ವಿಜಯಪುರ | ಮನೆಗೂ ಬಾರದ, ಕರೆಗೂ ಸಿಗದ ಬಿಎಲ್‌ಒ; ಪಟ್ಟಿಯಿಂದ ಹೊರಗುಳಿವ ಆತಂಕದಲ್ಲಿ ಮತದಾರ

Date:

ವಿಜಯಪುರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿರುವ ನಡುವೆ ಕೆಲವು ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಕಾರ್ಯವೈಖರಿ ಕುರಿತು ಸಾರ್ವಜನಿಕರಿಂದ ಗಂಭೀರ ಆರೋಪಗಳು ಕೇಳಿಬಂದಿವೆ. ಮತದಾರರಿಗೆ ಅಗತ್ಯ ನಮೂನೆಗಳನ್ನು ವಿತರಿಸದೆ, ಮನೆಗಳಿಗೆ ಭೇಟಿ ನೀಡದೆ ಹಾಗೂ ದೂರವಾಣಿ ಕರೆಗಳಿಗೆ ಸ್ಪಂದಿಸದೆ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದೆ.

- Advertisement -

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಭಾಗ ಸಂಖ್ಯೆ 150ರ ರಹೀಮ್ ನಗರದಲ್ಲಿ ಹಲವು ಮತದಾರರಿಗೆ ಇದುವರೆಗೂ ಫಾರ್ಮ್ ನೀಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಬಿಎಲ್‌ಒ ಅವರನ್ನು ಸಂಪರ್ಕಿಸಲು ಹಲವು ಬಾರಿ ದೂರವಾಣಿ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಇದೇ ರೀತಿಯ ಘಟನೆ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಕೋಳೂರು ಗ್ರಾಮದಲ್ಲಿಯೂ ಬೆಳಕಿಗೆ ಬಂದಿದೆ. ಗ್ರಾಮದ ಸುಮಾರು 25 ಮತದಾರರನ್ನು ಮನೆಗೆ ಭೇಟಿ ನೀಡದೆ ಅವರನ್ನು “ಅಬ್ಸೆಂಟ್” ಎಂದು ದಾಖಲಿಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದಲ್ಲಿಯೂ ಇದೇ ರೀತಿಯ ಸಮಸ್ಯೆಗಳು ಎದುರಾಗಿವೆ ಎಂಬ ದೂರುಗಳು ಕೇಳಿಬಂದಿವೆ.

ಈದಿನ್.ಕಾಮ್ ಜೊತೆಗೆ ಮಾತನಾಡಿದ ರಹೀಮ್ ನಗರದ ನಿವಾಸಿ ರೂಪ ಮತ್ತಿಕೆರಿ, “ನಮ್ಮ ಭಾಗದ ಬಿಎಲ್‌ಒ ಇಲ್ಲಿಯವರೆಗೆ ಮನೆಗೆ ಬಂದಿಲ್ಲ. ಯಾವುದೇ ಫಾರ್ಮ್ ನೀಡಿಲ್ಲ. ಅವರ ಮೊಬೈಲ್ ಸಂಖ್ಯೆಗೆ ನಾನು ಸುಮಾರು 12 ಬಾರಿ ಕರೆ ಮಾಡಿದ್ದರೂ ಸ್ಪಂದಿಸಿಲ್ಲ. ನಾನು ವಿದ್ಯಾವಂತಳಾಗಿ ಚುನಾವಣಾ ಆಯೋಗದ ನಿಯಮಗಳ ಬಗ್ಗೆ ತಿಳಿದಿದ್ದರೂ ಈ ಪರಿಸ್ಥಿತಿ ಎದುರಾಗಿದೆ. ಹಾಗಿದ್ದರೆ ಸಾಮಾನ್ಯ ಮತದಾರರ ಸ್ಥಿತಿ ಏನಾಗಿರಬಹುದು? ಮತದಾರರ ಹಕ್ಕುಗಳಿಗೆ ಧಕ್ಕೆಯಾಗಬಾರದು” ಎಂದು ಆತಂಕ ವ್ಯಕ್ತಪಡಿಸಿದರು.

