ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

Date:

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಬರ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.

- Advertisement -

ಅ.8ರಂದು ಸಂಜೆ 7 ಗಂಟೆಗೆ ರಾಯಚೂರಿನ ಹಟ್ಟಿಯಿಂದ ಪ್ರಯಾಣ ಆರಂಭಿಸಲಿರುವ ಡಿಸಿಎಂ ಪರಮೇಶ್ವರ ಅವರು ರಾತ್ರಿ 10 ಗಂಟೆಗೆ ವಿಜಯಪುರಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಅ.9ರಂದು ಬೆಳಿಗ್ಗೆ 8 ಗಂಟೆಯಿಂದ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ ಬರಪರಿಸ್ಥಿತಿ, ಜನ-ಜಾನುವಾರುಗಳಿಗೆ ಎದುರಾಗಿರುವ ಸಮಸ್ಯೆಗಳು ಹಾಗೂ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯುವ ಸಾಧ್ಯತೆ ಇದೆ.

ನಂತರ ಮಧ್ಯಾಹ್ನ 3.30ಕ್ಕೆ ವಿಜಯಪುರದಿಂದ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ತೆರಳಲಿರುವ ಡಿಸಿಎಂ, ರಾತ್ರಿ 8.25ರ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಗಲಭೆ | ದ್ವೇಷ ಭಾಷಣ ಮಾಡಿದ್ದ ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಕೋರಿದ್ದ ಅರ್ಜಿ ವಜಾ

ಈಶಾನ್ಯ ದೆಹಲಿ ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ ದ್ವೇಷ ಭಾಷಣದ ಆರೋಪ ಹೊತ್ತಿರುವ...

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100...

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...