ವಿಜಯಪುರ | ಮತದಾರರ ಹಕ್ಕು ಕಸಿಯುವ ಪ್ರಯತ್ನ: ಎಸ್‌ಐಆರ್ ವಿರುದ್ಧ ವಿಜಯಪುರದಲ್ಲಿ ತಿರಂಗ ಯಾತ್ರೆ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿ, ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಪ್ರಗತಿಪರ ಸಂಘಟನೆಗಳು ವಿಜಯಪುರ ನಗರದಲ್ಲಿ ಬೃಹತ್ ತಿರಂಗ ಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದವು.

- Advertisement -

ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ನಾಗರಿಕನ ಮತಕ್ಕೂ ಸಮಾನ ಮೌಲ್ಯವಿದೆ. ಆದರೆ, ಮತದಾರರ ಪಟ್ಟಿಯಿಂದ ಜನರ ಹೆಸರುಗಳನ್ನು ಕೈಬಿಡುವ ಪ್ರಕ್ರಿಯೆಯು ನಾಗರಿಕರ ಮತದಾನದ ಹಕ್ಕಿನ ಮೇಲೆಯೇ ಪ್ರಶ್ನೆ ಎತ್ತುವಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಪ್ರತಿಭಟನೆಯಲ್ಲಿ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಚೆನ್ನು ಕಟ್ಟಿಮನಿ, ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ತೀವ್ರವಾಗಿ ಪ್ರಶ್ನಿಸಿದರು. “ಜ್ಞಾನೇಶ್ ಕುಮಾರ್ ಅವರು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆಯೇ ಅಥವಾ ಬಿಜೆಪಿ ಪಕ್ಷದ ಸದಸ್ಯರೇ?” ಎಂದು ಪ್ರಶ್ನಿಸಿದ ಅವರು, ಸುಮಾರು 13 ಕೋಟಿ ಮತದಾರರನ್ನು ಮತದಾನದ ಪ್ರಕ್ರಿಯೆಯಿಂದ ಹೊರಗಿಟ್ಟಿರುವ ಆರೋಪದ ಕುರಿತು ಆಕ್ಷೇಪ ವ್ಯಕ್ತಪಡಿಸಿದರು.

Advertisements

ಮತದಾರರ ಪಟ್ಟಿಯಿಂದ ಜನರ ಹೆಸರುಗಳನ್ನು ಯಾವ ಕಾರಣಕ್ಕೆ ಕೈಬಿಡಲಾಗಿದೆ ಎಂಬುದಕ್ಕೆ ಈವರೆಗೂ ಸಮರ್ಪಕ ಉತ್ತರ ದೊರೆತಿಲ್ಲ. ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕಾದ ಕೇಂದ್ರ ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಅವರು ನೇರವಾಗಿ ಟೀಕಿಸಿದರು.

ಜನವಾದಿ ಮಹಿಳಾ ಸಂಘಟನೆಯ ಮುಖಂಡೆ ಸುರೇಖಾ ರಜಪೂತ ಮಾತನಾಡಿ, ಎಸ್‌ಐಆರ್‌ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಮತದಾನದ ಹಕ್ಕಿನ ರಕ್ಷಣೆಗಾಗಿ ಜನಪರ ಸಂಘಟನೆಗಳು ಹಾಗೂ ನಾಗರಿಕರು ನಡೆಸುತ್ತಿರುವ ಹೋರಾಟ ನಿಲ್ಲಬಾರದು. ಜನಚಳವಳಿಯನ್ನು ಇನ್ನಷ್ಟು ಬಲಪಡಿಸುವ ಮೂಲಕ ಪ್ರಜಾಪ್ರಭುತ್ವದ ಹಕ್ಕುಗಳನ್ನು ಸಂರಕ್ಷಿಸಬೇಕು ಎಂದು ಕರೆ ನೀಡಿದರು.

ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್ ಕೆವಿನ್ ಸಿಕ್ವೇರಾ ಮಾತನಾಡಿ, ಎಸ್‌ಐಆರ್‌ ಪ್ರಕ್ರಿಯೆಯಲ್ಲಿನ ಲೋಪಗಳ ಕುರಿತು ಕಳವಳ ವ್ಯಕ್ತಪಡಿಸಿದರು. ಬದುಕಿರುವವರನ್ನು ಸತ್ತವರೆಂದು ಹಾಗೂ ಮೃತಪಟ್ಟವರನ್ನು ಬದುಕಿರುವವರೆಂದು ಗುರುತಿಸುವಂತಹ ಗಂಭೀರ ಸಮಸ್ಯೆಗಳು ಎದುರಾಗಿರುವುದು ಈ ಪ್ರಕ್ರಿಯೆಯ ದುರಂತವನ್ನು ತೋರಿಸುತ್ತದೆ ಎಂದು ಹೇಳಿದರು.

