ವಿಜಯಪುರ | ಮಗುವಿಗೆ ಕಿವಿಯಾದ ಕಾಕ್ಲಿಯರ್‌ ಇಂಪ್ಲಾಂಟ್‌

Date:

ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ, ಬಿ.ಎಂ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕಿವಿ, ಮೂಗು ಮತ್ತು ಗಂಟಲು(ENT) ವಿಭಾಗದಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಸ್ವಿಚ್ ಆನ್ ಕಾರ್ಯ ಯಶಸ್ವಿಯಾಗಿ ನಡೆಯಿತು.

ಬಿ.ಎಲ್.ಡಿ.ಇ ಡೀಮ್ಡ್ ವಿವಿ ಕುಲಪತಿ ಡಾ. ಅರುಣ ಚಂ. ಇನಾಮದಾರ, ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ಆಸ್ಪತ್ರೆಯ ಅಧೀಕ್ಷಕ ಡಾ. ಸಂಜೀವ ಬೆಂಟೂರ, ಹಿರಿಯ ಉಪಪ್ರಾಂಶುಪಾಲ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಕಾಕ್ಲಿಯರ್ ಇಂಪ್ಲಾಂಟ್ ಸಮನ್ವಯ ಅಧಿಕಾರಿ ಡಾ. ಎಚ್ ಟಿ ಲತಾದೇವಿ ಹಾಗೂ ಇನ್.ಎನ್.ಟಿ ವಿಭಾಗದ ಮುಖ್ಯಸ್ಥ ಡಾ. ರವೀಂದ್ರ ಕರಡಿ ಉಪಸ್ಥಿತರಿದ್ದರು.

- Advertisement -

ಹುಟ್ಟು ಕಿವುಡುತನದಿಂದ ಬಳಲುತ್ತಿದ್ದ ಈ ಮಗುವಿಗೆ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದ್ದು, ಸ್ವಿಚ್ ಆನ್ ಪ್ರಕ್ರಿಯೆಯ ಮೂಲಕ ಮೊದಲ ಬಾರಿಗೆ ಧ್ವನಿಯನ್ನು ಆಲಿಸುವ ಅನುಭವವನ್ನು ಮಗು ಪಡೆಯಿತು‌.

ಈ ಸಂದರ್ಭದಲ್ಲಿ ಮಾತನಾಡಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ವೈದ್ಯರು ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದ ಕುಲಪತಿ ಡಾ. ಅರುಣ ಚಂ ಇನಾಮದಾರ, “ವೈದ್ಯರ ಪರಿಣತಿ, ಪಾಲಕರ ಸಹಕಾರ ಹಾಗೂ ಆಸ್ಪತ್ರೆಯ ಸೌಲಭ್ಯಗಳ ಸಮನ್ವಯದಿಂದ ಇಂಥ ಜೀವಿತ ಪರಿವರ್ತನೆಯ ಚಿಕಿತ್ಸೆಗಳು ಸಾಧ್ಯವಾಗುತ್ತಿವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎರಡನೇ ಬರಪಟ್ಟಿಗೂ ಬಾರದ ರಾಮದುರ್ಗ, ಸವದತ್ತಿ: ಸಂಕಷ್ಟದಲ್ಲಿ ರೈತರು,...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯ ಕುರಿತು ಮಾಹಿತಿ ನೀಡಿದ ಡಾ. ಎಚ್. ಟಿ ಲತಾದೇವಿ, “ಶಸ್ತ್ರಚಿಕಿತ್ಸೆಯ ನಂತರ ಎರಡು ವರ್ಷಗಳ ಕಾಲ ವಾಕ್-ಶ್ರವಣ ತರಬೇತಿ ನೀಡಲಾಗುತ್ತದೆ. ಇದರ ಮೂಲಕ ಮಗು ಸಾಮಾನ್ಯ ಮಕ್ಕಳಂತೆ ಶಿಕ್ಷಣ ಪಡೆದು ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ” ಎಂದರು.

ಪಾಲಕರಿಗೆ ಅಗತ್ಯ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡಿದ ಅವರು, ಕಾಕ್ಲಿಯರ್ ಇಂಪ್ಲಾಂಟ್ ಕಿಟ್ ಹಸ್ತಾಂತರಿಸಿ ಮಗುವಿನ ಮುಂದಿನ ಜೀವನ ಸುಖಮಯವಾಗಿರಲಿ ಎಂದು ಶುಭ ಹಾರೈಸಿದರು.

ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ ಮಾತನಾಡಿ, “ಕಾಕ್ಲಿಯರ್ ಇಂಪ್ಲಾಂಟ್ ಸೌಲಭ್ಯದ ಕುರಿತು ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದ್ದು, ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಇಂತಹ ಅತ್ಯಾಧುನಿಕ ಚಿಕಿತ್ಸೆ ಸೇವೆಗಳನ್ನು ಇನ್ನಷ್ಟು ವಿಸ್ತರಿಸಲಾಗುವುದು” ಎಂದು ತಿಳಿಸಿದರು.

ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಗೆ ಸಾಮಾನ್ಯವಾಗಿ ರೂ. 7.50 ಲಕ್ಷದಿಂದ ರೂ.15 ಲಕ್ಷದವರೆಗೆ ವೆಚ್ಚವಾಗುತ್ತದೆ. ಆದರೆ ಸರ್ಕಾರದ ನಾನಾ ಯೋಜನೆಗಳಡಿ ಅರ್ಹ ಫಲಾನುಭವಿಗಳು ಈ ಸೌಲಭ್ಯವನ್ನು ಪಡೆಯಬಹುದಾಗಿದೆ. ಇಂತಹ ಶಸ್ತ್ರಚಿಕಿತ್ಸೆಗಳನ್ನು ನೆರವೇರಿಸಲು ಅಗತ್ಯವಿರುವ ಎಲ್ಲಾ ಆಧುನಿಕ ಸೌಲಭ್ಯಗಳು ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಲಭ್ಯವಿವೆ.

ಆಸ್ಪತ್ರೆಯ ವಾಕ್-ಶ್ರವಣ ವಿಭಾಗದಲ್ಲಿ ನಡೆದ ಸ್ವಿಚ್ ಆನ್ ಕಾರ್ಯಕ್ರಮದಲ್ಲಿ ಒಂದೂವರೆ ವರ್ಷದ ಮಗುವಿಗೆ ಮೊದಲ ಬಾರಿಗೆ ಧ್ವನಿ ಕೇಳಿಸಿದಾಗ ಮಗು ಸಂತಸದಿಂದ ಪ್ರತಿಕ್ರಿಯಿಸಿತು. ವಾಕ್-ಶ್ರವಣ ತಜ್ಞರಾದ ಶ್ರೀ ಸಂತೋಷ್ ಹಾಗೂ ಕುಮಾರಿ ರಕ್ಷಿತಾ ಅವರು ಈ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಿರ್ವಹಿಸಿದರು.

ಶಸ್ತ್ರಚಿಕಿತ್ಸೆ ಪಡೆದ ಮಗುವಿನ ಪಾಲಕರು ಮಾತನಾಡಿ, “ನಮ್ಮ ಮಗುವಿನ ಜೀವನದಲ್ಲಿ ಹೊಸ ಆಶಾಕಿರಣ ಮೂಡಿದೆ. ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ಸೇವೆಯಿಂದ ನಮ್ಮ ಮಗುವಿನ ಭವಿಷ್ಯದ ಬಗ್ಗೆ ಹೊಸ ಭರವಸೆ ಮೂಡಿದೆ” ಎಂದು ಕೃತಜ್ಞತೆ ಸಲ್ಲಿಸಿದರು.

ಮಗುವಿಗೆ ಕೇಕ್ ಹಾಗೂ ಭಾವಚಿತ್ರವನ್ನು ನೀಡಿ ಸಂಭ್ರಮಿಸಲಾಯಿತು. ಮಗುವಿನ ಪಾಲಕರು, ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಏಳು ದ್ವೀಪಗಳ ಅಭಿವೃದ್ಧಿ, ಕಾರವಾರ ವಿಮಾನ ನಿಲ್ದಾಣ ವಿಸ್ತರಣೆಗೆ ಸಚಿವ ಸಂಪುಟ ಅಸ್ತು

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ ಮತ್ತು ಅಂಕೋಲಾ ತಾಲ್ಲೂಕುಗಳ ವ್ಯಾಪ್ತಿಯ...

ಗ್ರೌಂಡ್ ರಿಪೋರ್ಟ್ | ‘ಕಟ್‌ ಅಂಡ್‌ ಪೇಸ್ಟ್‌’ ವೀಡಿಯೊಗಳ ಹಿಂದೆ ಸಮಾಜದ ನೆಮ್ಮದಿ ಕಳೆದುಕೊಳ್ಳಬಾರದು

'ಎಡಿಟ್‌' ಅಥವಾ 'ಕಟ್‌ ಅಂಡ್‌ ಪೇಸ್ಟ್‌' ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುವ...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...

ಚಿಂತಾಮಣಿ | ರಿಯಲ್ ಎಸ್ಟೇಟ್ ದಂಧೆ ಬಿಟ್ಟು ಬಡವರ ನೆರವಿಗೆ ಬನ್ನಿ, ಆಡಳಿತಾರೂಢ ಸರ್ಕಾರಕ್ಕೆ ಜೆ.ಕೆ.ಕೃಷ್ಣಾರೆಡ್ಡಿ ಆಗ್ರಹ

ಜೆಡಿಎಸ್ ಪಕ್ಷವು ಎಂದಿಗೂ ರೈತರ ಹಿತರಕ್ಷಣೆಗೆ ಬದ್ಧವಾಗಿದ್ದು,ಆಡಳಿತಾರೂಢ ಸರ್ಕಾರವು ರಿಯಲ್ ಎಸ್ಟೇಟ್...