ವಿಜಯಪುರ | ಡಿಸಿ ಆನಂದ್‌ ಕೆ ದಿಢೀರ್ ಭೇಟಿ: ಎಸ್‌ಐಆರ್‌ ಪ್ರಗತಿ ಪರಿಶೀಲನೆ

Date:

ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ (ಎಸ್‌ಐಆರ್‌) ಪ್ರಗತಿಯನ್ನು ಪರಿಶೀಲಿಸಲು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ್‌ ಕೆ ಬುಧವಾರ ವಿಜಯಪುರ ನಗರದ ವಿವಿಧ ಕ್ಷೇತ್ರಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ಜೂನ್ 29ರಿಂದ ಆರಂಭಗೊಂಡಿರುವ ಮತದಾರರ ಪಟ್ಟಿ ಪರಿಷ್ಕರಣಾ ಅಭಿಯಾನ ಜಿಲ್ಲೆಯಾದ್ಯಂತ ಚುರುಕಿನಿಂದ ನಡೆಯುತ್ತಿದ್ದು, ನಗರದ ಚುನಾವಣೆ ಭಾಗ ಸಂಖ್ಯೆ–2ರ ವ್ಯಾಪ್ತಿಯಲ್ಲಿ ಮನೆಮನೆಗೆ ತೆರಳಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವನ್ನು ಜಿಲ್ಲಾಧಿಕಾರಿ ಖುದ್ದು ವೀಕ್ಷಿಸಿದರು. ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಕಾರ್ಯದ ಪ್ರಗತಿ ಕುರಿತು ಮಾಹಿತಿ ಪಡೆದ ಅವರು, ಅರ್ಹ ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಇತರೆ ಪ್ರಕ್ರಿಯೆಗಳು ಯಾವುದೇ ಲೋಪವಿಲ್ಲದೆ ನಿಯಮಾನುಸಾರ ಪೂರ್ಣಗೊಳ್ಳುವಂತೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಪರಿಷ್ಕರಣಾ ಕಾರ್ಯದಲ್ಲಿ ಪಾರದರ್ಶಕತೆ ಹಾಗೂ ನಿಖರತೆಗೆ ಹೆಚ್ಚಿನ ಆದ್ಯತೆ ನೀಡಬೇಕು, ಪ್ರತಿಯೊಂದು ಅರ್ಜಿಯನ್ನು ಸಮರ್ಪಕವಾಗಿ ಪರಿಶೀಲಿಸಿ, ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕು” ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಪರಿಶೀಲನೆ ವೇಳೆ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಚುನಾವಣಾ ನೋಡಲ್ ಅಧಿಕಾರಿಯಾದ ವಿಜಯ ಮೆಕ್ಕಳಕಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಚುನಾವಣಾ ಕಾರ್ಯಕ್ಕೆ ನಿಯೋಜಿತ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...