ವಿಜಯಪುರ | ‘ಜಲಜೀವನ್ ಮಿಷನ್’ ಕಾಮಗಾರಿ ಪೂರ್ಣಗೊಳಿಸಲು ಡಿಸೆಂಬರ್‌ ಗಡುವು

Date:

ಗ್ರಾಮೀಣ ಭಾಗದಲ್ಲಿ ಬೇಸಿಗೆ ಸೇರಿದಂತೆ ಯಾವುದೇ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅರ್ಧಕ್ಕೆ ನಿಂತಿರುವ ನೀರು ಸರಬರಾಜು ಕಾಮಗಾರಿಗಳಿಗೆ ವೇಗ ನೀಡುವುದರ ಜೊತೆಗೆ, ಗ್ರಾಮಗಳಲ್ಲಿನ ನೀರಿನ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು ಎಂದು ವಿಜಯಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ವಿಜಯಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಈ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ಒಟ್ಟು 1,000 ಕಾಮಗಾರಿಗಳು ಅನುಷ್ಠಾನಗೊಳ್ಳುತ್ತಿದ್ದು, ಈ ಪೈಕಿ 841 ಕಾಮಗಾರಿಗಳು ಪೂರ್ಣಗೊಂಡಿವೆ. ಬಾಕಿ ಉಳಿದಿರುವ ಕಾಮಗಾರಿಗಳನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ವೇಗವಾಗಿ ಪೂರ್ಣಗೊಳಿಸಿ, ಡಿಸೆಂಬರ್ ಅಂತ್ಯದೊಳಗೆ ಭೌತಿಕವಾಗಿ ಕಾಮಗಾರಿಗಳನ್ನು ಮುಗಿಸಬೇಕು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

275 ಗ್ರಾಮಗಳ ಪ್ರಮಾಣೀಕರಣ ಬಾಕಿ

ಜಿಲ್ಲೆಯ ಒಟ್ಟು 654 ಗ್ರಾಮಗಳ ಪೈಕಿ 379 ಗ್ರಾಮಗಳು ಮಾತ್ರ ‘ಹರ್ ಘರ್ ಜಲ್’ ಆ್ಯಪ್‌ನಲ್ಲಿ ಪ್ರಮಾಣೀಕರಣಗೊಂಡಿವೆ. ಇನ್ನೂ 275 ಗ್ರಾಮಗಳ ಪ್ರಮಾಣೀಕರಣ ಬಾಕಿ ಉಳಿದಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬಾಕಿ ಇರುವ ಗ್ರಾಮಗಳ ಪ್ರಮಾಣೀಕರಣವನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಹಾಗೂ ಕಿರಿಯ ಎಂಜಿನಿಯರ್‌ಗಳಿಗೆ ಸೂಚಿಸಲಾಯಿತು.

ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ಒಟ್ಟು 4.64 ಲಕ್ಷ ಮನೆಗಳ ಪೈಕಿ 4.16 ಲಕ್ಷ ಮನೆಗಳಿಗೆ ಈಗಾಗಲೇ ಜಲಜೀವನ್ ಮಿಷನ್ ಅಡಿಯಲ್ಲಿ ನಳ ಸಂಪರ್ಕ ಕಲ್ಪಿಸಲಾಗಿದೆ. ಉಳಿದ ಮನೆಗಳಿಗೂ ಡಿಸೆಂಬರ್ ಒಳಗಾಗಿ ನಳ ಸಂಪರ್ಕ ಒದಗಿಸುವ ಕಾರ್ಯವನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಸಿಇಒ ಸೂಚಿಸಿದರು.

ತಾಲ್ಲೂಕು ಮಟ್ಟದಲ್ಲಿ ಕುಡಿಯುವ ನೀರಿನ ಪರಿಸ್ಥಿತಿಯ ಮೇಲೆ ನಿರಂತರ ನಿಗಾ ಇರಿಸಲು ಸಂಬಂಧಿಸಿದ ಅಧಿಕಾರಿಗಳು ಪ್ರತಿ ವಾರ ಸಮನ್ವಯ ಸಭೆ ನಡೆಸಬೇಕು. ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಿ, ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು. ಅಂತಹ ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಿ ಜಿಲ್ಲಾ ಪಂಚಾಯಿತಿಗೆ ತುರ್ತಾಗಿ ವರದಿ ಸಲ್ಲಿಸುವಂತೆ ಸೂಚಿಸಲಾಯಿತು.

ಹೊಸದಾಗಿ ಕೊಳವೆಬಾವಿ ಕೊರೆಸುವುದಕ್ಕಿಂತ ಈಗಾಗಲೇ ಕೊರೆಸಿರುವ ಕೊಳವೆಬಾವಿಗಳಿಗೆ ಆದ್ಯತೆಯ ಮೇರೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ಲಭ್ಯವಿರುವ ನೀರಿನ ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಜಿಲ್ಲೆಯ ಕೆಲವು ಶಾಲೆಗಳಿಗೆ ಇನ್ನೂ ನಳ ಸಂಪರ್ಕ ಕಲ್ಪಿಸದಿರುವ ವಿಷಯ ಸಭೆಯಲ್ಲಿ ಪ್ರಸ್ತಾಪವಾಯಿತು. ಬಾಕಿ ಇರುವ ಶಾಲೆಗಳ ಪಟ್ಟಿಯನ್ನು ತಕ್ಷಣ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಸಲ್ಲಿಸಿ, ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಜಲಧಾರೆ ಯೋಜನೆಯ ಸ್ಕಿಮ್–1 ಮತ್ತು ಸ್ಕಿಮ್–2ರ ಕಾಮಗಾರಿಗಳ ಪ್ರಗತಿಯನ್ನೂ ಸಭೆಯಲ್ಲಿ ಪರಿಶೀಲಿಸಲಾಯಿತು. ಸ್ಕಿಮ್–1ರ ಕಾಮಗಾರಿಗಳು ಶೇ.86ರಷ್ಟು ಪ್ರಗತಿ ಸಾಧಿಸಿರುವ ಹಿನ್ನೆಲೆಯಲ್ಲಿ ಉಳಿದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಮಾರ್ಚ್ 2027ರೊಳಗೆ ಪ್ರಾಯೋಗಿಕ ಚಾಲನಾ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ಟಾಸ್ಕ್‌ಫೋರ್ಸ್ ಅಡಿಯಲ್ಲಿ ಬಿಡುಗಡೆಯಾಗಿರುವ ಅನುದಾನವನ್ನು ಸರ್ಕಾರದ ಮಾರ್ಗಸೂಚಿಯಂತೆ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಿಇಒ ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ವರ್ಧಮಾನ ಗೊಂಗಡಿ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ನಲ್ಲಿ ಉತ್ತರ ಪ್ರದೇಶದ ಮತದಾರರ ಪಟ್ಟಿಗೆ 16.18 ಲಕ್ಷ ನಿಗೂಢ ಮತದಾರರ ಸೇರ್ಪಡೆ: ಏನಿದು ವರದಿ?

ಉತ್ತರ ಪ್ರದೇಶದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR)ಯ ಆರಂಭಿಕ ಹಂತಗಳಲ್ಲಿ 16.18...

ರಾಯಚೂರು | ನಾಳೆ ಜಿಲ್ಲೆಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ನಾಳೆ (ಅಕ್ಟೋಬರ್ 8ರಂದು) ರಾಯಚೂರು ಹಾಗೂ...

ಮಂಗಳೂರು | 350 ಪೊಲೀಸ್ ಠಾಣೆಗಳಲ್ಲಿ ಹುಡುಕಿದರೂ ‘ಲವ್ ಜಿಹಾದ್’ ದೂರು ಸಿಗಲಿಲ್ಲ : ಎಂ.ಜಿ. ಹೆಗಡೆ

‘ಲವ್ ಜಿಹಾದ್’ ಕುರಿತು ಕಳೆದ ಎರಡು ದಶಕಗಳಿಂದ ನಡೆಯುತ್ತಿರುವ ಚರ್ಚೆ, ಪ್ರಚಾರ...

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...