ವಿಜಯಪುರ | ಬಾಬು ಜಗಜೀವನ ರಾಮ್ ಹಾಗೂ ಅಂಬೇಡ್ಕರ್ ಸಮಾಜದ ಎರಡು ಕಣ್ಣುಗಳಿದ್ದಂತೆ: ಜಾಲವಾದಿ

Date:

ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ ರಾಮ್ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ಸಮಾಜದ ಎರಡು ಕಣ್ಣುಗಳಿದ್ದಂತೆ. ಈ ಧೀಮಂತ ನಾಯಕರ ಸಂಘಟನಾ ಶಕ್ತಿ ಮತ್ತು ಶಿಕ್ಷಣದ ಮಹತ್ವವನ್ನು ಅರಿತುಕೊಂಡರೆ ಮಾತ್ರ ನಾವು ವೈಚಾರಿಕವಾಗಿ ಬೆಳೆಯಲು ಸಾಧ್ಯ ಎಂದು ವಿಜಯಪುರದ ರಾಜ್ಯ ಪ್ರಶಸ್ತಿ ಪುರಸ್ಕೃತ ಉಪನ್ಯಾಸಕ ಬಸವರಾಜ ಜಾಲವಾದಿ ಹೇಳಿದರು.

- Advertisement -

ಬನಸವ ಬಾಗೇವಾಡಿ ಪಟ್ಟಣದ ಬಸವ ಭವನದಲ್ಲಿ ತಾಲೂಕಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಾಜಿ ಉಪ ಪ್ರಧಾನಮಂತ್ರಿ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಜೀವನದಲ್ಲಿ ಏನಾದರೂ ಸಾಧನೆ ಮಾಡಲು ಜ್ಞಾನ ಸಂಪಾದನೆ ಅತೀ ಮುಖ್ಯ. ಮನುಷ್ಯ ಪುಸ್ತಕಗಳನ್ನು ಹೆಚ್ಚಾಗಿ ಓದಿದಾಗ ಮಾತ್ರ ವೈಚಾರಿಕವಾಗಿ ಮೇಲ್ಮಟ್ಟಕ್ಕೆ ಹೋಗಲು ಸಾಧ್ಯ ಎಂದು ಜಾಲವಾದಿ ತಿಳಿಸಿದರು. ಬಾಬು ಜಗಜೀವನ ರಾಮ್ ಅವರು ಕುಲಸೂಚಕ ಹೆಸರುಗಳನ್ನು ಖಂಡಿಸುತ್ತಿದ್ದರು. ಸಮಾಜದಲ್ಲಿ ಮೇಲು-ಕೀಳು ಮತ್ತು ಜಾತಿ ತಾರತಮ್ಯ ಹೋಗಲಾಡಿಸಲು ಅಂತರಜಾತಿ ವಿವಾಹಗಳು ಸಾಮಾನ್ಯ ಪ್ರಕ್ರಿಯೆಯಾಗಬೇಕು ಎಂಬ ಆಶಯ ಅವರದ್ದಾಗಿತ್ತು ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ ಹಾರಿವಾಳ, “ಬಾಬು ಜಗಜೀವನ ರಾಮ್ ಅವರು ಸರ್ಕಾರಿ ಶಾಲೆಗಳ ಪಕ್ಕದಲ್ಲಿ ಖಾಸಗಿ ಶಾಲೆಗಳಿರುವುದನ್ನು ವಿರೋಧಿಸುತ್ತಿದ್ದರು. ಆದರೆ ಇಂದು ಸರ್ಕಾರಿ ಶಿಕ್ಷಕರೇ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸುತ್ತಿರುವುದು ದುರದೃಷ್ಟಕರ. ಶಿಕ್ಷಕರಿಗೆ ತಮ್ಮ ಮೇಲೆಯೇ ನಂಬಿಕೆ ಇಲ್ಲದಂತಾಗಿದೆ. ಇಂದಿಗೂ ಗ್ರಾಮೀಣ ಭಾಗದ ದೇವಸ್ಥಾನಗಳಲ್ಲಿ ದಲಿತರಿಗೆ ಪ್ರವೇಶ ನೀಡದಿರುವುದು ನೋವಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿಜಯಪುರ | ಮೇ.8ರಂದು ಬೃಹತ್ ರೈತ ಜನ ಜಾಗೃತಿ ಸಮಾವೇಶ; 15 ಸಾವಿರ ರೈತರು ಪಾಲ್ಗೊಳ್ಳುವ ನಿರೀಕ್ಷೆ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರೇಡ್-2 ತಹಶೀಲ್ದಾರ್ ಎಚ್.ಎಸ್. ಅರಕೇರಿ ವಹಿಸಿದ್ದರು. ವೇದಿಕೆಯ ಮೇಲೆ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಡಿಎಸ್ಎಸ್ ಮುಖಂಡ ಅಶೋಕ ಚಲವಾದಿ, ಸಂಗಮೇಶ ಓಲೇಕಾರ ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಶಿವನಗೌಡ ಬಿರಾದಾರ, ಸಂಜೀವ ಕಲ್ಯಾಣಿ, ಪರಶುರಾಮ ದಿಂಡವಾರ, ಗುರುರಾಜ ಗುಡಿಮನಿ, ಮಹಾಂತೇಶ ಸಾಸಬಾಳೆ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ, ತಾಪಂ ಇಒ ವೆಂಕಟೇಶ ವಂದಾಲ, ಸಮಾಜ ಕಲ್ಯಾಣ ಇಲಾಖೆಯ ಶಾಂತಾ ಕಸ್ತೂರಿ, ಪುರಸಭೆ ಮುಖ್ಯಾಧಿಕಾರಿ ವಿದ್ಯಾಧರ ಕಲಾದಗಿ ಸೇರಿದಂತೆ ವಿವಿಧ ಸಮಾಜದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...

ವಿಜಯಪುರ | ವಿಶೇಷಚೇತನರ ಸಬಲೀಕರಣಕ್ಕೆ ವಿವಿಧ ಯೋಜನೆ: ಆನ್‌ಲೈನ್ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ವಿಜಯಪುರ | ರಾಮಾನಂದ ತೀರ್ಥರ ಜನ್ಮದಿನ ಸರ್ಕಾರಿ ಜಯಂತಿಯಾಗಲಿ: ವಿನೋದ ಖೇಡ

ಹೈದ್ರಾಬಾದ್ ವಿಮೋಚನಾ ಚಳವಳಿಗೆ ನೇತೃತ್ವ ವಹಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅಮೋಘ...