ವಿಜಯಪುರ | ಕಾರ್ಮಿಕ ವಿರೋಧಿ ನೀತಿಗಳ ಮೂಲಕ ಗುಲಾಮಗಿರಿಗೆ ತಳ್ಳಲಾಗುತ್ತಿದೆ: ಎನ್ ವೀರೇಶ್

Date:

ನಮ್ಮನ್ನಾಳುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಾಲ್ಕು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ಮತ್ತೊಮ್ಮೆ ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುತ್ತಿವೆ. ಇದಕ್ಕೆ ಕಾರ್ಮಿಕ ವರ್ಗ ಬಲಿಯಾಗದೆ ಪ್ರಜ್ಞಾಪೂರ್ವಕವಾಗಿ ಹೋರಾಟಕ್ಕೆ ಇಳಿಯುವ ಮೂಲಕ ಶೊಷಣೆ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ವೀರೇಶ್ ಎನ್ ಕರೆಕೊಟ್ಟರು.

- Advertisement -

ವಿಜಯಪುರ ನಗರದಲ್ಲಿ 140ನೇ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಅಂಗವಾಗಿ ಎಐಯುಟಿಯುಸಿ ಕಾರ್ಮಿಕ ಸಂಘಟನೆ ಹಮ್ಮಿಕೊಂಡ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಲಂಡನ್‌ನ ʼಹೇʼ ಮಾರುಕಟ್ಟೆಯಲ್ಲಿ ಕಾರ್ಮಿಕರ ರಕ್ತದ ಕೋಡಿ ಹರೆಯಿತು. ತರುವಾಯ ನಡೆದ ಜಾಗತಿಕ ಕಾರ್ಮಿಕ ಚಳವಳಿಯ ಪರಿಣಾಮ ಅಂತಾರಾಷ್ಟ್ರೀಯ ಕಾರ್ಮಿಕ‌ ದಿನದ ಆಚರಣೆ ರೂಢಿಗೆ ಬಂದಿದೆ. ಕಾರ್ಮಿಕರು ಸುಧೀರ್ಘ ತ್ಯಾಗ ಬಲಿದಾನದಿಂದ ಪಡೆದುಕೊಂಡ ಕಾರ್ಮಿಕರ ಹಕ್ಕುಗಳನ್ನು ಇಂದಿನ ಸರ್ಕಾರಗಳು, ಬಂಡವಾಳಶಾಹಿಗಳು ಕಸಿದುಕೊಳ್ಳುತ್ತಿದ್ದಾರೆ. ಕಾರ್ಮಿಕರ ಶ್ರಮ ಶಕ್ತಿಯೇ ಬೆಲೆಕಟ್ಟಲಾಗದ ಸಂಪತ್ತು. ಈ ಸಂಪತ್ತನ್ನು ಬಂಡವಾಳದಾರರು ಕಸಿದು ತಮ್ಮ ಆದಾಯವನ್ನು ಸಾವಿರ‌ಪಟ್ಟು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದರ ವಿರುದ್ದ ಕಾರ್ಮಿಕರು ಎಚ್ಚೆತ್ತುಕೊಳ್ಳಬೇಕು. ತಮ್ಮ ಹಕ್ಕುಗಳಿಗಾಗಿ, ಶೋಷಣೆ ಇಲ್ಲದ ಸಮಾಜವನ್ನು ನಿರ್ಮಾಣ ಮಾಡುವ ಸಲುವಾಗಿ ಹೋರಾಟಕ್ಕೆ ಮುಂದಾಗಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

“ಕಾರ್ಲ್ ಮಾರ್ಕ್ಸ್, ಏಂಗೆಲ್ಸ್, ಲೆನಿನ್ ಮತ್ತು ಸ್ಟಾಲಿನ್ ಇವರೆಲ್ಲರೂ ಜಗತ್ತಿನ ಕಾರ್ಮಿಕ ಚಳವಳಿಯನ್ನು ನಿರ್ದೇಶಿಸಿದರು. ಆದುದರಿಂದಾಗಿಯೇ ಇಂದು ಈ‌ ಮಹಾಶಯರುಗಳು ಇಡೀ‌ ಜಗತ್ತಿನಾದ್ಯಂತ ಗೌರವಕ್ಕೆ, ಕೃತಜ್ಞತೆಗೆ ಪಾತ್ರರಾಗಿದ್ದಾರೆ. ಆಳುವ ಸರ್ಕಾರಗಳು ಬಂಡವಾಳಗಾರರ ಸೇವೆಯಲ್ಲಿ ತೊಡಗಿವೆ ಹಾಗಾಗಿ, ನಿರುದ್ಯೋಗ, ಬಡತನ, ಜಾತಿಪದ್ದತಿ, ಹಣದುಬ್ಬರದಂತಹ ಸಮಸ್ಯೆಗಳು ಬಗೆಹರಿಯದೆ ಮತ್ತಷ್ಟು ಉಲ್ಬಣವಾಗುತ್ತಿವೆ. ಉತ್ತಮ ಆರೋಗ್ಯ, ಶಿಕ್ಷಣ ಜನರಿಗೆ ನಿಲುಕುತ್ತಿಲ್ಲ. ಜಗತ್ತಿಗೆ ಯುದ್ದದ ಕಾರ್ಮೋಡ‌ ಕವಿದಿದೆ. ಇಂತಹ‌ ಸಂದರ್ಭದಲ್ಲಿ ಕಾರ್ಮಿಕ ವರ್ಗ ಧರ್ಮ, ಜಾತಿ, ಭಾಷೆ, ಕೋಮುವಾದಿ ವಿಷಯಗಳಲ್ಲಿ ಒಡೆದುಹೋಗದೆ ಐಕ್ಯಗೊಂಡು ಹೋರಾಟದ ಪಣತೊಟ್ಟು ಸಮಸಮಾಜದ ಕ್ರಾಂತಿಗೆ ಸಿದ್ದತೆ ಮಾಡಿಕೊಳ್ಳಬೇಕು. ಕಾರ್ಮಿಕ ಹೋರಾಟಗಳು ಮಾರ್ಕ್ಸ್‌, ಸ್ಟಾಲಿನ್‌, ಲೆನಿನ್‌, ಏಂಗೆಲ್ಸ್‌ರ ಜೀವನ‌ ಮತ್ತು ವಿಚಾರಗಳಿಂದ ಪ್ರೇರಿತವಾಗಬೇಕು” ಎಂದರು.

