ವಿಜಯಪುರ | ಸಿಎಂ ಇಬ್ರಾಹಿಂ ಜೆಡಿಎಸ್ ಬಿಡುವುದಿಲ್ಲ: ಜಿ.ಟಿ ದೇವೇಗೌಡ

Date:

ಸಿಎಂ ಇಬ್ರಾಹಿಂ ಜೆಡಿಎಸ್ ಬಿಡುವುದಿಲ್ಲ ಎಂದು ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷ ಜಿ.ಟಿ ದೇವೇಗೌಡ ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿ ಜೊತೆಗೆ ಹೋಗಲು ಇಬ್ರಾಹಿಂಗೆ ವಿರೋಧವಿಲ್ಲ. ಅವರೇ ಮುಂದೆ ನಿಂತು ನನ್ನ ಅಧ್ಯಕ್ಷ ಸ್ಥಾನ ಅನೌನ್ಸ್ ಮಾಡಿದ್ದಾರೆ. ಸಿ.ಎಂ ಇಬ್ರಾಹಿಂರದ್ದು ಈಗ ಏನು ಚರ್ಚೆ ಇಲ್ಲ. ಮುಂದೆ ಒಟ್ಟಾಗಿ ಹೇಗೆ ಹೋಗಬೇಕು ಅನ್ನೋ ಬಗ್ಗೆ ಇಬ್ರಾಹಿಂ ಸಲಹೆ ಇದೆ. ದೊಡ್ಡ ಗೌಡರ ಜೊತೆಗೆ ಸಲಹೆ ಹಂಚಿಕೊಂಡಿದ್ದಾರೆ” ಎಂದರು.

“ಬಿಜೆಪಿ ಜೊತೆಗೆ ಎಷ್ಟು ಸೀಟ್ ಹಂಚಿಕೆಯಾಗಬೇಕು. ಮುಂದೆ ಯಾವ ರೀತಿ ನಡೆದುಕೊಳ್ಳಬೇಕು ಎನ್ನುವ ಬಗ್ಗೆ ಇಬ್ರಾಹಿಂ ಸಲಹೆ ನೀಡಿದ್ದಾರೆ. ಬಿಜೆಪಿ ಜೊತೆ ಹೋಗಲು ಯಾವುದೇ ವಿರೋಧವಿಲ್ಲ ಎಂಬುದನ್ನು ಇಬ್ರಾಹಿಂ ವ್ಯಕ್ತಪಡೆಸಿದ್ದಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶಾಸಕರ ಅನುದಾನ ಕಡಿತ, ಪ್ರತಿಭಟನೆ ವಿಚಾರಕ್ಕೆ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, “ಈಗಾಗಲೇ ಶಾಸಕ ಕಾಗೆ ಹಾಗೂ ಬಿ.ಆರ್ ಪಾಟೀಲ್ ತಮ್ಮ ಅಸಮಧಾನ ಹೊರ ಹಾಕಿದ್ದಾರೆ. ಭೀಕರವಾದ ಬರಗಾದಲ್ಲೂ ಸರ್ಕಾರ ರೈತರ ಕಡೆಗೆ ನೋಡುತ್ತಿಲ್ಲ. ರೈತರಿಗೆ ನೀಡಬೇಕಾದ ಅನುದಾನ ನೀಡುತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಇದೆ ಎಂದು ಅನಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದ ಜನರಿಗೆ ಕೊರಗು ಉಂಟಾಗಿದೆ. ಕಾಂಗ್ರೆಸ್‌ಗೆ ಅಧಿಕಾರ ಕೊಟ್ಟು ತಪ್ಪು ಮಾಡಿದ್ದೇವೆಂದು ಜನರಿಗೆ ಮನದಟ್ಟಾಗಿದೆ” ಎಂದರು.

“ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ತೆಗೆಯಬೇಕಿದೆ. ಇದಕ್ಕಾಗಿ ಜೆಡಿಎಸ್-ಬಿಜೆಪಿ ಒಟ್ಟಾಗಿ ಹೋಗಬೇಕು. ಮುಂದೆ ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ದೇಶಕ್ಕೆ ಅಗತ್ಯವಾಗಿದೆ. ಅವರನ್ನು ಉಳಿಸುವ ನಿರ್ಣಯ ಮಾಡಿದ್ದೇವೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...

ದಾವಣಗೆರೆ | ಕಾಂಗ್ರೆಸ್‌ಗೆ ಮಡಿವಾಳ ಸಮಾಜ ಬೆಂಬಲ; ಬೇಡಿಕೆಗಳ ಈಡೇರಿಕೆಗೆ ಆಗ್ರಹ

ರಾಜ್ಯದಲ್ಲಿನ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವುದು, ರಾಜ್ಯದ ಎಲ್ಲ ತಾಲೂಕಿನಲ್ಲಿ...