ವಿಜಯಪುರ | ಅಪ್ರಾಪ್ತೆಯರ ಮೇಲಿನ ಅತ್ಯಾಚಾರ ಖಂಡನೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಐಎಂಎಸ್ಎಸ್ ಆಗ್ರಹ

Date:

ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಅಪ್ರಾಪ್ತೆಯರ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಅಮಾನವೀಯ ಹತ್ಯೆ ಪ್ರಕರಣಗಳನ್ನು ತೀವ್ರವಾಗಿ ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್ಎಸ್) ವಿಜಯಪುರ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು.

- Advertisement -

ಮನವಿಯಲ್ಲಿ, “ಪಶ್ಚಿಮ ಬಂಗಾಳದ ಬಾರುಪುರ್‌ನಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹಿಂಸಿಸಿದ ಬಳಿಕ ಬಾವಿಗೆ ಎಸೆದು ಹತ್ಯೆ ಮಾಡಿರುವ ಘಟನೆ ಹಾಗೂ ರಾಜಸ್ಥಾನದ ಶ್ರೀಗಂಗಾನಗರದಲ್ಲಿ 13 ವರ್ಷದ ಬಾಲಕಿಯನ್ನು ಮಾರಾಟ ಮಾಡಿ ಹಲವು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆಗೈದಿರುವ ಘಟನೆಗಳು ದೇಶವನ್ನೇ ಬೆಚ್ಚಿಬೀಳಿಸಿದ್ದು, ಇವು ನಾಗರಿಕ ಸಮಾಜ ತಲೆತಗ್ಗಿಸುವಂತಹ ಕೃತ್ಯಗಳಾಗಿವೆ” ಎಂದು ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ರಾಜಸ್ಥಾನ ಸರ್ಕಾರ ಜನರ ಆಕ್ರೋಶಕ್ಕೆ ಸ್ಪಂದಿಸಿ ನಾಲ್ಕು ಹೋಟೆಲ್‌ಗಳನ್ನು ನೆಲಸಮಗೊಳಿಸಿರುವ ಕ್ರಮವನ್ನು ಉಲ್ಲೇಖಿಸಿದ ಸಂಘಟನೆ, “ಎರಡೂ ಪ್ರಕರಣಗಳಲ್ಲಿನ ಎಲ್ಲ ಆರೋಪಿಗಳಿಗೆ ತ್ವರಿತ ಹಾಗೂ ತೀವ್ರ ಶಿಕ್ಷೆ ವಿಧಿಸಬೇಕು. ಯಾವುದೇ ಕಣ್ಣೊರೆಸುವ ತನಿಖೆ ಅಥವಾ ನ್ಯಾಯ ವಿಳಂಬವನ್ನು ಜನರು ಸಹಿಸುವುದಿಲ್ಲ” ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿದ್ದೀರಾ? ದಾವಣಗೆರೆ | ಪೋಕ್ಸೊ ಪ್ರಕರಣ; ಪಂಚಮಸಾಲಿ ಪೀಠದ ವಚನಾನಂದ ಶ್ರೀಗೆ ಜಾಮೀನು

“ದೇಶಾದ್ಯಂತ ಮಹಿಳೆಯರು, ಹೆಣ್ಣುಮಕ್ಕಳ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸಾಮೂಹಿಕ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲತೆಯನ್ನು ನಿಯಂತ್ರಿಸುವುದು, ಮದ್ಯಪಾನ ಹಾಗೂ ಮಾದಕ ವಸ್ತುಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದು, ಹೆಣ್ಣುಮಕ್ಕಳ ಘನತೆ ಹಾಗೂ ಗೌರವವನ್ನು ಕಾಪಾಡುವ ಸಾಮಾಜಿಕ ವಾತಾವರಣ ನಿರ್ಮಿಸಬೇಕು” ಎಂದು ಎಐಎಂಎಸ್ಎಸ್ ಆಗ್ರಹಿಸಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಎಐಎಂಎಸ್ಎಸ್ ಜಿಲ್ಲಾ ಕಾರ್ಯದರ್ಶಿ ಶಿವಬಾಳಮ್ಮ ಕೊಂಡಗೂಳಿ, ಜಂಟಿ ಕಾರ್ಯದರ್ಶಿ ಶಿವರಂಜನಿ ಹಾಗೂ ಸದಸ್ಯೆ ಚಾಂದಬಿ ನಧಾಪ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ದೌರ್ಜನ್ಯ ತಡೆ ಕಾಯ್ದೆ ಕುರಿತು ಜಾಗೃತಿ: ಕಾನೂನು ಅರಿವು ಬೆಳೆಸಿಕೊಳ್ಳಲು ಕರೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ...

6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್

ರಾಷ್ಟ್ರಪತಿ ಭವನವು ಸೋಮವಾರ ಹೊರಡಿಸಿದ ಅಧಿಕೃತ ಪ್ರಕಟಣೆಯ ಪ್ರಕಾರ, ರಾಷ್ಟ್ರಪತಿಯವರು ಕರ್ನಾಟಕ...

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...