ವಿಜಯಪುರ |ಸಂವಿಧಾನವನ್ನು ಮನುವಾದಕ್ಕೆ ಜೋಡಿಸುವ ಪ್ರಯತ್ನ ಖಂಡನೀಯ: ಎಸ್.ಎಂ. ಪಾಟೀಲ ಗಣಿಹಾರ

Date:

ದೇಶದ ಸಂವಿಧಾನದಲ್ಲಿ ಮನುಸ್ಮೃತಿಯ ಅಂಶಗಳಿವೆ ಎಂಬ ಹೇಳಿಕೆಯನ್ನು ಖಂಡಿಸಿರುವ ಅಹಿಂದ ಮುಖಂಡ ಎಸ್.ಎಂ. ಪಾಟೀಲ ಗಣಿಹಾರ, ಕನ್ಹೇರಿ ಸ್ವಾಮೀಜಿ ಸಂವಿಧಾನವನ್ನು ಮನುವಾದಕ್ಕೆ ಜೋಡಿಸುವ ಮೂಲಕ ದೇಶದಲ್ಲಿ ಮತ್ತೆ ಮನುಸ್ಮೃತಿಯನ್ನು ಮರುಸ್ಥಾಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

- Advertisement -

ವಿಜಯಪುರ ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಸಂವಿಧಾನವನ್ನು ಕಲುಷಿತಗೊಳಿಸುವ ಪ್ರಯತ್ನವನ್ನು ಸಹಿಸುವುದಿಲ್ಲ. ಸಮಾಜವು ಮನುವಾದದ ಶ್ರೇಣೀಕೃತ ವ್ಯವಸ್ಥೆಯಲ್ಲಿಯೇ ಇರಬೇಕು ಎಂಬ ವಿಚಾರವನ್ನು ಪ್ರಚಾರ ಮಾಡುವ ಮೂಲಕ ಜನರಲ್ಲಿ ಗೊಂದಲ ಮೂಡಿಸಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ದೇಶದ ಸಂವಿಧಾನವು ಸರ್ವ ಜನಾಂಗದ ಜನರಿಗೆ ಸಮಾನತೆಯನ್ನು ಕಲ್ಪಿಸುವ ಉದ್ದೇಶ ಹೊಂದಿದೆ. ಸಂವಿಧಾನವನ್ನು ಮುಂದಿಟ್ಟುಕೊಂಡು ಬಹಿರಂಗ ಚರ್ಚೆಗೆ ನಾವು ಸಿದ್ಧರಿದ್ದೇವೆ. ಕನ್ಹೇರಿ ಸ್ವಾಮೀಜಿ ಚರ್ಚೆಗೆ ಸಿದ್ಧರಿದ್ದಾರೆಯೇ ಎಂದು ಪ್ರಶ್ನಿಸಿದ ಅವರು, ಸಂವಿಧಾನದ ಕುರಿತು ಇಂತಹ ಹೇಳಿಕೆಗಳನ್ನು ನೀಡುವ ಬದಲು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಸವಾಲು ಹಾಕಿದರು.ಸ್ವಾಮೀಜಿಗಳು ತಮ್ಮ ಧಾರ್ಮಿಕ ಕಾರ್ಯಗಳನ್ನು ನಿರ್ವಹಿಸಬೇಕು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಮಾತನಾಡುವ ಮೂಲಕ ಸಮಾಜದಲ್ಲಿ ಗೊಂದಲ ಸೃಷ್ಟಿಸಬಾರದು ಎಂದು ಹೇಳಿದರು.

