ವಿಜಯಪುರ | ಅಂಬೇಡ್ಕರ್ ವಿಚಾರಧಾರೆಗಳನ್ನು ಬ್ರಾಹ್ಮಣೀಕರಿಸುವ ಸಂಚು ನಡೆಯುತ್ತಿದೆ: ಚಿಂತಕ ಶಿವಸುಂದರ್ ಆತಂಕ

Date:

ಸಂಘ ಪರಿವಾರಗಳು ಡಾ. ಬಿ ಆರ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಒಪ್ಪಿಕೊಂಡಂತೆ ನಾಟಕವಾಡಿ, ಅವುಗಳಿಗೆ ಸಂಘ ದೀಕ್ಷೆ ಕೊಡುವ ಮೂಲಕ ಅವರ ಚಿಂತನೆಗಳನ್ನು ವ್ಯವಸ್ಥಿತವಾಗಿ ಬ್ರಾಹ್ಮಣೀಕರಿಸುವ ಮತ್ತು ಕೊಲ್ಲುವ ಷಡ್ಯಂತ್ರ ನಡೆಸುತ್ತಿವೆ ಎಂದು ಪ್ರಗತಿಪರ ಚಿಂತಕ ಶಿವಸುಂದರ್ ಆತಂಕ ವ್ಯಕ್ತಪಡಿಸಿದರು.

- Advertisement -

ವಿಜಯಪುರ ನಗರದ ದರ್ಬಾರ್ ಮೈದಾನದಲ್ಲಿ ಮೇ ಸಾಹಿತ್ಯ ಮೇಳ ಬಳಗ, ದಲಿತ ಮತ್ತು ಪ್ರಗತಿಪರ ಸಂಘಟನೆಯ ಆಶ್ರಯದಲ್ಲಿ ಹಮ್ಮಿಕೊಂಡಿರುವ ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಡಾ. ಬಿ ಆರ್ ಅಂಬೇಡ್ಕರ್ ಇಂದು ಎಲ್ಲರಿಗೂ ಒಂದು ರೀತಿ ಫ್ಯಾಷನ್ ಆಗತೊಡಗಿದ್ದಾರೆ. ಎಲ್ಲರೂ ಅವರನ್ನು ಒಪ್ಪಿಕೊಂಡಂತೆ ನಾಟಕವಾಡುತ್ತಿದ್ದಾರೆ. ನಮ್ಮ ತಲೆಯಲ್ಲಿ ಅಂಬೇಡ್ಕರ್ ಚಿಂತನೆಗಳ ಬದಲಿಗೆ ಸಂಘ ಪರಿವಾರದ ಪಿತಾಮಹ ಸಾವರ್ಕರ್ ಚಿಂತನೆಗಳನ್ನು ಬಿತ್ತತೊಡಗಿದ್ದಾರೆ. ಅಂಬೇಡ್ಕರ್ ಅವರನ್ನು ಸೈದ್ಧಾಂತಿಕವಾಗಿ ಬ್ರಾಹ್ಮಣೀಕರಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದರು.

“ಎಸ್‌ಐಆರ್ ಕುರಿತ ವಿಷಯಗಳನ್ನು ಚುನಾವಣೆ ಬಳಿಕ ಚರ್ಚಿಸಲಾಗುವುದೆಂದು ಹೇಳುವ ಮೂಲಕ ಚುನಾವಣೆ ಆಯೋಗದಂತೆಯೇ ಸುಪ್ರೀಂ ಕೋರ್ಟ್ ಕೂಡ ಬಿಜೆಪಿ ಜತೆಗೆ ಕೈಜೋಡಿಸದಂತೆ ಭಾಸವಾಗುತ್ತಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ>ಪ್ರಸ್ತುತ ಭಾರತಕ್ಕೆ ಡಾ. ಬಿ ಆರ್‌ ಅಂಬೇಡ್ಕರ್‌ ಅವರು ಏಕೆ ಅನಿವಾರ್ಯ?

“ಡಾ. ಬಿ ಆರ್ ಅಂಬೇಡ್ಕರ್ ಸಂವಿಧಾನ ಬದ್ಧವಾಗಿ ನೀಡಿರುವ ಮತದಾನದ ಹಕ್ಕನ್ನು ದಮನಿಸುವ ನಿಟ್ಟಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಹೆಸರಿನಲ್ಲಿ ಮೋದಿ ಸರ್ಕಾರ ದೇಶದ ಪ್ರಜೆಗಳ ಹಕ್ಕುಗಳ ಮೇಲೆ ಆಕ್ರಮಣ ಮಾಡಿದೆ. ಲಕ್ಷಾಂತರ ಜನರ ಮತದಾನದ ಹಕ್ಕನ್ನೇ ನಿರಾಕರಿಸುವ ತಂತ್ರ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪುಸ್ತಕ ಮೇಳದ ಬಸವರಾಜ ಸೂಳಿಬಾವಿ, ಹಿರಿಯ ಪತ್ರಕರ್ತ ಅನಿಲ ಹೊಸಮನಿ, ಚಿಂತಕ ಅವಿನಾಶ ಟಿ ಜಿ, ಎಸ್‌ಪಿಟಿ ಪರಮೇಶ್ವರ ನಾಯಕ, ಧರ್ಮರಾಜ ನಾಯಕ, ಈಶ್ವರ ತೊರವಿ, ಎಸ್ ಎಲ್ ಇಂಗಳೇಶ್ವರ, ಮೋಹನ ಮೇಟಿ, ಪವನ ತೊರವಿ, ತುಕಾರಾಮ ಚಂಚಲಕರ, ಸಿದ್ದಲಿಂಗ ಬಾಗೇವಾಡಿ, ಲಕ್ಷ್ಮಣ ಹಂದ್ರಾಳ, ಸಾಹೇಬ ಲಾಲ ನದಾಫ್, ಶರಣು ಶಿಂಧೆ, ವಿನಾಯಕ ಗುಣಸಾಗರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...

ದಿನಸಿ ಬೆಲೆ ಏರಿಕೆ ಬರೆ; ಗ್ರಾಮೀಣ ಕುಟುಂಬಗಳ ಬಜೆಟ್‌ಗೆ ಕತ್ತರಿ

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆ ಏರಿಕೆಯ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...