗ್ಯಾರೆಂಟಿ ಯೋಜನೆಗೆ ಹಣಕಾಸಿನ ಅಗತ್ಯ ಪೂರೈಸಲು ಗಂಗಾ ಕಲ್ಯಾಣ ಯೋಜನೆಯ ಅನುದಾನ ಬಳಸಿಕೊಳ್ಳುತ್ತಿದೆ. ಈಗಾಗಲೇ ಸುಮಾರು 42 ಸಾವಿರ ಕೋಟಿ ಎಸ್ಸಿಎಸ್ಪಿ-ಟಿಎಎಸ್ಪಿ ಅನುದಾನ ಹಾಗೂ 187 ಕೋಟಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ನುಂಗಿ ನೀರು ಕುಡಿದಿದೆ” ಎಂದು ಕುಟುಕಿದರು.

ಇದನ್ನೂ ಓದಿ: ವಿಜಯಪುರ | ವಿಜಯ ಪತಾಕೆ ಹಾರಿಸಿದ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ

2023-24ರಲ್ಲಿ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೇವಲ 3000 ಬೋರ್‌ವೆಲ್ ಕೊರೆಸಲಾಗಿದೆ. ಇದರ ಪ್ರಮಾಣ ವರ್ಷದಿಂದ ವರ್ಷಕ್ಕೆ ಇಳಿಮುಖ ಮಾಡಿ ಯೋಜನೆಯನ್ನೇ ಬಂದ್ ಮಾಡುವ ಹುನ್ನಾರದಲ್ಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಂವಿಧಾನ, ಪ್ರಜಾಪ್ರಭುತ್ವಕ್ಕೆ ದೇಶ ಒಗ್ಗೂಡಿಸುವ ಶಕ್ತಿಯಿದೆ: ಸುಪ್ರಿಯಾ ಬನಸೂಡೆ

ವೈವಿಧ್ಯತೆಯಲ್ಲಿ ಏಕತೆಯನ್ನು ರೂಪಿಸುವ ಶಕ್ತಿ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗಿದೆ....

ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಸೃಷ್ಟಿಸಲು ಯತ್ನಾಳ್ ಯತ್ನ: ಎಂ.ಬಿ ಪಾಟೀಲ್ ಕಿಡಿ

ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್...

ವಿಜಯಪುರ | ಪ್ರತಿ ಗ್ರಾಮವೂ ಅನುಭವ ಮಂಟಪವಾಗಲಿ: ಎಂ.ಬಿ ಪಾಟೀಲ

ಧಾರ್ಮಿಕ ಪರಂಪರೆ, ಆಧ್ಯಾತ್ಮಿಕತೆ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯಲ್ಲಿ ಭಾರತ ದೇಶ ಜಗತ್ತಿನಲ್ಲಿಯೇ...

ಬಬಲೇಶ್ವರದ ಪ್ರೀತಿ–ವಿಶ್ವಾಸದ ಋಣ, ಅಭಿವೃದ್ಧಿಯಿಂದ ತೀರಿಸುವೆ: ಎಂ.ಬಿ ಪಾಟೀಲ

ಬಬಲೇಶ್ವರದ ಜನತೆ ತಮ್ಮ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ ಹಾಗೂ ಅಭಿಮಾನದ...