ಲಿಂಗಾಯತ ಗುರುತು ನಾಶಪಡಿಸುವ ಪ್ರಯತ್ನ: ಡಾ. ಜೆ.ಎಸ್. ಪಾಟೀಲಬಸವ ಚಿಂತಕ

ಡಾ. ಜೆ.ಎಸ್. ಪಾಟೀಲ ಮಾತನಾಡಿ, ಕನ್ಹೇರಿ ಸ್ವಾಮೀಜಿ ಲಿಂಗಾಯತ ಮಠಾಧಿಪತಿಗಳು, ಬಸವ ಪ್ರಚಾರಕರನ್ನು ಅನಗತ್ಯವಾಗಿ ಗುರಿಯಾಗಿಸಿಕೊಂಡು ಅನಾಗರಿಕ ಭಾಷೆ ಪ್ರಯೋಗಿಸುತ್ತಿದ್ದಾರೆ. ಪೂರ್ವಾಶ್ರಮದ ಉಡಾಳತನವನ್ನು ಮುಂದುವರಿಸಿಕೊಂಡು ಹೋಗುತ್ತಿರುವಂತೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದರು.

ಲಿಂಗಾಯತರ ಅಸ್ಮಿತೆಯನ್ನು ನಾಶಪಡಿಸುವ ಗುತ್ತಿಗೆ ಪಡೆದವರಂತೆ ಕನ್ಹೇರಿ ಸ್ವಾಮೀಜಿ ನಡೆದುಕೊಳ್ಳುತ್ತಿದ್ದಾರೆ. ಧರ್ಮವನ್ನು ಒಡೆಯುವ ಹಾಗೂ ಸೌಹಾರ್ದತೆಯ ಪರಂಪರೆಗೆ ಧಕ್ಕೆ ತರುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು.ಸಮಾಜದಲ್ಲಿ ಸೌಹಾರ್ದತೆ, ಸಮಾನತೆ ಮತ್ತು ಬಸವಣ್ಣನವರ ವಿಚಾರಧಾರೆಗಳನ್ನು ಬಲಪಡಿಸುವ ಬದಲು ವಿಭಜನೆಯ ವಾತಾವರಣ ಸೃಷ್ಟಿಸುವ ಪ್ರಯತ್ನಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಅಡಿವೆಪ್ಪ ಸಾಲಗಲ್, ರವಿ ಬಿರಾದಾರ್, ಚನ್ನು ಕಟ್ಟಿಮನಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ನ.7ರಂದು ಸಾಲಿಡಾರಿಟಿ ಸಮಾವೇಶ

ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿ ಬಲಪಡಿಸುವುದು ಪ್ರತಿಯೊಬ್ಬ ನಾಗರಿಕನ...

ಚಿಂತಾಮಣಿ ನಗರದ ಭವಿಷ್ಯ ಬದಲು ಮಾಡಲಿದೆ 850 ಎಕರೆ ಟೌನ್‌ಶಿಪ್ ಯೋಜನೆ!

ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿ ದೃಷ್ಟಿಯಿಂದ ನಗರಾಭಿವೃದ್ಧಿ ಚಿಂತಾಮಣಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ...

ಉಡುಪಿ | ಅಲ್ ಫಲಾಹ್ ಮಸೀದಿ ಉದ್ಘಾಟನೆ; ಸರ್ವಧರ್ಮೀಯರ ಸಂಗಮಕ್ಕೆ ಸಾಕ್ಷಿಯಾದ ಗೋಳಿಕಟ್ಟೆ

ಹಾವಂಜೆ ಗೋಳಿಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಲ್ ಫಲಾಹ್ ಜುಮ್ಮಾ ಮಸೀದಿಯ ಉದ್ಘಾಟನೆ,...

ಉಡುಪಿ | ಮೋದಿ–ಅಮಿತ್ ಶಾ ಸರ್ಕಾರದ ಅಂತ್ಯ ಸಮೀಪಿಸುತ್ತಿದೆ: ಲಕ್ಷ್ಮೀಶ ಗಬ್ಬಲಡ್ಕ

ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ಮತದಾನದ ಪಾವಿತ್ರ್ಯತೆಯನ್ನು ರಕ್ಷಿಸುವ ಉದ್ದೇಶದಿಂದ...