ವಿಜಯಪುರ | ನೀಟ್ ಪರೀಕ್ಷಾ ಕೇಂದ್ರ ಪರಿಶೀಲಿಸಿದ ಸಿಇಒ ರಿಷಿ ಆನಂದ್‌

Date:

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಹಿನ್ನೆಲೆಯಲ್ಲಿ ಪರೀಕ್ಷಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಗತ್ಯ ಸಿದ್ಧತೆಗಳನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ರಿಷಿ ಆನಂದ್‌ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಬಗ್ಗೆ ಸ್ಥಳದಲ್ಲೇ ಮಾಹಿತಿ ಪಡೆದುಕೊಂಡ ಅವರು, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ಸ್ವಚ್ಛತೆ, ಪರೀಕ್ಷಾ ಕೊಠಡಿಗಳ ಸಿದ್ಧತೆ, ವಿದ್ಯುತ್ ಪೂರೈಕೆ, ಆಸನ ವ್ಯವಸ್ಥೆ, ಆರೋಗ್ಯ ಸೇವೆಗಳ ಲಭ್ಯತೆ ಹಾಗೂ ಭದ್ರತಾ ಕ್ರಮಗಳ ಕುರಿತು ಸಮಗ್ರವಾಗಿ ಅವಲೋಕನ ಮಾಡಿದರು. ಅಲ್ಲದೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪರಿಸ್ಥಿತಿ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗುವ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಪರೀಕ್ಷಾ ದಿನದಂದು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು, ಪರೀಕ್ಷಾ ಪ್ರಕ್ರಿಯೆ ಪಾರದರ್ಶಕ, ಶಿಸ್ತುಬದ್ಧ ಹಾಗೂ ಸುಗಮವಾಗಿ ನಡೆಯುವಂತೆ ನಿಗಾ ವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಅತ್ಯಂತ ಎಚ್ಚರಿಕೆಯಿಂದ ಮತ್ತು ನಿಷ್ಠೆಯಿಂದ ನಿರ್ವಹಿಸಬೇಕು” ಎಂದು ನಿರ್ದೇಶನ ನೀಡಿದರು.

“ಅಗ್ನಿಶಾಮಕ, ಆರೋಗ್ಯ, ಪೊಲೀಸ್ ಹಾಗೂ ಶಿಕ್ಷಣ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಿ ಯಾವುದೇ ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಸನ್ನದ್ಧರಾಗಿರಬೇಕು. ಪರೀಕ್ಷಾರ್ಥಿಗಳ ಸುರಕ್ಷತೆ ಮತ್ತು ಅನುಕೂಲತೆಗೆ ಹೆಚ್ಚಿನ ಆದ್ಯತೆ ನೀಡಿ” ಎಂದು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

“ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ನೀಟ್ ಪರೀಕ್ಷೆಯ ಯಶಸ್ವಿ ಆಯೋಜನೆಗಾಗಿ ಅಗತ್ಯವಿರುವ ಎಲ್ಲಾ ಪೂರ್ವಸಿದ್ಧತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣದಲ್ಲಿ ಪರೀಕ್ಷೆ ಬರೆಯಲು ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರಿಶೀಲನೆ ವೇಳೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ನೀಟ್ ಪರೀಕ್ಷೆಯನ್ನು ಯಶಸ್ವಿಯಾಗಿ ಮತ್ತು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ಸಾವು: ಮೃತರ ಮನೆಗೆ ಜಿಲ್ಲಾಧಿಕಾರಿ ಭೇಟಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ...

ಬೀದರ್‌ | ವರ್ಷ ಕಳೆದರೂ ಸಿಗದ ರೈತ ಆತ್ಮಹತ್ಯೆ ಪರಿಹಾರ: ಸಂಕಷ್ಟದಲ್ಲಿ ಸಂತ್ರಸ್ತ ಕುಟುಂಬಗಳು!

ಬೆಳೆನಷ್ಟ, ಸಾಲದ ಶೂಲದಂತಹ ಸಂಕಷ್ಟಗಳಿಂದ ಕಂಗೆಟ್ಟು ರೈತ ಆತ್ಮಹತ್ಯೆಗೆ ಶರಣಾದರೆ, ಅವರ...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...