ವಿಜಯಪುರ | ನೋಟಿಸ್‌ ನೀಡದೇ ದಲಿತ ಕುಟುಂಬಗಳ ಶೆಡ್ಡು ಧ್ವಂಸ; ದಸಂಸ ಆಕ್ರೋಶ

Date:

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಟ್ಟಿಹಾಳ ಗ್ರಾಮದಲ್ಲಿ ನೋಟಿಸ್‌ ಕೂಡ ನೀಡದೇ ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸಿರುವ ನಡೆಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗೀಯ ಸಂಚಾಲಕ ಸಂಜು ಕಂಬಾಗಿ ಮಾತನಾಡಿ, “ಕೊಲ್ಹಾರ ತಾಲೂಕಿನ ಮಟ್ಟಿಹಾಳ ಗ್ರಾಮದಲ್ಲಿ 12 ದಲಿತ ಕುಟುಂಬಗಳು ಸುಮಾರು ತಿಂಗಳುಗಳಿಂದ ಸರ್ಕಾರಿ ಗಾವಟಾನ್ ಜಾಗದಲ್ಲಿ ಶೆಡ್ಡು ನಿರ್ಮಾಣ ಮಾಡಿಕೊಂಡು ವಾಸವಾಗಿದ್ದವು. ಅಲ್ಲಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪ್ರಭಾರ ತಹಶೀಲ್ದಾರರು ಹಾಗೂ ಪೊಲೀಸ್ ಇಲಾಖೆಯವರು ಕೂಡಿಕೊಂಡು ನೋಟಿಸ್ ನೀಡದೆ ಅವರ ಶೆಡ್ಡುಗಳನ್ನು ಜೆಸಿಬಿ ಮೂಲಕ ಧ್ವಂಸಗೊಳಿಸಿದ್ದಾರೆ. ಅಲ್ಲಿರುವ ದಲಿತ ಕುಟುಂಬಗಳು ಬೀದಿಯಲ್ಲಿ ವಾಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೂ ಅದೇ ಜಾಗದಲ್ಲಿ ಸುಮಾರು 12-13 ದಿನಗಳಿಂದ ದಲಿತ ಕುಟುಂಬಗಳು ಬೀದಿಯಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡರೂ ಸಹ ಯಾವ ಅಧಿಕಾರಿಯಾಗಲಿ, ರಾಜಕಾರಣಿಯಾಗಲಿ ಬಂದಿರುವುದಿಲ್ಲ. ದಲಿತರ ಗೋಳು ಕೇಳುವವರು ಯಾರೂ ಇಲ್ಲದಂತಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ದಲಿತ ಕುಟುಂಬಗಳಿಗೆ ವಾಸ ಮಾಡಲು ಅನುಕೂಲ ಮಾಡಿಕೊಡಬೇಕು ಹಾಗೂ ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸಿರುವ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಿ ದಲಿತ ಕುಟುಂಬಗಳಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ವಿಜಯಪುರ | ರೋಹಿತ್‌ ವೇಮುಲ ಕಾಯ್ದೆ ಜಾರಿಗೆ ದವಿಪ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಮನವಿ

ಈ ವೇಳೆ ರಾಜ್ಯ ಮಹಿಳಾ ಮಹಿಳಾ ಸಂಚಾಲಾಕಿ ಪ್ರತಿಭಾ ಹೊಸಮನಿ, ಚೇತನ್ ತೋರವಿ, ಭೀಮು ಉತ್ತನಾಳ, ಸವಿತಾ ವಗ್ಗರ, ಮಹಾಂತೇಶ ರಾಠೋಡ, ವಿಜಯಿ ಮೆತ್ರಿ, ದಿಲೀಪ್ ರಣದೇವಿ ಹಾಗೂ ಶಂಕರ ಛಲವಾದಿ ಇದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಣ್ಣಪುಟ್ಟ ವಿವಾದಗಳನ್ನು ಸೌಹಾರ್ದದಿಂದ ಬಗೆಹರಿಸಿ: ಎಸ್. ಹಾಗರಗಿ

ಪರಸ್ಪರ ಮಾತುಕತೆ, ಸಮುದಾಯ ಮಧ್ಯಸ್ಥಿಕೆಯ ಮೂಲಕ ಸಣ್ಣಪುಟ್ಟ ಸಮಸ್ಯೆಗಳನ್ನು ಗ್ರಾಮದಲ್ಲೇ ಸೌಹಾರ್ದಯುತವಾಗಿ...

ವಿಜಯಪುರ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವಾರ್ಡ್ ಮಟ್ಟದ ಸಮಿತಿ ರಚನೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಮುಂದುವರಿದಿದ್ದು, ಅರ್ಹ...

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ತಾಳಿಕೋಟಿ | ₹2,500 ಬರ ಪರಿಹಾರಕ್ಕೆ ವಿರೋಧ: ಸರ್ಕಾರಕ್ಕೇ ದೇಣಿಗೆ ನೀಡಲು ರೈತ ಸಂಘ ಸಿದ್ಧತೆ

ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ₹2,500 ಬರ...