ನಿನ್ನೆ ಪತ್ರಿಕಾ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ವಿಜಯಪುರ ಮಹಾನಗರ ಪಾಲಿಕೆ ಕಮಿಷನರ್ ವಿಜಯ ಮೆಕ್ಕಳಕಿ, “ಆಗಸ್ಟ್ 8 ಅರ್ಜಿ ಸಲ್ಲಿಕೆಗೆ ಅಂತಿಮ ಗಡುವು. ಬಿಎಲ್‌ಒಗಳು ಮತದಾರರ ಮನೆಮನೆಗೆ ತೆರಳಿ 2-3 ಬಾರಿ ಭೇಟಿ ನೀಡಿದರೂ ಸಹ ಇನ್ನೂ ಸುಮಾರು 21,259 ಮತದಾರರ ಗಣತಿ ನಮೂನೆಗಳು ಮರಳಿ ಸಿಗದೆ ಬಾಕಿ ಉಳಿದಿವೆ” ಎಂದಿದ್ದರು. ಆದರೆ ವ್ಯತಿರಿಕ್ತವಾಗಿ ಬಿಎಲ್‌ಒ ಮೂರು ಬಾರಿ ಮನೆಗೆ ಭೇಟಿ ನೀಡುವುದಿರಲಿ, ಒಂದು ಬಾರಿಯೂ ಭೇಟಿ ನೀಡದಿರುವ ಹಾಗೂ ಅವರ ಬೇಜವಾಬ್ದಾರಿತನದಿಂದ ಹಲವು ಮತದಾರರು ಮತದಾನದ ಹಕ್ಕಿನಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸ್ಥಳೀಯರ ಪ್ರಕಾರ, ಮತದಾರರ ಮನೆಗಳಿಗೆ ಭೇಟಿ ನೀಡದೆ ದಾಖಲೆಗಳಲ್ಲಿ ಮಾಹಿತಿ ನಮೂದಿಸುವುದು ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಯ ಕುರಿತು ಗುಮಾನಿ ಮೂಡಿಸುತ್ತಿದೆ. ಪ್ರತಿ ಮತದಾರರಿಗೂ ಸಮರ್ಪಕ ಮಾಹಿತಿ ನೀಡಿ ಮನೆಮನೆಗೆ ತೆರಳಿ ಪರಿಶೀಲನೆ ನಡೆಸುವುದು ಬಿಎಲ್‌ಒಗಳ ಜವಾಬ್ದಾರಿಯಾಗಿದ್ದು, ಅವರು ತಮ್ಮ ಕಾರ್ಯವನ್ನು ಸಮರ್ಪಕವಾಗಿ ನಿಭಾಯಿಸುತ್ತಿದ್ದಾರೆಯೇ ಎಂಬ ಪ್ರಶ್ನೆ ಉದ್ಭವಿಸಿದೆ ಎಂದಿದ್ದಾರೆ.

ಸಾರ್ವಜನಿಕರ ದೂರಿನ ಕುರಿತು ಈದಿನ್.ಕಾಮ್‌ಗೆ ಪ್ರತಿಕ್ರಿಯೆ ನೀಡಿದ ಮಹಾನಗರ ಪಾಲಿಕೆ ಕಮಿಷನರ್ ವಿಜಯ ಮೆಕ್ಕಳಿಕಿ, “ನಮ್ಮ ಗಮನಕ್ಕೆ ಈ ಸಮಸ್ಯೆ ಬಂದಿಲ್ಲ. ಈ ಕುರಿತು ಶೀಘ್ರವೇ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮತದಾರರನ್ನು ಮತದಾನದ ಹಕ್ಕಿನಿಂದ ದೂರವಿರಿಸುವ ಪ್ರಯತ್ನ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಜಿಲ್ಲಾ ಚುನಾವಣಾಧಿಕಾರಿ ಡಾ. ಆನಂದ ಕೆ. ಮಾತನಾಡಿ, “ಸಾರ್ವಜನಿಕರಿಂದ ಬಂದಿರುವ ದೂರುಗಳನ್ನು ಪರಿಶೀಲಿಸಿ, ಮತದಾರರ ಹಕ್ಕಿಗೆ ಧಕ್ಕೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

“ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರರಿಗೂ ಸಮಾನ ಅವಕಾಶ ಕಲ್ಪಿಸಬೇಕು. ಮನೆಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ದೂರುಗಳು ಸತ್ಯವಾಗಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ, ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಡದಂತೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ರಮೇಶ್ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
+ posts

ವಿಜಯಪುರ ಜಿಲ್ಲಾ ಸಂಯೋಜಕರು

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ರಮೇಶ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಹೆಣ್ಣು ಬೋಗದ ವಸ್ತುವಲ್ಲ, ಸ್ತ್ರೀ ಶೋಷಣೆ ಕೊನೆಗೊಳ್ಳಲಿ: ಸಂಕಮ್ಮ ಸಂಕಣ್ಣನವರ

"ಮಹಿಳೆಯರ ಮೇಲಿನ ಶೋಷಣೆ, ದೌರ್ಜನ್ಯ, ತಾರತಮ್ಯ ಹಾಗೂ ಲಿಂಗಾಧಾರಿತ ಅಸಮಾನತೆಗಳನ್ನು ಕೊನೆಗೊಳಿಸಿ,...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...

ಮಹಿಳಾ ಶಕ್ತಿಯ ಅನಾವರಣ: ಮಂಡ್ಯ ಜಿಲ್ಲಾ ಪಂಚಾಯತ್ ಸ್ತಬ್ಧಚಿತ್ರಕ್ಕೆ ಈಶ್ವರ ಖಂಡ್ರೆ ಮೆಚ್ಚುಗೆ

ಮೈಸೂರು ದಸರಾ ಜಂಬೂಸವಾರಿಯಲ್ಲಿ ಜನಮೆಚ್ಚುಗೆ ಗಳಿಸುವುದರ ಜೊತೆಗೆ ಪ್ರಥಮ ಬಹುಮಾನ ಪಡೆದ...

ಹೊಸನಗರ | ರೂ. 4 ಲಕ್ಷ ಮೌಲ್ಯದ ಸಾಗುವಾನಿ ನಾಟ ವಶ!

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಂದೂರು ಗ್ರಾಮದಲ್ಲಿ...