ವಿಜಯಪುರ | ಕ್ರಿಕೆಟ್ ಶಿಸ್ತು ಮತ್ತು ನಾಯಕತ್ವ ಬೆಳೆಸುವ ಕ್ರೀಡೆ: ಸುನೀಲ್‌ ಗೌಡ ಪಾಟೀಲ್

Date:

ಕ್ರಿಕೆಟ್ ಒಂದು ತಂಡವಾಗಿ ಒಗ್ಗಟ್ಟಿನಿಂದ ಕೆಲಸ ಮಾಡಲು ಮತ್ತು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಲು ಸ್ಪೂರ್ತಿ ನೀಡುತ್ತದೆ ಎಂದು ಶಾಸಕ ಸುನೀಲ್ ಗೌಡ ಪಾಟೀಲ್ ಹೇಳಿದರು.

- Advertisement -

ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದದಲ್ಲಿ ದಿ. ಬಿ ಎಂ ಪಾಟೀಲ ಸ್ಮರಣಾರ್ಥ ಆಯೋಜಿಸಲಾಗಿರುವ ಬಬಲೇಶ್ವರ ಪ್ರೀಮಿಯರ್ ಲೀಗ್ ಸೀಸನ್-2 ಕ್ರಿಕೆಟ್ ಟೂರ್ನಾಮೆಂಟ್ ಬ್ಯಾಟ್ ಮಾಡುವ ಮೂಲಕ ಉದ್ಗಾಟಿಸಿದ ಅವರು ಬಳಿಕ ಸಸಿಗೆ ನೀರುಣಿಸಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

“ನಮ್ಮ ತಂದೆ ದಿ. ಬಿ ಎಂ ಪಾಟೀಲ ಹೆಸರಿನಲ್ಲಿ ಟೂರ್ನಮೆಂಟ್ ಆಯೋಜನೆ ಮಾಡಿರುವುದು ಸಂತಸದ ವಿಷಯವಾಗಿದೆ. ಬಿ. ಎಂ. ಪಾಟೀಲರು ಶಿಕ್ಷಣ ಪ್ರೇಮಿಯಾಗಿದ್ದರು. ಯುವಕರು ಹೆಚ್ಚಿನ ಶಿಕ್ಷಣಕ್ಕಾಗಿ ಬೇರೆ ಊರುಗಳಿಗೆ ಅಲೆದಾಡುವುದು ಮತ್ತು ಬಡವರು ಶಿಕ್ಷಣವನ್ನು ಮೊಟಕುಗೊಳಿಸುವುದನ್ನು ತಡೆಯಲು ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆಯಲ್ಲಿ ಹೆಚ್ಚಿನ ಶಾಲೆ, ಕಾಲೇಜುಗಳನ್ನು ಮತ್ತು ಕೋರ್ಸುಗಳನ್ನು ಪ್ರಾರಂಭಿಸುವ ಮೂಲಕ ಪ್ರೋತ್ಸಾಹ ನೀಡಿದರು” ಎಂದು ಸ್ಮರಿಸಿದರು.

“ಕ್ರಿಕೆಟ್ ಟೂರ್ನಾಮೆಂಟ್ ಆಯೋಜಿಸುವುದರಿಂದ ಪ್ರತಿಭಾವಂತ ಕ್ರೀಡಾಪಟುಗಳಿಗೆ ತಮ್ಮಲ್ಲಿರುವ ಕೌಶಲ್ಯ ಹೊರಹಾಕಲು ಉತ್ತಮ ಅವಕಾಶ ಒದಗಿಸುತ್ತವೆ. ಒಗ್ಗಟ್ಟಿನಿಂದ ಹೋರಾಡಿ ಗೆಲುವು ಸಾಧಿಸಲು ಪ್ರೇರಣೆ ನೀಡುತ್ತದೆ. ಎಲ್ಲರೂ ಸ್ಪರ್ಧಾತ್ಮಕವಾಗಿ ಮತ್ತು ಸೌಹಾರ್ದಯುತವಾಗಿ ಕ್ರೀಡೆಗಳಲ್ಲಿ ಪಾಲ್ಗೋಳ್ಳಬೇಕು. ಬಿ. ಎಲ್. ಡಿ. ಇ ಸಂಸ್ಥೆ ವತಿಯಿಂದ ಶ್ರೀ ಬಿ.ಎಂ ಪಾಟೀಲ ಸ್ಪೂರ್ಟ್ಸ್ ಅಕಾಡೆಮಿ ಪ್ರಾರಂಭಿಸಿ ಮಕ್ಕಳಿಗೆ ವಿದ್ಯಾರ್ಥಿ ದಿಸೆಯಿಂದಲೇ ಕ್ರಿಕೆಟ್, ಫುಟಬಾಲ್, ವಾಲಿಬಾಲ್, ಟೆನಿಕಾಯ್ಟ್, ಟೇಬಲ್ ಟೆನಿಸ್, ಬ್ಯಾಡ್ಮಿಂಟನ್ ತರಬೇತಿ ನೀಡಲಾಗುತ್ತಿದೆ” ಎಂದರು.

“ಹಿರಿಯರ ಮಾರ್ಗದರ್ಶನದಲ್ಲಿ ಯುವಕರಿಗೆ ಶಿಕ್ಷಣ, ಕ್ರೀಡೆ, ಸಮಾಜ ಸೇವೆ, ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಲು ಪ್ರೋತ್ಸಾಹ ನೀಡಲಾಗುತ್ತಿದೆ. ಯುವಕರು ಬೆಳೆಯಲು ನಾವು ಸದಾ ಬೆಂಬಲವಾಗಿ ನಿಲ್ಲುತ್ತೇವೆ. ಯುವಶಕ್ತಿ ಮನಸ್ಸು ಮಾಡಿದರೆ ಅಸಾಧ್ಯವಾದುದದನ್ನು ಸಾಧಿಸಬಹುದು” ಎಂದು ಹೇಳಿದರು.

ಇದೇ ವೇಳೆ ಕರ್ನಾಟಕ ಪ್ರಿಮಿಯರ್ ಲೀಗ್‌ನಲ್ಲಿ ಬಿಜಾಪುರ ಬುಲ್ ತಂಡವನ್ನು ಪ್ರತಿನಿಧಿಸಿರುವ ಯುವ ಕ್ರಿಕೆಟರ್ ಅಕ್ಷಯ ಬಿರಾದಾರ ಅವರನ್ನು ಶಾಸಕರು ಸನ್ಮಾನಿಸಿ ಗೌರವಿಸಿದರು.

ಈ ಕಾರ್ಯಕ್ರಮದಲ್ಲಿ ಶಾಂತಯ್ಯ ಕರೆಗೊಳ ಸಾನಿಧ್ಯ ವಹಿಸಿದ್ದರು. ಪಿ.ಎಸ್.ಐ ಬಸನಗೌಡ ಬಿ. ಎಂ. ಮುಖಂಡರಾದ ಪ್ರಕಾಶ ಜಾಲಗೇರಿ, ಮಹೇಶ ಮಾಳಿ, ಸಿದ್ದು ಬಿಳೂರ, ಬಾಪುರಾಯ ಜಂಗಮಶೆಟ್ಟಿ, ಮಹಾಂತೇಶ ಕೊಣ್ಣೂರ, ಜಾಫರ್ ನೀಡೋಣಿ, ರಾಣಪ್ಪ ಹೊಸಮನಿ, ಹನಮಂತ ಬಡಚಿ, ಬಸವರಾಜ ಲೋಕುರಿ, ವಸಂತ ವಿಧಾತೆ, ರಾಜಗುರು ಉಳ್ಳಾಗಡ್ಡಿ‌ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಮುದಾಯಗಳ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಮೂಲಕ...

ಬೀದರ್‌ | ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ಅಣಕು ಶವಯಾತ್ರೆ

ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಹಾಗೂ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ...

ಬೀದರ್‌ | ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026–27ನೇ ಸಾಲಿನ ಧನಶ್ರೀ,...