ವಿಜಯಪುರ | ʼಚಿಗುರು ಕಲಿಕಾ ಕೇಂದ್ರಗಳ ಮಕ್ಕಳ ಮೇಳʼ

Date:

ಮಕ್ಕಳಿಗೆ ಶಿಕ್ಷಣದ ಮಹತ್ವದ ಜೊತೆಗೆ ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಜವಾಬ್ದಾರಿ ಮತ್ತು ಕಲಿಕಾ ಕೇಂದ್ರಗಳಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುವುದರ ಮೂಲಕ ಮಕ್ಕಳ ಪ್ರತಿಭೆಯನ್ನು ಹೊರತರಬೇಕು ಎಂದು ಶಿಕ್ಷಕರಿಗೆ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಹಾಗೂ ನ್ಯಾಯವಾದಿ ದಾನೇಶ್ ಅವಟಿ ತಿಳಿಸಿದರು.

- Advertisement -

ವಿಜಯಪುರದ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಅನೌಪಚಾರಿಕ ಶಿಕ್ಷಣ ಸಂಸ್ಥೆ, ಚಿಗುರು ಕಲಿಕಾ ಕೇಂದ್ರಗಳ ಸಹಯೋಗದಲ್ಲಿ ಆಯೋಜಿಸಿದ್ದ ʼಚಿಗುರು ಕಲಿಕಾ ಕೇಂದ್ರಗಳ ಮಕ್ಕಳ ಮೇಳʼ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅತಿಥಿಯಾಗಿ ಆಗಮಿಸಿದ್ದ ಫಾದರ್ ರೋನಿ‌ ಮಾತನಾಡಿ, “ಕ್ರಿಸ್‌ಮಸ್ ಪ್ರೀತಿ, ಕರುಣೆ, ಪರಸ್ಪರ ಗೌರವ ಮತ್ತು ಸಹಾಯ ನೀಡುವುದಾಗಿದೆ. ನಾವೆಲ್ಲರೂ ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಹೆಸರನ್ನು ಸಂಪಾದಿಸಬೇಕಾಗಿದೆ. ಈ ಮೂಲಕ ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಲು ಸಾಧ್ಯವಾಗುತ್ತದೆ” ಎಂದು ತಿಳಿಸಿದರು.

ಚಿಗುರು ಕಲಿಕಾ ಕೇಂದ್ರ

ಫಾದರ್‌ ಟಿಯೋಲ ಮಚಾದೊ ಮಾತನಾಡಿ, “ಕಲಿಕಾ ಕೇಂದ್ರಗಳು ಪ್ರಸ್ತುತದಲ್ಲಿ ಸ್ಲಂ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಿವೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕಲಿಕಾ ಕೇಂದ್ರಗಳು ಪ್ರಾರಂಭವಾಗಬೇಕಿದೆ. ಈ ಮೂಲಕ ಪ್ರತಿ ಮಗುವಿಗೂ ಶಿಕ್ಷಣ ದೊರೆದಂತಾಗಬೇಕು. ಕಲಿಕಾ ಕೇಂದ್ರಗಳು ಕೇವಲ ಪಠ್ಯಕ್ಕೆ ಮಾತ್ರ ಒತ್ತು ಕೊಡದೆ ಮಕ್ಕಳ ನೈಜ ಪ್ರತಿಭೆಗಳನ್ನು ಹೊರತರುವ ಕೇಂದ್ರಗಳಾಗಿವೆ. ಬರುವ ವರ್ಷದಲ್ಲಿ ಮಕ್ಕಳ ಸಂಖ್ಯೆ ಇನ್ನೂ ಹೆಚ್ಚಲಿ” ಎಂದು ಕ್ರಿಸ್‌ಮಸ್ ಹಬ್ಬದ ಶುಭಾಷಯ ಕೋರಿ ಆಶಿಸಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು

ಇದೇ ವೇಳೆ ಮಕ್ಕಳಿಗೆ ವಿವಿಧ ಆಟೋಟಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ಅನೌಪಚಾರಿಕ ಶಿಕ್ಷಣ ಸಂಸ್ಥೆ ನಿರ್ದೇಶಕ ಫಾದರ್ ಟಿಯೋಲ ಮಚಾದೊ, ಫಾದರ್ ರೋನಿ ಹಾಗೂ ಬ್ರದರ್ ಚೇತನ್ ಹಾಗೂ ಚಿಗುರು ಕಲಿಕಾ ಕೇಂದ್ರದ ಶಿಕ್ಷಕಿಯರು ಮತ್ತು ಅನೌಪಚಾರಿಕ ಶಿಕ್ಷಣ ಸಂಸ್ಥೆ ಸಿಬ್ಬಂದಿ ವರ್ಗದವರು ಮತ್ತು 8 ಕಲಿಕಾ ಕೇಂದ್ರದಿಂದ 200 ಮಂದಿ ಮಕ್ಕಳು ಕಾರ್ಯಕ್ರಮದಲ್ಲಿ ಇದ್ದರು.‌

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...