ವಿಜಯಪುರ | ಬರಗಾಲ ಘೋಷಿಸಿ ಪರಿಹಾರ ಬಿಡುಗಡೆ ಮಾಡಿ: ಅರವಿಂದ ಕುಲಕರ್ಣಿ ಆಗ್ರಹ

Date:

ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಮಳೆ ಬರುವವರೆಗೆ ರೈತರು ಬಿತ್ತನೆ ಮಾಡಬಾರದು” ಎಂದು ಮುಖ್ಯಮಂತ್ರಿ ನೀಡಿರುವ ಹೇಳಿಕೆ ಸಮಸ್ಯೆಗೆ ಪರಿಹಾರವಾಗುವುದಿಲ್ಲ. ಕೇವಲ ಹೇಳಿಕೆಗಳನ್ನು ನೀಡಿ ಕೈ ತೊಳೆದುಕೊಳ್ಳುವ ಬದಲು ರೈತರ ಸಂಕಷ್ಟಕ್ಕೆ ಸ್ಪಂದಿಸಿ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿನಮನ | ಕೆವಿಎನ್: ಕನ್ನಡದ ಘನವಿವೇಕ

ಪ್ರಭುತ್ವದ ಭಾಷೆಗಳಾದ ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳು ವರ್ತಿಸುವ ಭಿನ್ನ ಬಗೆಗಳನ್ನು ಕೆವಿಎನ್ ಅವರು ವರ್ಗ ನೆಲೆಯ ಹಿನ್ನೆಲೆಯಲ್ಲಿ ನೋಡುತ್ತ ನೀಡುವ ಒಳನೋಟಗಳು ಭಾಷೆ ಮತ್ತು ಸಮಾಜದ ಸಂಬಂಧವನ್ನು ಅರ್ಥ ಮಾಡಿಕೊಳ್ಳಲು ಬೆಳಕಿಂಡಿಯಾಗಿವೆ....

ಬೌಲರ್‌ಗಳ ಎದೆಯಲ್ಲಿ ನಡುಕ ಹುಟ್ಟಿಸುತ್ತಿದ್ದ ‘ಗ್ಲೆನ್ ಮ್ಯಾಕ್ಸ್‌ವೆಲ್’ ಅಂತಾರಾಷ್ಟ್ರೀಯ...

"ಆಸ್ಟ್ರೇಲಿಯಾ ತಂಡದ ಬ್ಯಾಗಿ ಗ್ರೀನ್ ಮತ್ತು ಹಳದಿ ಜೆರ್ಸಿ ತೊಟ್ಟು ಕಣಕ್ಕಿಳಿಯುವುದು ನನ್ನ ಬದುಕಿನ ಅತ್ಯುನ್ನತ ಹೆಮ್ಮೆ. ನನ್ನ ದೇಶಕ್ಕಾಗಿ ಮೈದಾನದಲ್ಲಿ ನನ್ನ ಸರ್ವಸ್ವವನ್ನೂ ಧಾರೆಯೆರೆದಿದ್ದೇನೆ. ನನ್ನ ಬ್ಯಾಟಿಂಗ್‌ ಶೈಲಿ ಮತ್ತು ಹೊಡೆತಗಳು...

ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್...

ಅಕ್ಕಿ ಬೆಲೆ ಏರಿಕೆಯನ್ನು ಕೇವಲ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ. ಏಕೆಂದರೆ ಮಾರುಕಟ್ಟೆಯಲ್ಲಿ ಈಗ ಮಾರಾಟವಾಗುತ್ತಿರುವ ಅಕ್ಕಿ ಬಹುತೇಕ ಹಿಂದಿನ ಬೆಳೆ ವರ್ಷಗಳಲ್ಲಿ ಉತ್ಪಾದನೆಯಾಗಿ ಸಂಗ್ರಹಿಸಲ್ಪಟ್ಟಿರುವ ಅಕ್ಕಿ. ಪ್ರಸಕ್ತ...

