ವಿಜಯಪುರ | ʼಸಚಿವ ಸ್ಥಾನ ಸಿಗದಿದ್ದಕ್ಕೆ ಎಂ.ಬಿ ಪಾಟೀಲ್‌ ಹೊಣೆʼ ಎನ್ನುವುದು ಹಾಸ್ಯಾಸ್ಪದ: ಸಂಬಣ್ಣಿ

Date:

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಶಾಸಕರಿಗೆ ಸಚಿವ ಸ್ಥಾನ ದೊರೆಯದಿರುವುದಕ್ಕೆ ಸಚಿವ ಎಂ.ಬಿ ಪಾಟೀಲರನ್ನು ದೂಷಿಸುತ್ತಿರುವುದು ಸಂಪೂರ್ಣ ಅಸಮರ್ಥನೀಯ ಎಂದು ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಹೇಳಿದ್ದಾರೆ.

- Advertisement -

ಮಂಗಳವಾರ ಪ್ರಕಟಣೆ ನೀಡಿರುವ ಅವರು, “ವಿಜಯಪುರ ಜಿಲ್ಲೆಯ ಕಾಂಗ್ರೆಸ್‌ನ ಆರು ಮಂದಿ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರಾಗಿದ್ದು, ಈ ಬಾರಿ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ದೊರೆಯುವ ನಿರೀಕ್ಷೆ ಎಲ್ಲ ಕಾರ್ಯಕರ್ತರಲ್ಲೂ ಇತ್ತು. ಈ ಕುರಿತು ಸಚಿವ ಎಂ.ಬಿ. ಪಾಟೀಲರೂ ಪ್ರಾಮಾಣಿಕವಾಗಿ ಪ್ರಯತ್ನ ನಡೆಸಿದ್ದರು. ಆದರೆ, ಈ ಬಾರಿ ಅದು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಜಿಲ್ಲೆಯ ಮತ್ತೊಬ್ಬ ಶಾಸಕರಿಗೆ ಉತ್ತಮ ಸ್ಥಾನಮಾನ ದೊರೆಯುವ ವಿಶ್ವಾಸವಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಸಚಿವ ಸ್ಥಾನ ದೊರೆಯದಿದ್ದಕ್ಕೆ ಎಂ.ಬಿ ಪಾಟೀಲರೇ ಕಾರಣ ಎಂದು ಆರೋಪಿಸುವುದು ಸರಿಯಲ್ಲ. ಒಂದು ವೇಳೆ ಸಚಿವ ಸ್ಥಾನ ದೊರೆತಿದ್ದರೆ ‘ಎಂ.ಬಿ. ಪಾಟೀಲರ ಪ್ರಯತ್ನದಿಂದಲೇ ಸಚಿವರಾದೆವು’ ಎಂದು ಹೇಳುತ್ತಿದ್ದರೆ?, ಸ್ಥಾನ ಸಿಗದಾಗ ಹೊಣೆಗಾರರನ್ನಾಗಿ ಮಾಡುವುದು ಹಾಸ್ಯಾಸ್ಪದ” ಎಂದು ಟೀಕಿಸಿದರು.

“ಪಕ್ಷ ಸಂಘಟನೆಗಾಗಿ ತನು, ಮನ, ಧನದಿಂದ ದುಡಿಯುತ್ತಿರುವ ಎಂ.ಬಿ ಪಾಟೀಲರಿಗೂ ಹಲವು ಬಾರಿ ಸಚಿವ ಸ್ಥಾನ ಕೈತಪ್ಪಿದೆ. 2004ರಲ್ಲಿ ಧರ್ಮಸಿಂಗ್ ನೇತೃತ್ವದ ಸರ್ಕಾರದಲ್ಲೂ, 2018ರಲ್ಲಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲೂ ಅವರಿಗೆ ಸಚಿವ ಸ್ಥಾನ ದೊರೆಯಲಿಲ್ಲ. ಆದರೂ, ಅವರು ಯಾರ ಮೇಲೂ ಆರೋಪ ಮಾಡದೆ ತಾಳ್ಮೆಯಿಂದ ಪಕ್ಷಕ್ಕಾಗಿ ಕೆಲಸ ಮುಂದುವರಿಸಿದ್ದರು ಎಂಬುದನ್ನು ನೆನಪಿಸಿಕೊಳ್ಳಬೇಕು” ಎಂದು ಹೇಳಿದರು.

ರಾಜಕೀಯ ನಾಯಕರು ವಸ್ತುಸ್ಥಿತಿಯನ್ನು ಅರಿತು ಜವಾಬ್ದಾರಿಯುತವಾಗಿ ಮಾತನಾಡಬೇಕು. ಯಾವುದೇ ಆಧಾರವಿಲ್ಲದೆ ವಿನಾಕಾರಣ ಆರೋಪ ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ಡಾ. ಗಂಗಾಧರ ಸಂಬಣ್ಣಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂದಿಗ್ರಾಮ ಉಪಚುನಾವಣೆ: ಮಮತಾ ಬೆಂಬಲ ಘೋಷಿಸಿದ ಗಂಟೆಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಬಂಧನ!

ಪಶ್ಚಿಮ ಬಂಗಾಳದ ಅತ್ಯಂತ ಹೈ-ಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ...

ಬೀದರ್‌ | ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 21ರಂದು ನಡೆಯಲಿರುವ ಧಮ್ಮ ಚಕ್ರ ಪ್ರವರ್ತನ...

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...