ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 26ರಂದು ಬೆಳಿಗ್ಗೆ 10.30ಕ್ಕೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಂವಿಧಾನ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.
ಖ್ಯಾತ ಚಿಂತಕ, ಸಾಹಿತಿ ರಂಜಾನ್ ದರ್ಗಾ ಅವರು ಸಂವಿಧಾನದ ಆಶಯಗಳು, ಸಮಾನತೆ, ಸಹಬಾಳ್ವೆ ಹಾಗೂ ಸಾಮಾಜಿಕ ನ್ಯಾಯದ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.
ಸಂವಿಧಾನದ ಮೌಲ್ಯಗಳನ್ನು ಜನರಲ್ಲಿ ಬಿತ್ತುವ ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ಬಲಪಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ.



