ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ದೆಹಲಿಯಲ್ಲಿ ಹೋರಾಟದ ಸಂದರ್ಭದಲ್ಲಿ ಲಾಠಿಚಾರ್ಜ್ ನಡೆಸಿ ಬಂಧಿಸಲಾದ ಸಿಪಿಐ(ಎಂ) ಮುಖಂಡರನ್ನು ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ, ವಿಜಯಪುರ ಜಿಲ್ಲಾ ಸಿಪಿಐ(ಎಂ) ಪಕ್ಷದ ವತಿಯಿಂದ ವಿಜಯಪುರ ನಗರದ ಗಾಂಧಿ ವೃತ್ತದಲ್ಲಿ ಮೇಣದಬತ್ತಿ ಪ್ರತಿಭಟನೆ ನಡೆಸಲಾಯಿತು.

- Advertisement -

ಕೇಂದ್ರ ಸರ್ಕಾರದ ನೀತಿಗಳು ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆ ತರುತ್ತಿದ್ದು, ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಮೊಟಕುಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಮತದಾನದ ಹಕ್ಕಿಗೆ ಧಕ್ಕೆಯಾಗುವ ಆತಂಕವಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಪ್ರಜಾಪ್ರಭುತ್ವ ವಿರೋಧಿ ನೀತಿಗಳನ್ನು ಕೈಬಿಟ್ಟು, ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬಾಗಲಕೋಟೆ | ನಿಲ್ದಾಣಗಳಿದ್ದರೂ ರಸ್ತೆಯಲ್ಲೇ ಬಸ್‌ ನಿಲುಗಡೆ; ಟ್ರಾಫಿಕ್...

ಬಾಗಲಕೋಟೆ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಬಸ್‌ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಪ್ರಯಾಣಿಕರು ಬಿಸಿಲು, ಮಳೆಯಿಂದ ರಕ್ಷಣೆ ಪಡೆಯಲು ಆಸನ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಬಸ್‌ಗಳು ನಿಲುಗಡೆಗೊಳ್ಳಲು ಪ್ರತ್ಯೇಕ ಜಾಗವನ್ನೂ ಗುರುತಿಸಲಾಗಿದೆ. ಆದರೆ, ಬಸ್‌ಗಳು ಮಾತ್ರ ನಿಲ್ದಾಣಕ್ಕೆ...

ಅಂಬಾನಿ ರಕ್ಷಣೆಗೆ ನಿಂತಿತೇ ಮೋದಿ ಸರ್ಕಾರ; ಗೆಳೆಯನ ಹಿತ...

ಭಾರತದ ಡಿಜಿಟಲ್ ಆಕಾಶದಲ್ಲಿ ಈಗ ಜಾಗತಿಕ ದೈತ್ಯ ಎಲಾನ್ ಮಸ್ಕ್ ಮತ್ತು ದೇಶೀಯ ಕುಬೇರ ಮುಖೇಶ್ ಅಂಬಾನಿ ನಡುವೆ ಮಹಾಸಮರ ಶುರುವಾಗಿದೆ. ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಇಂಟರ್‌ನೆಟ್ ನೀಡಲು ಸಜ್ಜಾಗಿರುವ ಮಸ್ಕ್ ಅವರ...

ದೆಹಲಿಯಲ್ಲಿ ನಡೆದ ಹೋರಾಟದ ವೇಳೆ ಸಿಪಿಐ(ಎಂ) ಮುಖಂಡರ ಮೇಲೆ ಲಾಠಿಚಾರ್ಜ್ ನಡೆಸಿ ಬಂಧಿಸಿರುವುದನ್ನು ಖಂಡಿಸಿದ ಪ್ರತಿಭಟನಾಕಾರರು, ಬಂಧಿತ ಮುಖಂಡರನ್ನು ಯಾವುದೇ ವಿಳಂಬವಿಲ್ಲದೆ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ ಸುರೇಖಾ ರಜಪೂತ, ಪ್ರಜಾಪ್ರಭುತ್ವದ ಹಕ್ಕುಗಳು ಮತ್ತು ಸಂವಿಧಾನಾತ್ಮಕ ಮೌಲ್ಯಗಳ ರಕ್ಷಣೆಗಾಗಿ ಜನರು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು. ಜನರ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ರಜಾಪ್ರಭುತ್ವದ ಪರ ಇರುವ ಶಕ್ತಿಗಳು ಒಂದಾಗಿ ಧ್ವನಿ ಎತ್ತಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಭೀಮರಾಯ ಪೂಜಾರಿ, ಶೇಖರ, ಸಾಬು ಗುಗದೊಡ್ಡಿ, ಲಕ್ಷ್ಮಣ ಆರ್. ಬೆಳ್ಳಪ್ಪನವರ, ರಾಜಾ ನದಾಫ್, ಮಲಿಕ್ ಸಾಬ್ ಬಾಗಲಕೋಟೆ, ಶಂಶಾದ್ದೀನ ಚಡಚಣ, ಲಾಲ್‌ಬಿ ವಾಲಿಕಾರ್, ಕುಸುಮ ಹಜಾರೆ, ನಾಗಪ್ಪ ಪೂಜಾರಿ, ರೇವಣಸಿದ್ದ ಪೂಜಾರಿ, ಮಹೇಶ್ ಶಿವಗದಗಿ, ಗೋಪಾಲ್ ಶಿವಗದಗಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ನಿಲ್ದಾಣಗಳಿದ್ದರೂ ರಸ್ತೆಯಲ್ಲೇ ಬಸ್‌ ನಿಲುಗಡೆ; ಟ್ರಾಫಿಕ್ ಕಿರಿಕಿರಿಗೆ ಪ್ರಯಾಣಿಕರು ಹೈರಾಣ

ಬಾಗಲಕೋಟೆ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಬಸ್‌ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಪ್ರಯಾಣಿಕರು ಬಿಸಿಲು,...

ಕೊಡಗು | ಕಾಫಿ ಬೆಳೆಗಾರರು ಜಿಲ್ಲೆಯ ಆರ್ಥಿಕತೆಯ ಬೆನ್ನೆಲುಬು: ಡಾ. ಮಂತರ್ ಗೌಡ

ಕಾಫಿ ಬೆಳೆಗಾರರು ಕೊಡಗು ಜಿಲ್ಲೆಯ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಕಾಫಿ ಕೃಷಿ ಮತ್ತು...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...