ಮತದಾರರ ಪಟ್ಟಿಯಲ್ಲಿನ ಇಂತಹ ಲೋಪಗಳು ಅರ್ಹ ನಾಗರಿಕರ ಹಕ್ಕುಗಳಿಗೆ ಧಕ್ಕೆ ಉಂಟುಮಾಡಬಹುದು. ಆದ್ದರಿಂದ ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲ ಪ್ರಗತಿಪರ ಶಕ್ತಿಗಳು ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಅವರು ಕರೆ ನೀಡಿದರು.

ದಲಿತ ವಿದ್ಯಾರ್ಥಿ ಪರಿಷತ್ತಿನ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಮಾತನಾಡಿ, ಮತದಾನದ ಹಕ್ಕು ಪ್ರಜಾಪ್ರಭುತ್ವದ ಅತ್ಯಮೂಲ್ಯ ಹಕ್ಕುಗಳಲ್ಲಿ ಒಂದಾಗಿದೆ. ಈ ಹಕ್ಕನ್ನು ಅರ್ಹ ನಾಗರಿಕರಿಂದ ಕಸಿದುಕೊಳ್ಳುವ ಯಾವುದೇ ಪ್ರಯತ್ನ ಖಂಡನೀಯ ಎಂದು ಹೇಳಿದರು.

ಜನಸಾಮಾನ್ಯರ ಮತದಾನದ ಹಕ್ಕಿಗೆ ಧಕ್ಕೆ ತರುವ ಕೇಂದ್ರ ಬಿಜೆಪಿ ಸರ್ಕಾರದ ನೀತಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಮತದಾರರ ಹಕ್ಕುಗಳ ರಕ್ಷಣೆಗೆ ಜನರು ಜಾಗೃತರಾಗಬೇಕು ಎಂದು ತಿಳಿಸಿದರು.

ವಿಜಯಪುರದಲ್ಲಿ ನಡೆದ ತಿರಂಗ ಯಾತ್ರೆಯ ಮೂಲಕ ಪ್ರಗತಿಪರ ಸಂಘಟನೆಗಳು ಎಸ್‌ಐಆರ್‌ ಪ್ರಕ್ರಿಯೆಯ ವಿರುದ್ಧ ತಮ್ಮ ವಿರೋಧವನ್ನು ದಾಖಲಿಸುವುದರ ಜೊತೆಗೆ, ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವದ ರಕ್ಷಣೆಗೆ ಸಂಘಟಿತ ಹೋರಾಟದ ಅಗತ್ಯವನ್ನು ಪ್ರತಿಪಾದಿಸಿದವು.

ಪ್ರತಿಭಟನೆಯಲ್ಲಿ ಪ್ರಭುಗೌಡ ಪಾಟೀಲ, ಅಬ್ದುಲ್ ಖದಿರ್, ಸುರೇಶ ಬಿಜಾಪುರ, ಭೋಗೇಶ ಸೊಲ್ಲಾಪುರ, ಸಿದ್ದಲಿಂಗ ಬಾಗೇವಾಡಿ, ಅಕ್ರಮ್ ಮಾಶಾಳಕರ, ಫಯಾಜ್ ಕಲಾದಗಿ, ಸೋಮು ರಣದೇವಿ, ಜಾವೇದ್ ಖದಿರ್ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...

ಶಿವಮೊಗ್ಗ | KSRTC ಬಸ್‌ನ ಟಯರ್ ಸ್ಫೋಟ; ಅನಾಹುತ ತಪ್ಪಿಸಿದ ಚಾಲಕ

ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಬಳಿ KSRTC ಬಸ್‌ನ ಮುಂಭಾಗದ ಟಯರ್ ಬ್ಲಾಸ್ಟ್...

ಖಾಸಗಿ ಶಾಲೆಗಳಲ್ಲಿ ಕನ್ನಡವೇ ಕಾಣುತ್ತಿಲ್ಲ, ಸರ್ಕಾರಿ ಕಚೇರಿಗಳಲ್ಲೇ ಕನ್ನಡವಿಲ್ಲ! ಹೋರಾಟಗಾರರ ಆತಂಕ

ಪ್ರತಿ ವರ್ಷದಂತೆ ವರ್ಷವೂ ಕಲಾವಿದರನ್ನು ಕರೆಯಿಸಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದೆಂದು...