ವಿಜಯಪುರ | ಅಸ್ಸಾಂನಲ್ಲಿ ಭಾರತ್‌ ಜೋಡೋ ಯಾತ್ರೆಗೆ ಅಡ್ಡಿ; ಕಾಂಗ್ರೆಸ್‌ ಪ್ರತಿಭಟನೆ

Date:

ಅಸ್ಸಾಂನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಬಿಜೆಪಿ ಕಾರ್ಯಕರ್ತರು ಅಡ್ಡಿ ಮಾಡುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

- Advertisement -

“ರಾಹುಲ್ ಗಾಂಧಿ ಸಾಗುತ್ತಿದ್ದ ಬಸ್ ಅಡ್ಡಗಟ್ಟಿ, ಅವರ ಮೇಲೆ ದಾಳಿ ನಡೆಸಲು ಬಿಜೆಪಿಗರು ಮುಂದಾಗಿದ್ದಾರೆ. ಯಾತ್ರೆ ಅಡ್ಡಿಪಡಿಸಿದವರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಅಸ್ಸಾಂನ ಶಂಕರ ದೇವಾಲಯಕ್ಕೆ ರಾಹುಲ್ ಗಾಂಧಿಗೆ ಪ್ರವೇಶ ನಿರಾಕರಿಸಲಾಗಿದೆ. ನಮ್ಮ ನ್ಯಾಯ ಯಾತ್ರೆಯ ಉದ್ದಕ್ಕೂ ಅಸ್ಸಾಂ ಮುಖ್ಯಮಂತ್ರಿ ತಮ್ಮ ಗೂಂಡಾಗಳ ಮೂಲಕ ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ನ ಶಾಂತಿಯುತ ಯಾತ್ರೆಗೆ ಅಡ್ಡಿಪಡಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಅಬ್ದುಲ್‌ಹಮೀದ ಮುಶ್ರೀಫ್, “ಕೇಂದ್ರದ ಬಿಜೆಪಿ ಸರ್ಕಾರ ಜನವಿರೋಧಿಯಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿ ಎದುರಿಸುತ್ತಿದ್ದು, ಹತಾಶ ಮನೋಭಾವದಿಂದ ದ್ವೇಷ ರಾಜಕಾರಣ ಮಾಡಲು ಹೊರಟಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕಪಾಠ ಕಲಿಸಿ ಮನೆಗೆ ಕಳುಹಿಸುವುದು ಶತಸಿದ್ಧವಾಗಿದೆ. ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಬಿಜೆಪಿಯ ಗೊಡ್ಡು ಬೆದರಿಕೆಗೆ ಅಂಜುವುದಿಲ್ಲ” ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ಡಾ.ಗಂಗಾಧರ ಸಂಬಣ್ಣಿ, ಆಜಾದ ಪಟೇಲ, ವಿದ್ಯಾವತಿ ಅಂಕಲಗಿ, ಬಲರಾಮ ನಾಯಕ, ಆರತಿ ಶಹಾಪೂರ, ಶಬ್ಬೀರ ಜಾಗೀರದಾರ, ಚಾಂದಸಾಬ ಗಡಗಲಾವ, ಡಾ.ರವಿ ಬಿರಾದಾರ, ವಸಂತ ಹೊನಮೊಡೆ, ಹೊನಮಲ್ಲ ಸಾರವಾಡ, ಅಶ್ಫಾಕ ಮನಗೂಳಿ, ಬಿ.ಸಿ. ಸಾವುಕಾರ, ಶರಣಪ್ಪ ಯಕ್ಕುಂಡಿ, ಚನಬಸಪ್ಪ ನಂದರಗಿ, ಹಾಜಿಲಾಲ ದಳವಾಯಿ, ಅಬುಬಕರ ಬಿಜಾಪುರ, ಅಂಗ ಘಟಕಗಳ ಅಧ್ಯಕ್ಷರಾದ ವಿದ್ಯಾರಾಣಿ ತುಂಗಳ, ನಿಂಗಪ್ಪಾ ಸಂಗಾಪೂರ, ಲಾಲಸಾಬ ಕೊರಬು, ಬೀರಪ್ಪ ಜುಮನಾಳ, ಎಸ್.ವ್ಹಿ. ಹಜೇರಿ, ರಾಜೇಶ್ವರಿ ಚೋಳಕೆ, ಪಯಾಜ ಕಲಾದಗಿ, ಫಿರೋಜ ಶೇಖ, ಮಹಾನಗರಪಾಲಿಕೆ ಸದಸ್ಯರಾದ ಅಪ್ಪು ಪೂಜಾರಿ, ಸದ್ದಾಂ ನಾಡೆವಾಲೆ, ಶಫೀಕ ಮನಗೂಳಿ, ಬಂದೆನವಾಜ ಬೀಳಗಿ, ಅಬ್ದುಲ್‌ಪೀರಾ ಜಮಖಂಡಿ, ಅಂಬಣ್ಣ ಕಲಮನಿ, ಇಕ್ಲಾಸ್ ಸುನ್ನೆವಾಲೆ, ಶಕೀಲ ಸುತಾರ, ಸುಂದರಪಾಲ ರಾಠೋಡ, ಈರಪ್ಪ ಜಕ್ಕನ್ನವರ, ಸೈಫನಸಾಬ ಡಾಂಗೆ, ಸಂತೋಷ ಬಾಲಗಾಂವಿ, ಮಹ್ಮದ ಮುಲ್ಲಾ, ಸಲೀಮ್ ಕಲಾದಗಿ, ಅಕ್ರಂ ಮಾಶಾಳಕರ, ಕೆ.ಬಿ. ಲೋಣಿ, ರಜಾಕಸಾಬ ಕಾಖಂಡಕಿ, ಅಕ್ಬರ ಗೋಕಾವಿ, ಧನರಾಜ ಎ., ಗುಲಾಬ ಭಂಡಾರಿ, ಕೆ.ಸಿ. ಪಾರಶೆಟ್ಟಿ, ಎಂ.ಎ. ಬಕ್ಷಿ, ತುಳಸಿ ಪಂಡಿತ್ ಹರಿಜನ, ಮಂಜುನಾಥ ನಿಡೋಣಿ, ಆಸ್ಮಾ ಕಾಲೆಬಾಗ, ಸವಿತಾ ಧನರಾಜ, ವರ್ಷಾ ಭೋವಿ, ಹಮೀದಾ ಪಟೇಲ, ನಾಗಮ್ಮಾ ಪಾಟೀಲ, ಜಯಶ್ರೀ ಭಾರತೆ, ಗಂಗೂಬಾಯಿ ಧುಮಾಳೆ, ರುಬೀನಾ ಹಳ್ಳೂರ, ಎಂ.ಎA. ನಾವಿ, ಪ್ರದೀಪ ಸೂರ್ಯವಂಶಿ, ಮುತ್ತಣ್ಣ ಭೋವಿ, ಈರಪ್ಪ ಕುಂಬಾರ, ಅಬುಬಕರ ಕಂಬಾಗಿ, ಮಹೇಶ ಶಹಾಪೂರ, ಮಹೆಬೂಬ ಚೌಧರಿ, ಚನ್ನಬಸಪ್ಪ ಹರಿಜನ, ಪಿ.ಜಿ. ಕ್ಯಾತನ್, ಸರಫರಾಜ ಮಿರ್ದೆ, ಪ್ರಸಾದ ಚವ್ಹಾಣ, ನಬಿಲಾಲ ಮುಲ್ಲಾ, ಸಿದ್ದುಕುಮಾರ ಮುನ್ನಾಗೋಳ, ಅರ್ಜುನ ಪಟೇಲ್, ಸನಿ ಗವಿಮಠ, ಪ್ರತಾಪ ಚಿಕ್ಕಲಕಿ, ಮಹೇಶ ತಳಕೇರಿ, ರಮೇಶ ಮಂಗಳೂರ, ಷಣ್ಮುಖ ನಡುವಿನಕೇರಿ, ಮಹ್ಮದಯಾಸೀನ್ ಇನಾಮದಾರ, ಅನಿಲ ಸುರಗಿಹಳ್ಳಿ, ಶಾಕಿರ ಖಾಜಿ ಮುಂತಾದವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...