ವಿಜಯಪುರ |ಸಂವಿಧಾನ ಎಲ್ಲ ಭಾರತೀಯರ ಆಸ್ತಿ ;ಪ್ರೊ ಬಿ ಎಲ್ ಲಕ್ಕಣ್ಣನವರ

Date:

ಸಂವಿಧಾನ ಯಾವುದೇ ಧರ್ಮ ಅಥವಾ ಜನಾಂಗಕ್ಕೆ ಸೀಮಿತವಾದುದಲ್ಲ. ಅದು ಇಡೀ ಭಾರತೀಯರ ಆಸ್ತಿಯಾಗಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬದುಕುವ ಹಕ್ಕು ಹಾಗೂ ಸಮಾನ ಅವಕಾಶಗಳನ್ನು ಕಲ್ಪಿಸುವ ಮಹತ್ವದ ಆಶಯ ಹೊಂದಿದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ ಬಿ ಎಲ್ ಲಕ್ಕಣ್ಣನವರ ಹೇಳಿದರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಡಾ ಬಿ ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ನ. 26ರಂದು ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನ ದಿನ | ಸಂವಿಧಾನಕ್ಕೆ ಮೋದಿ ಸರ್ಕಾರ ಮತ್ತು...

ಭಾರತವು ಸಂವಿಧಾನ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ಆಶಯಗಳು ಅಭೂತಪೂರ್ವ ಬಿಕ್ಕಟ್ಟಿಗೆ ಸಿಲುಕಿವೆ. 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ಯುಪಿ ಚುನಾವಣೆ | ಯುದ್ಧಕ್ಕೆ ಮೊದಲೇ ಉಡುಗಿ ಹೋಯಿತೇ...

ಉತ್ತರ ಪ್ರದೇಶದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್ ಹಾಕಿ ದೇಶದ ರಾಜಕಾರಣದಲ್ಲೇ ಸಂಚಲನ ಮೂಡಿಸಿತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ಮೈತ್ರಿ. ಆದರೀಗ, 2027ರ ಉತ್ತರ ಪ್ರದೇಶ ವಿಧಾನಸಭಾ...

ವಿವಿಧತೆಗಳಿಂದ ಕೂಡಿದ ಭಾರತದ ಸಮಾಜವನ್ನು ಒಗ್ಗೂಡಿಸುವ ಶಕ್ತಿ ಸಂವಿಧಾನಕ್ಕಿದೆ. ಸಂವಿಧಾನವು ಪ್ರತಿಯೊಬ್ಬ ನಾಗರಿಕನ ಹಕ್ಕು, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಆಶಯಗಳನ್ನು ಒಳಗೊಂಡಿದೆ. ವಿದ್ಯಾರ್ಥಿನಿಯರು ಸಂವಿಧಾನವನ್ನು ಆಳವಾಗಿ ಅಧ್ಯಯನ ಮಾಡಿ, ಅದರ ಮೌಲ್ಯ ಹಾಗೂ ಆಶಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದ ಪ್ರತಿಯೊಬ್ಬ ನಾಗರಿಕರೂ ಒಗ್ಗಟ್ಟಿನಿಂದ ಶ್ರಮಿಸಿದಾಗ ಮಾತ್ರ ಸಂವಿಧಾನದ ಆಶಯಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ಪ್ರೊ. ಸಕ್ಪಾಲ್ ಹೂವಣ್ಣ ಮಾತನಾಡಿ, ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೋರಾಟ, ದೂರದೃಷ್ಟಿ ಮತ್ತು ಅಪಾರ ಕೊಡುಗೆಗಳನ್ನು ವಿದ್ಯಾರ್ಥಿನಿಯರು ಅರಿತು ಸ್ಮರಿಸಬೇಕು. ಶೋಷಿತರು, ಮಹಿಳೆಯರು ಹಾಗೂ ನಿರ್ಗತಿಕರ ಘನತೆಯ ಬದುಕು ಮತ್ತು ಸಾಮಾಜಿಕ ನ್ಯಾಯವನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾದ ಸಂವಿಧಾನವು ಪ್ರತಿಯೊಬ್ಬ ಭಾರತೀಯನ ಅಭಿವೃದ್ಧಿಗೆ ಮಾರ್ಗದರ್ಶನ ನೀಡುವ ಶ್ರೇಷ್ಠ ದಾಖಲೆಯಾಗಿದೆ ಎಂದರು.

ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಕಾನೂನಾತ್ಮಕ ರಕ್ಷಣೆ ಒದಗಿಸುವ ಮೂಲಕ ಸಮಾನತೆ ಮತ್ತು ನ್ಯಾಯದ ನೆಲೆಯಲ್ಲಿ ಬದುಕುವ ಅವಕಾಶ ಕಲ್ಪಿಸಿದೆ. ಇಂತಹ ಮಹತ್ವದ ಸಂವಿಧಾನ ರೂಪಿಸುವಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಅಪಾರ ಶ್ರಮ ವಹಿಸಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಡೀನರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಡಾ ಬಿ ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಹಾಯಕ ನಿರ್ದೇಶಕ ಡಾ ಸಂದೀಪ್ ನಾಯಕ್ ಸ್ವಾಗತಿಸಿ ನಿರೂಪಿಸಿದರು. ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಪ್ರೊ. ಹನುಮಂತಯ್ಯ ಪೂಜಾರಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ. ಅನಿತಾ ನಾಟಿಕಾರ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಸಂವಿಧಾನದ ಮೌಲ್ಯಗಳು ಸಮಾನತೆ, ನ್ಯಾಯ ಮತ್ತು ಭ್ರಾತೃತ್ವದ ಸಮಾಜ ನಿರ್ಮಾಣಕ್ಕೆ ದಾರಿ ;ವಿಠಲ ಕಟಕಧೋಂಡ

ಭಾರತೀಯ ಸಂವಿಧಾನವು ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಒಳಗೊಂಡಿದ್ದು,...

ಹಾವೇರಿ | ಎಸ್ಐಆರ್ ಪಟ್ಟಿ ತಿರಸ್ಕರಿಸಿ, 2025ರ ಮತಪಟ್ಟಿ ಸ್ಥಳೀಯ ಚುನಾವಣೆಗಳನ್ನು ನಡೆಸಲು ಆಗ್ರಹ

"ಪ್ರಸಕ್ತ ಎಸ್ಐಆರ್ ಪಟ್ಟಿ ತಿರಸ್ಕರಿಸಿ, 2025ರ ಮತಪಟ್ಟಿಯನ್ನು ಪರಿಷ್ಕರಿಸಿ ಸ್ಥಳೀಯ ಚುನಾವಣೆಗಳನ್ನು...

ಗದಗ | ಸಂವಿಧಾನದ ಆಶಯಗಳ ಸಾಕಾರಕ್ಕೆ ಎಲ್ಲರೂ ಕೈಜೋಡಿಸೋಣ: ಶಾಸಕ ಎಚ್.ಕೆ. ಪಾಟೀಲ

"ಸಂವಿಧಾನವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮಾತ್ರ ಸೀಮಿತವಾಗಿಲ್ಲ. ದೇಶದ...

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು ಮೈತ್ರಿ ಧರ್ಮದ ಹೊಸ ಪಾಠ

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ,...