ಇದನ್ನೂ ಓದಿ > ವಿಜಯಪುರ | ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾವಂತ ಮಹಿಳೆಯರ ಪಾತ್ರ ದೊಡ್ಡದು: ಕುಲಪತಿ ಉಜ್ವಲ ಚಕ್ರದೇವ್

“ಜಾಗತೀಕರಣ‌, ಖಾಸಗೀಕರಣ, ಉದಾರೀಕರಣ ನೀತಿಗಳನ್ನು ಜಾರಿಗೊಳಿಸಿದ ಅಂದಿನ ಕಾಂಗ್ರೆಸ್ ಸರ್ಕಾರಕ್ಕೂ, ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಜಾರಿ‌ಗೊಳಿಸುತ್ತಿರುವ ಈಗಿನ ಬಿಜೆಪಿ ಸರ್ಕಾರಕ್ಕೂ ಯಾವುದೇ ವ್ಯತ್ಯಾಸವಿಲ್ಲ. ಸರ್ಕಾರಗಳು ಸಾರ್ವಜನಿಕ ಉದ್ದಿಮೆಗಳನ್ನು ಖಾಸಗಿಯವರಿಗೆ ಧಾರೆ ಎರೆಯುವ ಕೆಲಸದಲ್ಲಿ ತೊಡಗಿವೆ. ಇದನ್ನರಿತು ದೇಶದ ದುಡಿಯುವ ವರ್ಗ ಧೀರೋಧಾತ್ತ ಹೋರಾಟಕ್ಕೆ ಮುಂದಾಗಬೇಕು” ಎಂದು ಕರೆಕೊಟ್ಟರು.

ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಉಪಾಧ್ಯಕ್ಷೆ ಕಾಶಿಬಾಯಿ ಜನಗೊಂಡ ವಹಿಸಿದ್ದರು. ಜಿಲ್ಲಾ ಮುಖಂಡರಾದ ಮಹಾದೇವಿ‌ ಧರ್ಮಶೆಟ್ಟಿ‌ ಪ್ರಾಸ್ತವಿಕ ನುಡಿಗಳನ್ನಾಡಿದರು. ಕಾರ್ಮಿಕ ಮುಖಂಡರುಗಳಾದ ಶಶಿಕಲಾ ಮ್ಯಾಗೇರಿ, ಸುನಂದಾ ಕ್ಯಾತಣ್ಣವರ, ಶಿವಾನಂದ, ರಶ್ಮೀ‌ಗುತ್ತೇದಾರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

85ರ ಗ್ರಾನೈಟ್ ಉದ್ಯಮಿಯ ಕಾಮಕೃತ್ಯ; 20 ವರ್ಷಗಳಿಂದ ಅಪ್ರಾಪ್ತೆಯರ ಮೇಲೆ ಅತ್ಯಾಚಾರ

ತಮಿಳುನಾಡಿನ ಪ್ರಭಾವಿ, ಗ್ರಾನೈಟ್ ಉದ್ಯಮಿ 85 ವರ್ಷದ ಆರ್‌. ವೀರಮಣಿ ವಿರುದ್ಧದ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...

ವಸ್ತುವನ್ನು ಸುಡುವುದರಿಂದಷ್ಟೇ ‘ಚರಸ್’ ಎಂದು ಸಾಬೀತುಪಡಿಸಲಾಗದು: 22 ವರ್ಷಗಳ ಬಳಿಕ ಇಬ್ಬರು ಖುಲಾಸೆ

ವಶಪಡಿಸಿಕೊಂಡ ವಸ್ತುವಿನ ಒಂದು ಸಣ್ಣ ಭಾಗವನ್ನು ಸುಟ್ಟು ನೋಡುವುದರಿಂದ ಮಾತ್ರವೇ ಅದು...