ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ, ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ ಕಾರು ಅಪಘಾತಕ್ಕೀಡಾಗಿದ್ದು, ವೀಣಾ ಕಾಶಪ್ಪನವರು ಹಾಗೂ ಕಾರನಲ್ಲಿದ್ದ ಓರ್ವ ವ್ಯಕ್ತಿಗೆ ಗಾಯಗಳಾಗಿರುವ ಘಟನೆ ನಡೆದಿದೆ.
ವಿಜಯಪುರ ನಗರದಲ್ಲಿ ಸೋಮವಾರ ನಡೆದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭಾಗಿಯಾಗಿದ್ದ ಅಖಿಲ ಭಾರತ 70ನೇ ಸಹಕಾರ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಈ ಸುದ್ದಿ ಓದಿದ್ದೀರಾ? ಉಡುಪಿ | ನಾಲ್ವರ ಹತ್ಯೆ ಪ್ರಕರಣ; ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದಾತನ ವಿರುದ್ಧ ‘ಕೇಸ್’ ದಾಖಲು
ವಿಜಯಪುರ ನಗರದ ಸಿಂದಗಿ ಬೈಪಾಸ್ ಬಳಿ ಈ ಅಫಘಾತ ನಡೆದಿದ್ದು, ಬೈಕ್‌ಗೆ ಕಾರು ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಮುಂದಿನ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವ ವೀಣಾ ಅವರನ್ನು ಸ್ಥಳೀಯ ಜೆಎಸ್‌ಎಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.