ಈ ವರ್ಷ ಮುಂಗಾರು ಸಂಪೂರ್ಣ ವಿಫಲವಾಗಿದ್ದು, ಜೂನ್ ತಿಂಗಳು ಮುಕ್ತಾಯಗೊಂಡು ಜುಲೈ ಮೊದಲ ವಾರ ಆರಂಭವಾಗಿದ್ದರೂ ರಾಜ್ಯದ ಬಹುತೇಕ ಭಾಗಗಳಲ್ಲಿ ಸಮರ್ಪಕ ಮಳೆಯಾಗಿಲ್ಲ. ಪರಿಣಾಮ ರೈತರು ಬಿತ್ತನೆ ಕಾರ್ಯ ಆರಂಭಿಸಲು ಸಾಧ್ಯವಾಗದೇ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಈಗಾಗಲೇ ಬಿತ್ತನೆಗೆ ಮಾಡಿಕೊಂಡಿರುವ ಸಿದ್ಧತೆಗಳು ಹಾಗೂ ಕೃಷಿ ವೆಚ್ಚಗಳು ವ್ಯರ್ಥವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

“ರಾಜ್ಯ ಸರ್ಕಾರ ಕೂಡಲೇ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಬರಗಾಲ ಘೋಷಣೆ ಮಾಡಬೇಕು. ರೈತರಿಗೆ ಬೆಳೆ ನಷ್ಟ ಪರಿಹಾರ, ಬಿತ್ತನೆ ಬೀಜ, ರಸಗೊಬ್ಬರ ಸಹಾಯಧನ, ಬೆಳೆ ಸಾಲ ಮರುಪಾವತಿಗೆ ವಿನಾಯಿತಿ ಸೇರಿದಂತೆ ಅಗತ್ಯ ಪರಿಹಾರ ಪ್ಯಾಕೇಜ್ ಘೋಷಿಸಿ ರೈತರ ನೆರವಿಗೆ ಬರಬೇಕು” ಎಂದು ಅರವಿಂದ ಕುಲಕರ್ಣಿ ಸರ್ಕಾರವನ್ನು ಒತ್ತಾಯಿಸಿದರು.

“ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ತ್ವರಿತ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕೃಷಿ ವಲಯವನ್ನು ಸಂಕಷ್ಟದಿಂದ ಪಾರು ಮಾಡಬೇಕು” ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಗನಕ್ಕೇರಿದ ಅಗತ್ಯ ವಸ್ತುಗಳ ಬೆಲೆ, ಜನ ಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ: ಎಸ್.ಡಿ.ಪಿ.ಐ ಕಿಡಿ

ಇಂದು ನಾವು ದೇಶ ಮತ್ತು ರಾಜ್ಯದಲ್ಲಿ ಆಳುತ್ತಿರುವ ಸರ್ಕಾರಗಳ ಜನವಿರೋಧಿ ಮತ್ತು...

ಯಾದಗಿರಿ | ‘ಮತ ಉಳಿಸಿ, ದೇಶ ಉಳಿಸಿ’ ಅಭಿಯಾನ; ಎಸ್‌ಐಆರ್ ರದ್ದತಿಗೆ ‘ಇಂಡಿಯಾ’ ಮೈತ್ರಿಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರೋಧಿಸಿ ಹಾಗೂ...

ನುಡಿನಮನ | ಕೆವಿಎನ್: ಕನ್ನಡದ ಘನವಿವೇಕ

ಪ್ರಭುತ್ವದ ಭಾಷೆಗಳಾದ ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳು ವರ್ತಿಸುವ ಭಿನ್ನ ಬಗೆಗಳನ್ನು...

ದಕ್ಷಿಣ ಕನ್ನಡ | ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ನವೆಂಬರ್ 18ರಂದು ಮಂಗಳೂರಿನ ಪುರಭವನದಲ್ಲಿ ದ.ಕ...